Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಜಮೀರ್ ಬಾಲ ಹಿಡ್ಕೊಂಡ್ ಹೋದ್ರೆ ಸಿಎಂ ಸ್ಥಾನ ಕಳೆದ್ಕೊಳ್ತೀರಿ..! ಸಿದ್ದರಾಮಯ್ಯಗೆ ಈಶ್ವರಪ್ಪ ಕಿಡಿ 

ಕರುನಾಡು ಘರ್ಜನೆ ಸುದ್ದಿ ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರಿಗೆ ಹಿಂದೂಗಳು, ರೈತರು ಹಾಗೂ ಈ ನಾಡಿನ ಮಣ್ಣಿನ ಮೇಲೆ ಗೌರವ ಇದ್ದರೆ ವಕ್ಫ್ ಹೆಸರು ಬಂದಿರುವ ಪಹಣಿಯನ್ನು ರದ್ದು ಮಾಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಕರುನಾಡು ಘರ್ಜನೆ ಸುದ್ದಿ ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರಿಗೆ ಹಿಂದೂಗಳು, ರೈತರು ಹಾಗೂ ಈ ನಾಡಿನ ಮಣ್ಣಿನ ಮೇಲೆ ಗೌರವ ಇದ್ದರೆ ವಕ್ಫ್ ಹೆಸರು ಬಂದಿರುವ ಪಹಣಿಯನ್ನು ರದ್ದು ಮಾಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಆಸ್ತಿ ವಿಚಾರದಲ್ಲಿ ಮುಸ್ಲಿಮರ ಧೋರಣೆಯಿಂದ ಅವರ ಸಮಾಜ ಅಧೋಗತಿಗೆ ಹೋಗಲಿದೆ. ಕೇವಲ ನಮ್ಮ ರಾಜ್ಯ ಅಷ್ಟೇ ಅಲ್ಲದೇ ಇತರೆ ರಾಜ್ಯದಲ್ಲಿ ಇದೇ ಬೆಳವಣಿಗೆಯಾಗುತ್ತಿದೆ. ಮುಸ್ಲಿಮರಿಗೆ ಕೇಡುಗಾಲ ಬಂದಿದೆ. ಅದಕ್ಕಾಗಿ ಇಡೀ ಹಿಂದೂ ಸಮಾಜಕ್ಕೆ ದ್ರೋಹ ಬಗೆಯುತ್ತಿದ್ದಾರೆ. ವಕ್ಫ್ ಆಸ್ತಿ ವಿವಾದದಿಂದ ಮಠ ಮಂದಿರಗಳಿಗೆ, ರೈತರಿಗೆ, ದಲಿತರಿಗೆ ಅನ್ಯಾಯ ಆಗಿದೆ ಎಂದು ಕಿಡಿಕಾರಿದ್ದಾರೆ.ಸಾಧು ಸಂತರು ಮೊದಲ ಬಾರಿಗೆ ಹಿಂದೂಗಳ ಆಸ್ತಿ ಉಳಿಸಬೇಕು ಎಂದು ಹೇಳಿಕೆ ಕೊಡುತ್ತಿದ್ದಾರೆ. ವಕ್ಫ್ ಆಸ್ತಿ ವಿವಾದದ ಬಗ್ಗೆ ಸಾಧು ಸಂತರು ಜಾಗೃತಿಯಾಗಿರೋದು ತುಂಬಾ ಸಂತೋಷದ ವಿಷಯ. ಸಾಧು ಸಂತರ ಆಹ್ವಾನದ ಮೇರೆಗೆ ಆಸ್ತಿ ಪರಿಶೀಲನೆಗೆ ಹೋಗುತ್ತಿದ್ದೇನೆ. 