ಕರುನಾಡು ಘರ್ಜನೆ ಸುದ್ದಿ ನ 30 : ಗದಗ ಆಶಾ ಕಾರ್ಯಕರ್ತೆಯರಿಗೆ, ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಮತ್ತು ರಾಜ್ಯ ಸರ್ಕಾರದ ನಿಶ್ಚಿತ ಮಾಸಿಕ ಗೌರವಧನ ಹಾಗೂ ಪ್ರಣಾಳಿಕೆಯ ಭರವಸೆಯ ಮೊತ್ತ ಒಟ್ಟುಗೂಡಿಸಿ ರೂ. 15,000 ಮಾಸಿಕ ನಿಶ್ಚಿತ ಗೌರವಧನ ನೀಡಬೇಕು. ಎನ್ನುವ ಬಹುದಿನಗಳ ಬೇಡಿಕೆಯೂ ಸೇರಿದಂತೆ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಬೇಕೆಂದು ಕೋರಿ.
ನಮ್ಮ ಜಿಲ್ಲೆಯ ಉಸ್ತುವಾರಿ ಮಂತ್ರಿಗಳಾದ ತಮ್ಮ ಜಿಲ್ಲೆಯಲ್ಲಿ ನೂರಾರು ಸಂಖ್ಯೆಯ ಆಶಾ ಕಾರ್ಯಕರ್ತೆಯರಾದ ನಾವು ಹಗಲಿರುಳು ಬಡಜನರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಿ ಕೊಡಲು ಆರೋಗ್ಯ ಇಲಾಖೆಯಲ್ಲಿ ಪರಿಶ್ರಮಿಸುತ್ತಿರುವುದು ನಿಮಗೆ ತಿಳಿದಿದೆ. ನಮ್ಮಂತೆಯೇ ರಾಜ್ಯದಲ್ಲಿ ಸರಿ ಸುಮಾರು 42.000 ಆಶಾ ಕಾರ್ಯಕರ್ತೆಯರು ಮಹತ್ತರವಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸಿ ಸಮಗ್ರ ಅಭಿವೃದ್ಧಿಯ ಕುರಿತು ಸಮಾಜದ ಆರೋಗ್ಯಕರ ಬದಲಾವಣೆಗೆ ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ. ಹಾಗೆಯೇ ಕೋಎಡ್-19 ಸಂದರ್ಭದಲ್ಲಿ ಈ ಫ್ರಂಟ್ ಲೈನ್ ವಾರಿಯರ್ಸ್ ಆಗಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆಯಿಂದ ಹಿಡಿದು ಎಲ್ಲರೂ ಶ್ಲಾಘಿಸಿದ್ದಾರೆ.
ಈ ಅಸಹಾಯಕ ಬಡ ಮಹಿಳೆಯರು, ವಿಧವೆಯರು, ವಿಚ್ಛೇದಿತರನ್ನು ‘ಆಶಾ’ ಗಳನ್ನಾಗಿ ನೇಮಕ ಮಾಡಿಕೊಂಡು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲಾಗುತ್ತದೆ ಎಂಬುದು ಸರ್ಕಾರದ ಘೋಷಣೆ. ಆದರೆ ಆಶಾಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕುತ್ತಿಲ್ಲವೆಂಬುದು ವಾಸ್ತವ. ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು ಆಶಾನಿಧಿ ಪೋರ್ಟಲ್‌ನಲ್ಲಿ ಆಸ್ಟೈನ್ ದಾಖಲು ಮಾಡಬೇಕಿದ್ದು, ಆಶಾಗಳು ಮಾಡಿದ ಕೆಲಸಗಳು ದಾಖಲಾಗದೆ ಕಳೆದ 8 ವರ್ಷಗಳಿಂದ ಮಾಡಿದ ಕೆಲಸಕ್ಕೆ ಪ್ರೋತ್ಸಾಹಧನ ಸಿಗುತ್ತಿಲ್ಲ. ಹಲವಾರು ಸಮಸ್ಯೆಯಿಂದ ಆಶಾ ಕಾರ್ಯಕರ್ತೆಯರಿಗೆ ಬಹು ದೊಡ್ಡ ಪ್ರಮಾಣದ ಅನ್ಯಾಯ ಆಗುತ್ತಿದೆ’ ಸಮಸ್ಯೆಗಳ ಕುರಿತು ಆರೋಗ್ಯ ಇಲಾಖೆ ಮತ್ತು ಸರ್ಕಾರಕ್ಕೆ ಕಳೆದ 8 ವರ್ಷಗಳಿಂದ ಲೆಕ್ಕವಿಲ್ಲದಷ್ಟು ದೂರುಗಳನ್ನು ಸಲ್ಲಿಸಲಾಗಿದೆ. ಲೆಕ್ಕವಿಲ್ಲದಷ್ಟು ಸಭೆಗಳು, ಚರ್ಚೆಗಳು, ನಡೆದಿವೆ. ಇಲಾಖೆಯಿಂದ ಮತ್ತು ಸರ್ಕಾರದಿಂದ ಕೈಗೊಂಡ ಯಾವುದೇ ಕ್ರಮದಿಂದ ಸಮಸ್ಯೆ ಪರಿಹಾರವಾಗದೇ ಹಾಗೆಯೇ ಉಳಿದಿವೆ. ಆದರಿಂದಾಗಿ ಪ್ರತಿಯೊಬ್ಬ ಆಶಾ ಸಾವಿರಾರು ರೂ. ಆರ್ಥಿಕ ನಷ್ಟ ಅನುಭವಿಸಿರುವರು.
ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸಲು, ರಾಜ್ಯ ಸರ್ಕಾರ ಈಗ ನೀಡುತ್ತಿರುವ ರೂ.5000 ಮಾಸಿಕ ನಿಶ್ಚಿತ ಗೌರವಧನ ಮತ್ತು ವಿವಿಧ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ.7000 ಪ್ರೋತ್ಸಾಹಧನ ಹಾಗೂ ರಾಜ್ಯ ಸರ್ಕಾರದ ಪ್ರತಿಷ್ಠೆಯ ಐದು ಗ್ಯಾರಂಟಿಗಳ ಜೊತೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆಯ ನೀಡಿರುವ ರೂ. 3000 ಗಳನ್ನು ಒಟ್ಟುಗೂಡಿಸಿ ಮಾಸಿಕ ರೂ.15,000 ಗೌರವಧನ ನಿಗದಿ ಮಾಡಬೇಕು ಮತ್ತು ಇತರ 4 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, 13-14 ಫೆಬ್ರವರಿ 2024 ರಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಅನಿರ್ಧಿಷ್ಟ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ಹೋರಾಟದ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು. “ನನ್ನನ್ನು ನಂಬಿ, ಹೋರಾಟ ಹಿಂತೆಗೆದುಕೊಳ್ಳಿ. ಮುಂದಿನ ಕೆಲವೇ ದಿನಗಳಲ್ಲಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದರು. ಅದೇ ರೀತಿ ಸನ್ಮಾನ್ಯ ಉಪ ಮುಖ್ಯಮಂತ್ರಿಗಳೂ “ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದರು” ನಂತರದ ದಿನಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಇಲಾಖೆಯ ಸಚಿವರು. ಸಮಸ್ಯೆಗಳನ್ನು ಬಗೆಹರಿಸಲಿಲ್ಲ. ಆದರೂ ಸಂಘದಿಂದ ನಿರಂತರವಾಗಿ ಮಾನ್ಯ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಎ.ಸಿ.ಎಸ್ ಅವರ ಜೊತೆಯಲ್ಲಿ 2 ಬಾರಿ
ಸಭೆಗಳು ನಡೆದರೂ ಸಮಸ್ಯೆ ಬಗೆಹರಿದಿಲ್ಲ. ಮಾನ್ಯ ಆರೋಗ್ಯ ಸಚಿವರು, ಆರೋಗ್ಯ ಇಲಾಖೆ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಆಯುಕ್ತರು, ಎಂ.ಡಿ, ಎನ್.ಎಚ್.ಎಂ ಸೇರಿದಂತೆ ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳ ಜೊತೆಯಲ್ಲಿ 13 ಬಾರಿಸಭೆಗಳು ನಡೆದಿವೆ. ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಕರ್ತೆಯರು ಲೆಕ್ಕವಿಲ್ಲದಷ್ಟು ಸಂದರ್ಭಗಳಲ್ಲಿ ಸರ್ಕಾರದ ಮುಖ್ಯಮಂತ್ರಿ,ಉಪಮುಖ್ಯಮಂತ್ರಿ ಸಚಿವರು, ಶಾಸಕರು ಮತ್ತು ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮಸ್ಯೆ ಪರಿಹರಿಸಿ ಎಂದು.ಕೋರಿಕೊಂಡಿದ್ದಾರೆ. ಒಟ್ಟಾರೆಯಾಗಿ, ಫೆಬ್ರುವರಿ ಹೋರಾಟದ ನಂತರ ಕಳೆದ 9 ತಿಂಗಳುಗಳ ಅವಧಿಯಲ್ಲಿ ಸರ್ಕಾರ ಮತ್ತು ಇಲಾಖೆಯ ಜೊತೆಯಲ್ಲಿ ಒಟ್ಟು 15 ರಾಜ್ಯ ಮಟ್ಟದ ಸಭೆಗಳು ನಡೆದರೂ ಆಶಾ ಕಾರ್ಯಕರ್ತೆಯರ ಮಾಸಿಕ ಕನಿಷ್ಟ ಗೌರವಧನವೂ ಸೇರಿದಂತೆ ಇತರ ಪ್ರಮುಖ ಬೇಡಿಕೆಗಳಲ್ಲಿ ಯಾವೊಂದೂ ಸಮಸ್ಯೆಗೆ ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ಮತ್ತು ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಹೇಳಲು ಇಚ್ಚಿಸುತ್ತೇವೆ. ನಮ್ಮ ಎಲ್ಲಾ ಪ್ರಯತ್ನದ ಹೊರತಾಗಿಯೂ ಸರ್ಕಾರ ನಮ್ಮ
ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ.
