Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ ಕೆಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ..!

ಕರುನಾಡು ಘರ್ಜನೆ ಸುದ್ದಿ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. ಹಾಗೇಯೆ ಈ ಭಾಗಗಳಲ್ಲಿ ಇಂದಿನಿಂದ ಎರಡು ದಿನಗಳ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ…

ಕರುನಾಡು ಘರ್ಜನೆ ಸುದ್ದಿ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. ಹಾಗೇಯೆ ಈ ಭಾಗಗಳಲ್ಲಿ ಇಂದಿನಿಂದ ಎರಡು ದಿನಗಳ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದರೆ, ಚಾಮರಾಜನಗರ, ಮಂಡ್ಯ, ಮೈಸೂರು, ದಾವಣಗೆರೆ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್‌ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ.

ಹಾಘೆಯೇ ರಾಜ್ಯದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಜುಲೈ 27ರ ವರೆಗೂ ಮಳೆ ಮತ್ತಷ್ಟು ಚುರುಕು ಪಡೆಯಲಿದೆ. ಇನ್ನು ಇಂದು (ಜುಲೈ 26) ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನಯ ಕಲುಬರಗಿ, ವಿಜಯಪುರ, ಯಾದಗಿರಿ, ಬೀದರ್, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಜುಲೈ 27ರ ವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯುದೆ. ಆದ್ದರಿಂದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಈ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ತುಮಕೂರು,ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದೆ.

 

Editor

Leave a comment