Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ನಕಲಿ ದಾಖಲೆ ನೀಡಿ ಪಡಿತರ ಚೀಟಿ : ಬೆಳಗಾವಿ ಜಿಲೆಯಲ್ಲಿ. ₹1.89 ಕೋಟಿ ದಂಡ ವಸೂಲಿ!

ಕರುನಾಡು ಘರ್ಜನೆ ಸುದ್ದಿ :ರಾಜ್ಯಾದ್ಯಂತ ರೇಷನ್‌ ಕಾರ್ಡ್‌ಗಳ ಪರಿಶೀಲನೆ ಕಾರ್ಯಕ್ಕೆ ಸರ್ಕಾರ ಚಾಲನೆ ನೀಡಿದೆ. ನಕಲಿ ದಾಖಲೆ ನೀಡಿ, ರೇಷನ್ ಕಾರ್ಡ್‌ ಪಡೆದವರಿಗೆ ದಂಡ ವಿಧಿಸಲಾಗುತ್ತಿದೆ. ಈ ನಡುವೆ ಬೆಳಗಾವಿ ಜಿಲ್ಲೆಯೊಂದರಲ್ಲೇ ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದಿದ್ದವರಿಂದ ಬರೋಬ್ಬರಿ…

ಕರುನಾಡು ಘರ್ಜನೆ ಸುದ್ದಿ :ರಾಜ್ಯಾದ್ಯಂತ ರೇಷನ್‌ ಕಾರ್ಡ್‌ಗಳ ಪರಿಶೀಲನೆ ಕಾರ್ಯಕ್ಕೆ ಸರ್ಕಾರ ಚಾಲನೆ ನೀಡಿದೆ. ನಕಲಿ ದಾಖಲೆ ನೀಡಿ, ರೇಷನ್ ಕಾರ್ಡ್‌ ಪಡೆದವರಿಗೆ ದಂಡ ವಿಧಿಸಲಾಗುತ್ತಿದೆ. ಈ ನಡುವೆ ಬೆಳಗಾವಿ ಜಿಲ್ಲೆಯೊಂದರಲ್ಲೇ ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದಿದ್ದವರಿಂದ ಬರೋಬ್ಬರಿ ₹1.89 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ.ಬೆಳಗಾವಿಯಲ್ಲಿ ಕಳೆದ ಆರು ತಿಂಗಳಿಂದ ಪಡಿತರ ಪಡೆಯದ 19,969 ಚೀಟಿಗಳನ್ನು ರದ್ದು ಮಾಡಲಾಗಿದ್ದು, ನಕಲಿ ದಾಖಲೆ ನೀಡಿ ಆದ್ಯತಾ ಪಡಿತರ ಚೀಟಿ ಪಡೆದವರಿಂದ ಈವರೆಗೆ ಒಟ್ಟು ₹1.89 ಕೋಟಿ ರೂ. ದಂಡ ಕೂಡ ವಸೂಲಿ ಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ತಿಳಿಸಿದ್ದಾರೆ.

 

ಈ ಕುರಿತು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ”ಜಿಲ್ಲೆಯಲ್ಲಿ 557 ಅಂತ್ಯೋದಯ, 19,412 ಆದ್ಯತಾ ಪಡಿತರ ಚೀಟಿ ಸೇರಿ ಒಟ್ಟು 19,969 ಪಡಿತರ ಚೀಟಿದಾರರು 6 ತಿಂಗಳಿಂದ ಪಡಿತರ ಧಾನ್ಯ ಪಡೆದಿಲ್ಲ. ಹೀಗಾಗಿ, ಈ ಎಲ್ಲಪಡಿತರ ಚೀಟಿಗಳನ್ನು 2024ರ ಜುಲೈ 29ರಂದು ರದ್ದುಪಡಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.‘ಅಲ್ಲದೇ, ಸರಕಾರಿ ನೌಕರರು ಹಾಗೂ ಅನರ್ಹರು ಹೊಂದಿರುವ ಒಟ್ಟು 45,804 ಆದ್ಯತಾ ಪಡಿತರ ಚೀಟಿಗಳನ್ನು ‘ಆದ್ಯತೇತರ’ ಎಂದು ಪರಿವರ್ತಿಸಲಾಗಿದೆ. ಇಷ್ಟು ದಿನ ಆದ್ಯತಾ ಪಡಿತರ ಚೀಟಿ ಲಾಭ ಪಡೆದ ಕಾರಣ ಆ ಎಲ್ಲ ಪಡಿತರ ಚೀಟಿದಾರರಿಂದ ಒಟ್ಟು 1,88,75,946 ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

 

11,117 ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರು, 1,421 ಆದ್ಯತೇತರ ಪಡಿತರ ಚೀಟಿದಾರರು ಸೇರಿ ಒಟ್ಟು 12,538 ಫಲಾನುಭವಿಗಳು ಮೃತಪಟ್ಟಿದ್ದು, ಅವರ ವಿವರವನ್ನು ಕುಟುಂಬ ದತ್ತಾಂಶದಿಂದ ತೆಗೆಯಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ತಿಳಿಸಿದ್ದಾರೆ.

Editor

Leave a comment