Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಭೀಕರ ರಸ್ತೆ ಅಪಘಾತ, ಹೆದ್ದಾರಿ ಸೇತುವೆ ಗೋಡೆಗೆ ಗುದ್ದಿದ ಬಸ್..!12 ಜನರ ದಾರುಣ ಸಾವು

ಕರುನಾಡು ಘರ್ಜನೆ ಸುದ್ದಿ ರಾಜಸ್ಥಾನದ : ಸಿಕಾರ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಜನರ ದುರ್ಮರಣವನ್ನು ಅಪ್ಪಿದ್ದು, 40 ಜನರಿಗೆ ಗಂಭೀರ ಗಾಯಗಳಾಗಿವೆ. ಸಲಾಸರ್ದಿಂದ ಪ್ರಯಾಣಿಕರನ್ನು ಹೊತ್ತುಕೊಂಡು ಬರುತ್ತಿದ್ದ ಬಸ್ ಸಿಕಾರ್ ಜಿಲ್ಲೆಯ ಲಕ್ಷ್ಮೀಗರ್ ಸಮೀಪದಲ್ಲಿ ಹೆದ್ದಾರಿಯ ಸೇತುವೆ…

ಕರುನಾಡು ಘರ್ಜನೆ ಸುದ್ದಿ ರಾಜಸ್ಥಾನದ : ಸಿಕಾರ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಜನರ ದುರ್ಮರಣವನ್ನು ಅಪ್ಪಿದ್ದು, 40 ಜನರಿಗೆ ಗಂಭೀರ ಗಾಯಗಳಾಗಿವೆ. ಸಲಾಸರ್ದಿಂದ ಪ್ರಯಾಣಿಕರನ್ನು ಹೊತ್ತುಕೊಂಡು ಬರುತ್ತಿದ್ದ ಬಸ್ ಸಿಕಾರ್ ಜಿಲ್ಲೆಯ ಲಕ್ಷ್ಮೀಗರ್ ಸಮೀಪದಲ್ಲಿ ಹೆದ್ದಾರಿಯ ಸೇತುವೆ ಗೊಡೆಗೆ ಗುದ್ದಿದೆ ಪರಿಣಾಮವಾಗಿ 12 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.ಇನ್ನು ಗಂಭೀರವಾಗಿ ಗಾಯಗೊಂಡಿರುವವರಲ್ಲಿ ಅನೇಕರ ಆರೋಗ್ಯದ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಲಕ್ಷ್ಮೀನಗರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಪೊಲೀಸರು ಹೇಳುವ ಪ್ರಕಾರ ಈ ಒಂದು ಘಟನೆ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ನಡೆದಿದೆ. ಸಲಾಸರ್ನಿಂದ ಬರುತ್ತಿದ್ದ ಬಸ್ ವಿಪರೀತ ವೇಗದಿಂದಾಗಿ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯ ಸೇತುವೆಯ ಗೋಡೆಗೆ ಗುದ್ದಿದೆ ಪರಿಣಾಮವಾಗಿ ಸ್ಥಳದಲ್ಲಿಯೇ 12 ಜನರು ಪ್ರಾಣ ಕಳೆದುಕೊಂಡಿದ್ದು ಬಹಳಷ್ಟು ಜನರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಸಿಕಾರ್ ಜಿಲ್ಲೆಯ ಎಸ್ಪಿ ಭುವನ್ ಭೂಷಣ್ ಹೇಳಿದ್ದಾರೆ.

ಎಸ್ ಕೆ ಆಸ್ಪತ್ರೆಯ ಅಧೀಕ್ಷಕರು ಹೇಳುವ ಪ್ರಕಾರ ಅಪಘಾತವಾದಾಗ ಸ್ಥಳದಲ್ಲಿಯೇ ಸುಮಾರು 7 ಜನರ ಸಾವನ್ನಪ್ಪಿದ್ದರು. ಆಸ್ಪತ್ರೆಗೆ ಕರೆತಂದಿದ್ದ 37 ಜನರಲ್ಲಿ ಇಬ್ಬರು ಮೃತಪಟ್ಟಿದ್ದರು. ಇನ್ನು ಮೂವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇನ್ನು ಗಾಯಾಳುಗಳಲ್ಲಿ 7 ಜನರನ್ನು ಜೈಪುರ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. 22 ರಿಂದ 23 ಜನರಿಗೆ ಇನ್ನೂ ಚಿಕಿತ್ಸೆಯು ಮುಂದುವರಿದೆ ಎಂದು ಮಹೇಂದ್ರ ಕಿಚಡ್ ಹೇಳಿದ್ದಾರೆ.

ಇನ್ನೂ ಭೀಕರ ಅಪಘಾತದ ವಿಚಾರವಾಗಿ ಮಾತನಾಡಿರುವ ರಾಜಸ್ಥಾನ ನದ ಸಿಎಂ ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿರುವ ಭಜನ್ಲಾಲ್ ಶರ್ಮಾ. ಈ ಒಂದು ಅಪಘಾತ ನಿಜಕ್ಕೂ ಹೃದಯ ವಿದ್ರಾವಕ. ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಶ್ರೀರಾಮನಲ್ಲಿ ಬೇಡಿಕೊಳ್ಳುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ನೋವನ್ನು ವ್ಯಕ್ತಪಡಿಸಿದ್ದಾರೆ.

ಪೊಲೀಸರು ಹೇಳುವ ಪ್ರಕಾರ ಈ ಘಟನೆಗೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಸದ್ಯ ತನಿಖೆಯ ನಡೆಯುತ್ತಿದ್ದು ಈ ಭೀಕರ ಅಪಘಾತ ಹೇಗಾಯಿತು ಎಂದು ಸದ್ಯದಲ್ಲಿಯೇ ಗೊತ್ತಾಗಲಿದೆ ಎಂದು ಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ವೇಗದಿಂದ ಬಂದ ಬಸ್ ಏಕಾಏಕಿ ದಿಕ್ಕುತಪ್ಪಿದಂತಾಗಿ ಸೇತುವೆಯ ಗೋಡೆಗೆ ಭೀಕರವಾಗಿ ಡಿಕ್ಕಿ ಹೊಡೆಯಿತು ಎಂದು ಹೇಳಿದ್ದಾರೆ.

Editor

Leave a comment