1.10 ಲಕ್ಷ ಎಕರೆ ವಕ್ಪ್ ಆಸ್ತಿ ಆಗಿದೆ ಎಂದು ಜಮೀರ್ ವಿಧಾನಸೌಧದಲ್ಲಿ ಹೇಳಿದ್ದಾರೆ. ಇದರ ವಿರುದ್ಧ ಜನ ಯಾವುದೇ ಕೋರ್ಟ್‍ಗೆ ಹೋಗುವ ಹಾಗೆ ಇಲ್ಲ. ಮುಸ್ಲಿಮರು ಇಲ್ಲದ ಕಡೆ ಹಾಗೂ ಶಾಲಾ ಆಸ್ತಿಯನ್ನು ವಕ್ಫ್ ಆಸ್ತಿ ಎನ್ನುತ್ತಿದ್ದಾರೆ. ವಕ್ಫ್ ಆಸ್ತಿ ಎಂದು ಇರುವ ಪಹಣಿಯನ್ನು ತಕ್ಷಣ ರದ್ದು ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.ಕೆ.ಎನ್. ರಾಜಣ್ಣನಂತಹ ಗಂಡು ಒಬ್ಬ ಸಚಿವ ಸಂಪುಟದಲ್ಲಿ ಇದ್ದಾರೆ. ಜಮೀರ್ ಅವರ ಹೇಳಿಕೆಯನ್ನು ರಾಜಣ್ಣ ಒಬ್ಬರೇ ವಿರೋಧಿಸಿದ್ದು. ಜಮೀರ್ ಬಾಲ ಹಿಡಿದುಕೊಂಡು ಹೋದರೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತೀರಿ. ಸಾಧು ಸಂತರು ದೇವರ ಶಾಪಕ್ಕೆ ಗುರಿ ಆಗ್ತೀರಿ. ಬೀರಲಿಂಗೇಶ್ವರ ದೇವರ ಆಸ್ತಿ ವಕ್ಫ್ ಆಸ್ತಿ ಎಂದು ಘೋಷಣೆ ಮಾಡಿದ್ದಾರೆ. ಬೀರಲಿಂಗೇಶ್ವರ ದೇವರು, ಕುರುಬರ ಶಾಪ ನಿಮಗೆ ತಟ್ಟುತ್ತದೆ. ಪಹಣಿ ರದ್ದು ಮಾಡದಿದ್ದರೆ, ರಾಜ್ಯದಲ್ಲಿ ಸಾಧು ಸಂತರ ನೇತೃತ್ವದಲ್ಲಿ ರಕ್ತ ಕ್ರಾಂತಿ ಆಗುತ್ತದೆ. ಸಾಧು ಸಂತರ ಸಮಾಜ ಸುಮ್ಮನೆ ಕೂರುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.ವಕ್ಪ್ ಆಸ್ತಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಯ ವಿಡಿಯೋ ವಿಚಾರವಾಗಿ, ಬೊಮ್ಮಾಯಿ ಏನು ಮೇಲಿಂದ ಇಳಿದು ಬಂದಿದ್ದಾನಾ? ಮುಸ್ಲಿಮರ ಓಟು ಪಡೆಯಲು ಯಾರು ಯಾವಾಗ ಏನು ಬೇಕಾದರೂ ಹೇಳಿಕೆ ಕೊಡಬಹುದು ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

 

 

ಪ್ರಧಾನಮಂತ್ರಿಯವರು ಈ ಬಗ್ಗೆ ಗಮನಿಸಿ ತಕ್ಷಣ ಪಾರ್ಲಿಮೆಂಟ್‍ನಲ್ಲಿ ವಕ್ಫ್ ಬಿಲ್ ಪಾಸ್ ಮಾಡಬೇಕು. ಮೋದಿ ಅವರ ಬಗ್ಗೆ ಸಿದ್ದರಾಮಯ್ಯ ಅಗೌರವವಾಗಿ, ಹಗುರವಾಗಿ ಮಾತನಾಡಿದ್ದಾರೆ. ಇದು ನಿಮ್ಮ ಯೋಗ್ಯತೆಗೆ ತಕ್ಕದ್ದಲ್ಲ. ಮೋದಿಯವರ ಬಗ್ಗೆ ಮಾತನಾಡಬೇಕಾದರೆ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಸಿಎಂ ಮೋದಿಯವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

Editor

Leave a comment