Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ.!

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆ ಮಾಡಲು ಯತ್ನಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. ನವೆಂಬರ್ 6ರಂದು ಸೈಬರ್ ವಂಚಕರು ಬಿ.ಎಸ್. ನೇಮಗೌಡ ಐಪಿಎಸ್ ಎಂಬ…

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆ ಮಾಡಲು ಯತ್ನಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.

ನವೆಂಬರ್ 6ರಂದು ಸೈಬರ್ ವಂಚಕರು ಬಿ.ಎಸ್. ನೇಮಗೌಡ ಐಪಿಎಸ್ ಎಂಬ ನಕಲಿ ಫೇಸ್‌ಬುಕ್‌ ಐಡಿಯಲ್ಲಿ ಗದಗ ಜಿಲ್ಲೆಯ ಎಸ್‌ಪಿ ಅವರ ಪೊಟೋವನ್ನು ಫ್ರೊಫೈಲ್ ಆಗಿ ಇಟ್ಟುಕೊಂಡು ಮತ್ತು ವಾಟ್ಸಾಪ್ ಡಿಪಿಯಾಗಿ ಫೊಟೊವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮೋಸ ಮಾಡಲು ಪ್ರಯತ್ನಿಸುತ್ತಿದ್ದ ಬಗ್ಗೆ ಮಾಹಿತಿ ಬಯಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಕುರಿತು ಗದಗ ಸಿಇಎನ್ ಪೊಲೀಸ್ ಠಾಣೆಯಲ್ಲಿ 71/2024 ಕಲಂ 66(ಡಿ)ಐ.ಟಿ ಆ್ಯಕ್ಟ-2008 ಮತ್ತು 319(2) ಬಿಎನ್‌ಎಸ್ ನೇ ಪ್ರಕರಣದಲಿ ಫೇಕ್ ಫೇಸ್‌ಬುಕ್‌ ಐಡಿ ಮುಖಾಂತರ ವಂಚನೆ ಮಾಡಲು ಪ್ರಯತ್ನಿಸುತ್ತಿರುವ ಕುರಿತು ಪ್ರಕರಣ ದಾಖಲಾಗಿದೆ.

 

ಸೈಬರ್ ವಂಚಕರು ಗದಗ ಎಸ್ಪಿ ಹೆಸರಿನಲ್ಲಿ ಫೇಕ್ ಫೇಸ್‌ಬುಕ್‌ ಐಡಿ ಕ್ರಿಯೆಟ್ ಮಾಡಿ ಮತು ಮೆಸೆಂಜ್‌ರ ಖಾತೆ ಹಾಗೂ ವಾಟ್ಸಾಪ್ ಖಾತೆ ತೆರೆದು ಅವುಗಳಲ್ಲಿ ಗದಗ ಜಿಲ್ಲೆಯ ಎಸ್‌ಪಿ ರವರ ಫೊಟೋವನ್ನು ಡಿಪಿ ಹಾಗೂ ಪ್ರೋಫೈಲ್ ಪೋಟೊ ಆಗಿ ಇಟ್ಟುಕೊಂಡು ಆ ಮೂಲಕ ಬೇರೆ ಬೇರೆ ಕಾರಣಗಳನ್ನು ಹೇಳಿ ಸಾರ್ವಜನಿಕರಿಗೆ ವಂಚನೆ ಮಾಡುವ ಪ್ರಯತ್ನದಲ್ಲಿದ್ದು, ಕಾರಣ ಯಾವುದೇ ಸಾರ್ವಜನಿಕರು ಮೋಸ ಹಾಗೂ ವಂಚನೆಗೆ ಒಳಗಾಗಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

Editor

Leave a comment