Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗದಗ | ಬಡವರ ಹಗಲು ದರೋಡೆಗಿಳಿದ  ಜಿಲ್ಲಾ ಆಸ್ಪತ್ರೆ..?

ಕರುನಾಡು ಘರ್ಜನೆ ಸುದ್ದಿ ಗದಗ : 17 ಕರ್ನಾಟಕ ಸರ್ಕಾರ ಬಡವರಿಗೆ,ಕಾರ್ಮಿಕರಿಗೆ ಉಚಿತವಾಗಿ ಹಾಗೂ ಉತ್ತಮ ಚಿಕಿತ್ಸೆ ಸಿಗಬೇಕು ಎಂಬ ಆಲೋಚನೆಯಿಂದ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆ ಪ್ರತಿ ತಾಲೂಕಿಗೆ ತಾಲೂಕಾ ಆಸ್ಪತ್ರೆಗಳನ್ನು ಇನ್ನೂ ಮುಂದುವರೆದು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖಾಂತರ ಬಡವರಿಗೆ…

ಕರುನಾಡು ಘರ್ಜನೆ ಸುದ್ದಿ ಗದಗ : 17 ಕರ್ನಾಟಕ ಸರ್ಕಾರ ಬಡವರಿಗೆ,ಕಾರ್ಮಿಕರಿಗೆ ಉಚಿತವಾಗಿ ಹಾಗೂ ಉತ್ತಮ ಚಿಕಿತ್ಸೆ ಸಿಗಬೇಕು ಎಂಬ ಆಲೋಚನೆಯಿಂದ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆ ಪ್ರತಿ ತಾಲೂಕಿಗೆ ತಾಲೂಕಾ ಆಸ್ಪತ್ರೆಗಳನ್ನು ಇನ್ನೂ ಮುಂದುವರೆದು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖಾಂತರ ಬಡವರಿಗೆ ಉಚಿತವಾಗಿ ಹಾಗೂ ಕಡಿಮೆ ದರಗಳಲ್ಲಿ ಮಲ್ಟಿ ಸ್ಪೆಷಾಲಿಟಿ ಚಿಕಿತ್ಸೆಗಳನ್ನು ಒದಗಿಸಬೇಕಾಗಿರುವುದು ಸರ್ಕಾರದ ಕರ್ತವ್ಯವಾಗಿದೆ.

 

ಆದರೆ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಇಲ್ಲಿಯವರೆಗೂ ಉಚಿತ ಹಾಗೂ ಕಡಿಮೆ ದರಗಳಲ್ಲಿ ಚಿಕಿತ್ಸೆ ಸಿಗುತ್ತಿತ್ತು.ಸೆಪ್ಟಂಬರ್ 1 ನೇ ತಾರೀಖಿನಿಂದ ಒಮ್ಮಿಂದೊಮ್ಮೆಲೆ ಎಲ್ಲಾ ಚಿಕಿತ್ಸಾ ದರಗಳು ಮೂರು ಪಟ್ಟು ಹೆಚ್ಚಾಗಿವೆ.ಇದಕ್ಕೆಲ್ಲ ಕಾರಣ ಅಲ್ಲಿನ ಹಿಟ್ಲರ್ ಮನಸ್ಥಿತಿಯ ಜಿಮ್ಸ್ ನ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ.

 

ಕರ್ನಾಟಕ ಸರ್ಕಾರದ ಯಾವುದೇ ಆದೇಶವಿಲ್ಲದೆ ಏಕಾಏಕಿ ಎಲ್ಲಾ ಚಿಕಿತ್ಸಾ ದರಗಳನ್ನು ಮೂರು ಪಟ್ಟು ಹೆಚ್ಚಿಸಿದ್ದಾರೆ.ಈ ಹಿಂದೆ ಒಬ್ಬ ಬಡ ರೋಗಿ ಎಕ್ಸರೇ ಮಾಡಿಸಿದರೆ 50 ರೂಪಾಯಿಗಳ ದರ ನಿಗದಿ ಮಾಡುತ್ತಿದ್ದರು.ಆದರೆ ಈಗ ಅದೇ ಎಕ್ಸರೇ ದರ 200 ರೂಪಾಯಿಗಳು.ಬರೀ ಎಕ್ಸರೇ ದರನೇ ಈಗಾದರೆ ಎಮ್.ಆರ್.ಆಯ್ ಸ್ಕ್ಯಾನಿಂಗ್ ದರ ಬಡವರಿಗೆ ನಿಲುಕದ ಹಾಗೆ ಇದೆ.

