Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ವಕ್ಫ ಬಿಲ್ -೨೦೨೪ ವಿರುದ್ಧ ಆಕ್ಷೇಪಣೆ ಸಲ್ಲಿಸಿ, ಜಂಟಿ ಪಾರ್ಲಿಮೆಂಟ್ ಸಮಿತಿಗೆ ಹಕ್ಕೋತ್ತಾಯ ಮಂಡಿಸಿದ – ಎಸ್.ಡಿ.ಪಿ.ಐ ಗದಗ ವಿಧಾನಸಭಾ ಕ್ಷೇತ್ರ ಸಮಿತಿ 

ಕರುನಾಡು ಘರ್ಜನೆ ಸುದ್ದಿ ಗದಗ ೧೩: ಎಸ್.ಡಿ.ಪಿ.ಐ. ಗದಗ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ದಿನಾಂಕ ೧೩/೦೯/೨೦೨೪ ರಂದು ಶುಕ್ರವಾರ ಮಧ್ಯಾಹ್ನ ೩-೩೦ ಗಂಟೆಗೆ ಗದಗ ನಗರದ ಗಾಂಧಿ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸಮಾಜದ ಹಿರಿಯರು, ಯುವಕರು, ಧಾರ್ಮಿಕ ಮುಖಂಡರು,…

ಕರುನಾಡು ಘರ್ಜನೆ ಸುದ್ದಿ ಗದಗ ೧೩: ಎಸ್.ಡಿ.ಪಿ.ಐ. ಗದಗ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ದಿನಾಂಕ ೧೩/೦೯/೨೦೨೪ ರಂದು ಶುಕ್ರವಾರ ಮಧ್ಯಾಹ್ನ ೩-೩೦ ಗಂಟೆಗೆ ಗದಗ ನಗರದ ಗಾಂಧಿ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸಮಾಜದ ಹಿರಿಯರು, ಯುವಕರು, ಧಾರ್ಮಿಕ ಮುಖಂಡರು, ಸೇರಿ ವಕ್ಫ ತಿದ್ದುಪಡೆ ಮಸೂದೆ ವಿರುದ್ಧ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷರಾದ ಬಿಲಾಲ ಗೋಕಾವಿಯವರು ವಕ್ಫ ಬಿಲ್-೨೦೨೪ ಮಸೂದೆ ಅಸಂವಿಧಾನಿಕ ಹಾಗೂ ಅಲ್ಪಸಂಖ್ಯಾತ ವಿರೋಧಿ ಬಿಲ್ ಇದಾಗಿದ್ದು ಇದನ್ನು ನಾವು ಎಂದಿಗೂ ಒಪ್ಪಿವುದಿಲ್ಲ ಎಂದು ಹೇಳಿದರು. ಅದೇ ರೀತಿ ಮುಸ್ಲಿಂ ಧರ್ಮಗುರುಗಳಾದ ಮೌಲಾನ್ ಶಮಶುದ್ದೀನ ಅಣ್ಣಿಗೇರಿ ಅವರು ಮಾತನಾಡಿ ವಕ್ಫ ಆಸ್ತಿ ಅಲ್ಲಾಹನ ಆಸ್ತಿ ಇದರಲ್ಲಿ ಸರ್ಕಾರದ ಮಧ್ಯಸ್ಥಿಕೆ ವಹಿಸುವುದು ಸರಿಯಲ್ಲ ಈ ಬಿಲ್ಲನ್ನು ನಾವು ಎಂದಿಗೂ ಒಪ್ಪುವುದಿಲ್ಲ, ಈ ಕರಾಳ ಕಾನೂನಿನ ವಿರುದ್ಧ ನಮ್ಮ ಸಮಾಜದ ಎಲ್ಲ ಯುವಕರು, ಧಾರ್ಮಿಕ ಮುಖಂಡರುಗಳು, ಸಮದಾಯದ ನಾಯಕರುಗಳು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಕರೆ ಕೊಟ್ಟರು.

ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಅನ್ವರ ಬಾಗೇವಾಡಿ ಅವರು ಮಾತನಾಡಿ ವಕ್ಫ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಫ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚಿಗೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ವಕ್ಫ ಬಿಲ್-೨೦೨೪ ತಂದಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿರುತ್ತದೆ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಫ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಹಿಡನ್ ಅಜೆಂಡ್‌ವಾಗಿರುತ್ತದೆ. ಹಾಲಿಯಲ್ಲಿರುವ ವಕ್ಫ ಕಾಯಿದೆಗೆ ಸರಿ ಸುಮಾರು ೪೦ ತಿದ್ದುಪಡಿಗಳನ್ನು ಮಾಡುವ ಮೂಲಕ ಇಡೀ ವಕ್ಫ ಕಾಯ್ದೆಯನ್ನೇ ನಾಶಗೊಳಿಸುವ ಈ ವಕ್ಫ ಬಿಲ್-೨೦೨೪ ತಂದಿರುವುದು ಇದು ಜಾತ್ಯಾತೀತ ಮೌಲ್ಯಗಳ ವಿರುದ್ಧವಾಗಿದೆ ಹಾಗೂ ತಾರತಮ್ಯಗಳೊಂದಿಗೆ ಕೂಡಿದೆ. ಆದುದರಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಈ ಬಿಲ್ ವಿರುದ್ಧ ತನ್ನ ವಿರೋಧ ವ್ಯಕ್ತಪಡಿಸುತ್ತದೆ. ಗೌರವಾನ್ವಿತ ಅಧ್ಯಕ್ಷರು ಮತ್ತು ಸಮಿತಿ ಸದಸ್ಯರು, ಜಂಟಿ ಸಂಸದೀಯ ಸಮಿತಿ, ನವದೆಹಲಿ ಇವರಿಗೆ ಈ ಪ್ರತಿಭಟನೆ ಮೂಲಕ ಆಕ್ಷೇಪಣೆಗಳಲ್ಲಿ ಸಲ್ಲಿಸುತ್ತಿದೆ ಎಂದು ಎಸ್.ಡಿ.ಪಿ.ಐ ಗದಗ ಪ್ರಧಾನ ಕಾರ್ಯದರ್ಶಿಗಳಾದ ಅನ್ವರ ಬಾಗೇವಾಡಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಹಿದಾಯತುಲ್ಲಾ ಕಾಗದಗಾರ, ಮುಸ್ತಾಕ ಕಟ್ಟಿಮನಿ, ಅನ್ವರ ಮುಲ್ಲಾ, ಹಸನ್ ನಾಗನೂರ, ಸಮೀರ ಕೊಟ್ಟೂರು, ಮುಸ್ತಾಕ ಹೊಸಮನಿ, ಅಫ್ಪಾನ್ ತರಬ್ದಾರ, ಇಬ್ರಾಹಿಂ ಕುಂದರಪಿ, ಜಾಫರ ಅಹ್ಮದ, ನೌಶಾದ ಮುಲ್ಲಾ, ಇಸ್ಮಾಯಲ್ ಅಣ್ಣಿಗೇರಿ, ಸಾದಿಕ್, ಇರ್ಫಾನ್ ಗುಳಗುಂದಿ ಸೇರಿದಂತೆ ಅನೇಕ ಕಾರ್ಯಕರ್ತರು, ಗುರುಹಿರಿಯರು, ಯುವಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Editor

Leave a comment