Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಸ್ಥಳೀಯ ಸುದ್ದಿ

ಗದಗ | ಮಹಾತ್ಮ ಗಾಂಧಿ ನರೇಗಾದಡಿ ಜಿಲ್ಲೆಯಾದ್ಯ0ತ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ.

ಕರುನಾಡು ಘರ್ಜನೆ ಸುದ್ದಿ ಗದಗ : ಅಕ್ಟೋಬರ್ 2 ರಿಂದ ಒಂದು ತಿಂಗಳ ಕಾಲ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಅಭಿಯಾನದಲ್ಲಿ ಕಾಮಗಾರಿಗಳ ಬೇಡಿಕೆ ಪಡೆಯಲು ವೇದಿಕೆ ಕಲ್ಪಿಸುವಂತ ವಿಶೇಷ ಚಟುವಟಿಕೆಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ…

ಕರುನಾಡು ಘರ್ಜನೆ ಸುದ್ದಿ ಗದಗ : ಅಕ್ಟೋಬರ್ 2 ರಿಂದ ಒಂದು ತಿಂಗಳ ಕಾಲ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಅಭಿಯಾನದಲ್ಲಿ ಕಾಮಗಾರಿಗಳ ಬೇಡಿಕೆ ಪಡೆಯಲು ವೇದಿಕೆ ಕಲ್ಪಿಸುವಂತ ವಿಶೇಷ ಚಟುವಟಿಕೆಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಸಿಇಓ ಭರತ್ ಎಸ್ ಅವರು ತಿಳಿಸಿದ್ದಾರೆ.

 

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಪ್ರತಿ ಮನೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕುರಿತು ಜಾಗೃತಿ ಮೂಡಿಸಿ ಬೇಡಿಕೆ ಸ್ವೀಕರಿಸಲಾಗುವುದು, ಕಾಮಗಾರಿಗಳ ಬೇಡಿಕೆಯ ಅರ್ಜಿಗಳನ್ನು ಸ್ವೀಕರಿಸಲು ಜಾಗೃತಿ ವಾಹನದಲ್ಲಿ ಯೋಜನೆಯ ಸಮಗ್ರ ಮಾಹಿತಿ ಒಳಗೊಂಡ ಜಿಂಗಲ್ಸ್ ಗಳಿಂದ ಅರಿವು ಮೂಡಿಸಿ ಕ್ರಿಯಾ ಯೋಜನೆ ಸಿದ್ಧಪಡಿಸುವಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಬಗ್ಗೆ ತಿಳಿಸಲಾಗುತ್ತಿದ್ದು, ಈ ಮೂಲಕ ಗ್ರಾಮದ ರೈತರಿಂದ ವೈಯಕ್ತಿಕ ಬೇಡಿಕೆಗಳನ್ನು ಸಂಗ್ರಹಿಸಲು ಬೇಡಿಕೆ ಪೆಟ್ಟಿಗೆಯನ್ನು ಗ್ರಾಮ ಪಂಚಾಯತಿಯಲ್ಲಿಟ್ಟು ಪ್ರತಿದಿನ ಸ್ವೀಕೃತವಾದ ಬೇಡಿಕೆಗಳನ್ನು ಪರಿಶೀಲಿಸಿ ಕಾಮಗಾರಿಗಳ ಪಟ್ಟಿಗೆ ಸೇರ್ಪಡೆ ಮಾಡಲು ನಿರ್ದೇಶನ ನೀಡಲಾಗಿದೆ ಎಂದರು.

 

ಆಯುಕ್ತಾಲಯದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ವೇಳಾಪಟ್ಟಿಯಂತೆ ಕಾಲಮಿತಿಯೊಳಗೆ ಸದರಿ ಪಕ್ರಿಯೆಯನ್ನು ಪೂರ್ಣಗೊಳಿಸುವಂತೆ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸೂಚಿಸಿದೆ.

 

ಯೋಜನೆಯ ಪ್ರಮುಖಾಂಶಗಳು:

*ಪ್ರತಿ ಕುಟುಂಬಕ್ಕೆ 100 ದಿನಗಳ ಕೆಲಸ ಖಾತರಿ.

*ಗಂಡು ಹೆಣ್ಣಿಗೆ ಸಮಾನ ಕೂಲಿ ಪ್ರತಿ ದಿನಕ್ಕೆ 349 ರೂ.ಗಳ

*ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರೀಕರಿಗೆ ಮತ್ತು ವಿಶೇಷ ಚೇತನರಿಗೆ ಶೇ.50ರಷ್ಟು ರಿಯಾಯಿತಿ.

*ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರುಗಳಿಗೆ ನಿರ್ವಹಿಸುವ ಕೆಲಸಕ್ಕೆ ಅಥವಾ ಕೂಲಿ ಕಾರ್ಮಿಕರಿಗೆ ಹೆಚ್ಚುವರಿಯಾಗಿ ಶೇ.10ರಷ್ಟು ರಿಯಾಯತಿ.

ಮಹಾತ್ಮಗಾಂಧಿ ನರೇಗಾದಡಿ ನೊಂದಾಯಿತ ಕುಟುಂಬವು ತಮ್ಮ ಜೀವಿತಾವಧಿಯಲ್ಲಿ 5 ಲಕ್ಷರೂಗಳ ಮಿತಿಯೊಳಗೆ ಬೇಕಾದ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಸಿ. ಆರ್. ಮುಂಡರಗಿ, ಉಪ ಕಾರ್ಯದರ್ಶಿ, ಜಿಪಂ ಗದಗ ರವರು ತಿಳಿಸಿ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.

Editor

Leave a comment