Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ದಾವಣಗೆರೆ | ಆನ್‌ಲೈನ್‌ನಲ್ಲಿ ಟ್ರೇಡಿಂಗ್ ವಂಚನೆ   91 ಲಕ್ಷ ರೂ. ಕಳೆದುಕೊಂಡ ಖಾಸಗಿ ಶಾಲಾ ಶಿಕ್ಷಕ..!

ಕರುನಾಡು ಘರ್ಜನೆ ಸುದ್ದಿ ದಾವಣಗೆರೆ: ಖಾಸಗಿ ಶಿಕ್ಷಕನಿಗೆ ವಂಚಕರು ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ  ನಡೆದಿದೆ.   ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್‌ಜಿಸಿ (ನ್ಯೂಮೌಂಟ್…

ಕರುನಾಡು ಘರ್ಜನೆ ಸುದ್ದಿ ದಾವಣಗೆರೆ: ಖಾಸಗಿ ಶಿಕ್ಷಕನಿಗೆ ವಂಚಕರು ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ  ನಡೆದಿದೆ.

 

ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್‌ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟ ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆನಂತರ ನಿಮ್ಮ ಅಕೌಂಟ್‌ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್‌ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ.ಯಾರೋ ಅಪರಿಚಿತ ವ್ಯಕ್ತಿಗಳು ಎನ್‌ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್‌ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್‌ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.ಇದೇ ರೀತಿ ಕಳೆದ ಹಲವು ತಿಂಗಳುಗಳಿಂದ ಪ್ರಕರಣಗಳು ಹೆಚ್ಚಾದರೂ ಸಾರ್ವಜನಿಕರು ಮಾತ್ರ ನಿರ್ಲಕ್ಷ್ಯದಿಂದ ದುಪ್ಪಟ್ಟು ಹಣದ ಆಸೆಗೆ ಬಿದ್ದು ಹಣ ಕಳೆದುಕೊಳ್ಳುತ್ತಿದ್ದಾರೆ.

 

 ಆನ್‌ಲೈನ್, ಟ್ರೇಡಿಂಗ್ ವಂಚನೆಯಿಂದ ಸಾಕಷ್ಟು ಜಾಗೃತವಾಗಿರಿ ಎಂದು ಪೊಲೀಸ್ ಇಲಾಖೆ, ಮಾಧ್ಯಮಗಳು ಎಷ್ಟೇ ಜಾಗೃತಿ ಮೂಡಿಸಿದರೂ ಜನರು ವಂಚಕರ ಜಾಲಕ್ಕೆ ಸಿಲುಕುತ್ತಿದ್ದಾರೆ.

Editor

Leave a comment