Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ | ಜನನ ಮತ್ತು ಮರಣ ನೊಂದಣಿ ಪದ್ಧತಿ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

ಕರುನಾಡು ಘರ್ಜನೆ ಸುದ್ದಿ ಗದಗ  ಜು.25:ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಹೇಳಿದರು.   ನಗರದ ಜಿಲ್ಲಾಡಳಿತ ಭವನದ ಕೆಸ್ವಾನ್ ಹಾಲ್ ನಲ್ಲಿ ಗುರುವಾರ ಜನನ ಮತ್ತು ಮರಣ…

ಕರುನಾಡು ಘರ್ಜನೆ ಸುದ್ದಿ ಗದಗ  ಜು.25:ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಹೇಳಿದರು.

 

ನಗರದ ಜಿಲ್ಲಾಡಳಿತ ಭವನದ ಕೆಸ್ವಾನ್ ಹಾಲ್ ನಲ್ಲಿ ಗುರುವಾರ ಜನನ ಮತ್ತು ಮರಣ ನೊಂದಣಿ ಪದ್ಧತಿ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಜಿಲ್ಲೆಯಲ್ಲಿ ಜನನ ಮತ್ತು ಮರಣ ನೊಂದಣಿ ಪ್ರಕ್ರಿಯಲ್ಲಿ ಸರಿಯಾಗಿ ಮಾಹಿತಿದಾರರ ಹೆಸರು ಮತ್ತು ಸಹಿಯನ್ನು ಸಂಗ್ರಹಿಸಿತಕ್ಕದ್ದು ಮತ್ತು ಅರ್ಜಿದಾರರ ಶುಲ್ಕವನ್ನು ನಿಯಮಿತವಾಗಿ ಸರಕಾರಕ್ಕೆ ವಿಳಂಬ ಮಾಡದೇ ಜಮೆ ಮಾಡಬೇಕು.

 

ಕಾನೂನು ವರದಿಗಳಲ್ಲಿ ನೋಂದಣಿ ಸಂಖ್ಯೆ ಮತ್ತು ನೋಂದಣಿ ದಿನಾಂಕ ನಮೂದುಗೊಳ್ಳುವಂತೆ ಕ್ರಮವಹಿಸಬೇಕು, ನೋಂದಣಿ ಪ್ರಮಾಣ ಪತ್ರದಲ್ಲಿ ನೋಂದಣಾಧಿಕಾರಿಗಳ ರುಜು ಖಡ್ಢಾಯವಾಗಿರಬೇಕು ಹಾಗೂ ತಾಲೂಕ ಮಟ್ಟದ ಜನನ ಮತ್ತು ಮರಣ ಸಮನ್ವಯ ಸಮಿತಿ ಸಭೆಗಳು ಕಡ್ಢಾಯವಾಗಿ ಜರುಗಿಬೇಕು ಎಂದು ಸೂಚಿಸಿದರು.

 

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ ಮಾತನಾಡಿ, ನೊಂದಣಿ ಪ್ರಮಾಣ ಪತ್ರದಲ್ಲಿ ಡ್ಯೂಟಿ ಡಾಕ್ಟರ್ ರುಜುಗಳು ಆಗದಂತೆ ಎಚ್ಚರವಹಿಸಬೇಕು. ಪ್ರಾಧಿಕಾರದ ಅನುಮತಿಯಿಲ್ಲದೆ ನೋಂದಣಿ ಪ್ರಕ್ರಿಯೆಲ್ಲಿ ವಿಳಂಬವಾಗಬಾರದು. ಸರ್ಕಾರಕ್ಕೆ ಹಣ ಜಮೆ ಮಾಡಿದ ಚಲನ್ ಪ್ರತಿಗಳನ್ನು ಈ ಜನ್ಮ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು ಮತ್ತು 2019 ರಿಂದ 2022ನೇ ಸಾಲಿನ ಕಾನೂನು ಭಾಗಗಳು ಸಂರಕ್ಷಣಾಧಿಕಾರಿಗಳಿಗೆ ಹಸ್ತಾಂತರಿಸಬೇಕು ಎಂದು ಮಾಹಿತಿ‌ ನೀಡಿದರು.

 

ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ವಿಭಾಗದ ಮಾಹಿತಿಯನ್ನು ಸಭೆಗೆ ನೀಡಿದರು.

 

ಈ ಸಂದರ್ಭದಲ್ಲಿ ಜಿಲ್ಲಾ‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ವಾರ್ತಾಧಿಕಾರಿ ವಸಂತ ಮಡ್ಲೂರ, ಎಲ್ಲಾ ತಾಲೂಕಿನ ತಹಶಿಲ್ದಾರು, ಪುರಸಭೆಯ ಮುಖ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಜರಿದ್ದರು.

Editor

Leave a comment