 

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ದರಗಳು ತುಂಬಾ ದುಬಾರಿಯಾಗಿರುತ್ತವೆ ಅಂತ ಬಡವರು ಸರ್ಕಾರಿ ಆಸ್ಪತ್ರೆಗೆ ಬಂದರೆ ಇಲ್ಲಿಯೂ ಅಂತಹ ಸ್ಥಿತಿ ನಿರ್ಮಾಣವಾಗಿದೆ.

 

ಧಿಡೀರ್ ದರ ಏರಿಕೆ ಬಗ್ಗೆ ಸಾರ್ವಜನಿಕರು ಜಿಮ್ಸ್ ನ ವೈದ್ಯಕೀಯ ಅಧೀಕ್ಷಕರನ್ನು ಕೇಳಿದರೆ ಅಧೀಕ್ಷಕರಿಗೆನೆ ದರ ಹೆಚ್ಚಳದ ಬಗ್ಗೆ ಮಾಹಿತಿ ಇಲ್ಲ.ಇಡೀ ಆಸ್ಪತ್ರೆಯ ಆಡಳಿತ ನೋಡಿಕೊಳ್ಳುವ ಒಬ್ಬ ವೈದ್ಯಕೀಯ ಅಧೀಕ್ಷಕರಿಗೆ ಗಮನಕ್ಕೆ ತರದೆ ನಿರ್ದೇಶಕರು ಸರ್ವಾಧಿಕಾರದ ದೋರಣೆ ಹೊಂದಿದ್ದಾರೆ.

 

ಈ ನಿರ್ದೇಶಕರ ಸರ್ವಾಧಿಕಾರಿ ಧೋರಣೆ ಇದೆ ಮೊದಲಲ್ಲ ಒಬ್ಬ ದಲಿತ ಮಹಿಳೆ ಜಿಮ್ಸ್ ನ ವೈದ್ಯಕೀಯ ಅಧೀಕ್ಷಕರಾಗಿದ್ದಾರೆ.ಅವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಅವರಿಗೆ ನಿರಂತರ ಕಿರುಕುಳ ನೀಡುತ್ತಾ.ಅವರಿಗೆ ಸರಿಯಾಗಿ ಕರ್ತವ್ಯ ನಿರ್ವಹಿಸಲು ಬಿಡುತ್ತಿಲ್ಲ.

 

ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಮ್ಸ್ ಗೆ ಬೇಟಿ ನೀಡಿದಾಗ ಅಲ್ಲಿನ ಡಿ,ಗ್ರೂಪ್ ಸಿಬ್ಬಂದಿ ಅವರೆಲ್ಲರೂ ಸೇರಿ ಡಾ.ಬಾಬಾ ಸಾಹೇಬರ ಫೋಟೋವನ್ನು ನೀಡಿ ಸ್ವಾಗತ ಕೊರಲು ಅಡ್ಡಿಪಡಿಸಿ ಅವರನ್ನ ಅವಮಾನಿಸಿ ತೊಂದರೆ ಕೊಟ್ಟಿದ್ದಾರೆ.ಈ ವಿಷಯದ ಕುರಿತು ದಲಿತ ಸಂಘಟನೆಗಳು ಪ್ರಶ್ನೆ ಮಾಡಾದಾಗ ಕ್ಷಮೆ ಕೇಳಿದರು.ತಮ್ಮ ಪಟಾಲಂ ಗೆ ಅಲ್ಲಿ ಕೆಲಸ ಮಾಡುತ್ತಿರುವ ಡಿ, ಗ್ರೂಪ್ ನ ನೌಕರರ ಜಾತಿವಾರು ಮಾಹಿತಿಯನ್ನು ತೆಗೆದುಕೊಂಡು ಅವರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ.

 

ಸರ್ಕಾರದ ಯಾವುದೇ ಆದೇಶವಿಲ್ಲದೆ ಚಿಕಿತ್ಸಾ ದರಗಳನ್ನು ಹೆಚ್ಚಳ ಮಾಡಿದ ಸರ್ವಾಧಿಕಾರಿಯಾದ ನಿರ್ದೇಶಕರನ್ನು ಕೂಡಲೇ ಕರ್ನಾಟಕ ಸರ್ಕಾರ ಇವರನ್ನು ಅಮಾನತು ಮಾಡಿ ನಿರ್ದೇಶಕ ಹುದ್ದೆಯಿಂದ ಕೆಳಗಿಳಿಸಬೇಕು.ಈ ಹಿಂದೆ ಇದ್ದ ಚಿಕಿತ್ಸಾ ದರಗಳನ್ನು ಮುಂದುವರೆಸಬೇಕು ಎಂದು ಗದಗ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸುತ್ತದೆ. ಮುತ್ತು ಬಿಳಿಯಲಿ

Editor

Leave a comment