ಆದ್ದರಿಂದ ಇದೀಗ ನಮ್ಮನ್ನು ಪ್ರತಿನಿಧಿಸುತ್ತಿರುವ ತಮ್ಮಲ್ಲಿಗೆ ಬಂದಿದ್ದೇವೆ. ಆಶಾ ಕಾರ್ಯಕರ್ತೆಯರು ಎಂತಹ ಮಹತ್ವದ ಸೇವೆಯಲ್ಲಿ ತೊಡಗಿದ್ದಾರೆ ಎಂದು ತಿಳಿದಿದೆ. ಹಗಲಿರುಳು ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ಅವರಿಗೆ ಕನಿಷ್ಟ ಜೀವನ ನಡೆಸುವಷ್ಟು ಗೌರವಧನ ಇಲ್ಲ ಎನ್ನುವುದು ಕೂಡಾ ತಮಗೆ ತಿಳಿದಿದೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.15,000 ಗೌರವಧನ ವನ್ನು ನಿಗದಿಪಡಿಸುವುದೂ ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇವೆ. ಈ ಕುರಿತು ಡಿಸೆಂಬರ್ 9ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಎತ್ತಿ. ಚರ್ಚಿಸಿ ಸರ್ಕಾರದ ಗಮನ ಸೆಳೆದು ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರವನ್ನು ಆಗ್ರಹಿಸಬೇಕೆಂದು ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಈ ಮೂಲಕ ತಮ್ಮನ್ನು ಕೋರುತ್ತೇವೆ. ಈ ಸಂದರ್ಭದಲ್ಲಿ ಗದಗ ಜಿಲ್ಲಾ ಆಶಾ ಸಂಘದ ಜಿಲ್ಲಾ ಅಧ್ಯಕ್ಷಳಿಯಾದ ಭಾಗ್ಯಜ್ಯೋತಿ ಹಡಪದ, ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀ ಪೂಜಾರ್, ಜಿಲ್ಲಾ ಉಪಾಧ್ಯಕ್ಷರಾದ ಪ್ರೇಮ ಪಾಟೀಲ್, ಅನ್ನಪೂರ್ಣ ಕಟವ, ಜಿಲ್ಲಾ ಸಮಿತಿ ಸದಸ್ಯರಾದ ಬಸವನ್ನೆಮ್ಮಾ ಓಲೇಕಾರ್, ಗೌರಿ, ಶಾಹೀನ, ಗೀತ ಭಜಂತ್ರಿ, ಹಾಗೂ ಆಶಾ ಕಾರ್ಯಕರ್ತೆಯರು ಭಾಗಿಯಾಗಿದ್ದರು.
1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಈಗಿರುವ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು ರೂ.12000 ಮತ್ತು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ರೂ 3000 ಹೆಚ್ಚಳ ಸೇರಿಸಿ, ಒಟ್ಟು ರೂ. 15000 ಮಾಸಿಕ ಗೌರವಧನ ನಿಗದಿಯಾಗಬೇಕು.
2. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ ರೂ.2000ರಷ್ಟು ಗೌರವಧನವನ್ನು ಹೆಚ್ಚಿಗೆ ಮಾಡಬೇಕು.
3. ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್ ಡಾಟಾ ಒದಗಿಸಿ. ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿ ಮಾಡಿ.ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೊ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ.
4. 60 ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ರೂ.3 ಲಕ್ಷಕ್ಕೆ ಹೆಚ್ಚಿಸುವುದು.
5. ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು. ಆಶಾ ಸೇವೆಯಲ್ಲಿ ಇದ್ದಾಗ ಆಗುವ ಅನಾಹುತಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಿಕೊಳ್ಳಬೇಕು.
6. ಪ್ರತೀ ವರ್ಷ ಪ್ರತೀ ಆಶಾ ಕಾರ್ಯಕರ್ತೆಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಮಾಡಬೇಕು.
7. ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್-ಇಎಸ್‌ಐ ಸೌಲಭ್ಯ ನೀಡಿರಿ.