Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕೊಪ್ಪಳ | ಹನುಮಮಾಲಾ ವಿಸರ್ಜನೆ ಗೆ ಪೂರ್ಣ ತಯಾರಿ ಅಂಜನಾದ್ರಿ ಬೆಟ್ಟದಲ್ಲಿ ಕ್ಷಣಗಣನೆ..!

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ: ಪೌರಾಣಿಕ ಪ್ರಸಿದ್ಧ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಡಿ.12 ಮತ್ತು 13 ರಂದು ನಡೆಯಲಿರುವ ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇದೆ. ಭಕ್ತರ ಸ್ವಾಗತಕ್ಕೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕಿಷ್ಕಿಂಧ…

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ: ಪೌರಾಣಿಕ ಪ್ರಸಿದ್ಧ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಡಿ.12 ಮತ್ತು 13 ರಂದು ನಡೆಯಲಿರುವ ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇದೆ. ಭಕ್ತರ ಸ್ವಾಗತಕ್ಕೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕಿಷ್ಕಿಂಧ ಪ್ರದೇಶ ಮದುವೆ ಮನೆಯಂತೆ ಸಿದ್ಧಗೊಂಡಿದೆ.

ಹನುಮ ಮಾಲೆ ಧರಿಸಿ, ವ್ರತ ಕೈಗೊಂಡಿರುವ ರಾಜ್ಯಾದ್ಯಂತ ನಾನಾ ಭಾಗದ ಲಕ್ಷಂತರ ಭಕ್ತರು, ಈಗಾಗಲೇ ಅಂಜನದ್ರಿ ಕಡೆ ಮುಖ ಮಾಡಿದ್ದಾರೆ. ಡಿ.12ರ ಸಂಜೆ ವೇಳೆ ಬಹುತೇಕರು ಗಂಗಾವತಿ, ಹುಲಗಿ ತಲುಪಲಿದ್ದಾರೆ. ಈ ಹಿನ್ನೆಲೆ ಕೊಪ್ಪಳ ಜಿಲ್ಲಾಡಳಿತ ಎಲ್ಲ ಸಿದ್ಧತೆ ಕೈಗೊಂಡಿದೆ. ಎಡಿಸಿ ಸಿದ್ದರಾಮೇಶ್ವ ಮತ್ತು ಎಸಿ ಕ್ಯಾ.ಮಹೇಶ ಮಾಲಗಿತ್ತಿ ಖುದ್ದು ಭೇಟಿ ನೀಡಿ, ಸಿದ್ಧತೆ ಪರಿಶೀಲನೆ ಮಾಡುತ್ತಿದ್ದಾರೆ. ವ್ಯವಸ್ಥೆಯಲ್ಲಿ ಯಾವುದೇ ರೀತಿಯಲ್ಲಿ ನಿರ್ಲಕ್ಷ ಕಾಣಬಾರದು ಎನ್ನುವ ಉದ್ದೇಶದಿಂದ ಜಿಲ್ಲಾಧಿಕಾರಿ 14 ಸಮಿತಿ ರಚನೆ ಮಾಡಿ, ಅಧಿಕಾರಿಗಳಿಗೆ ನಿರ್ವಹಣೆಯ ಹೊಣೆ ನೀಡಲಾಗಿದೆ.

 

ರಸ್ತೆ ಮತ್ತು ಪಾರ್ಕಿಂಗ್ ಸ್ಥಳಗಳ ಸ್ವಚ್ಛತೆ, ಪಾದಚಾರಿ ಮಾರ್ಗದ ನಿರ್ಮಾಣ, ಭಕ್ತರಿಗೆ ಕುಡಿಯುವ ಮತ್ತು ಸ್ನಾನದ ನೀರಿಗೆ ವ್ಯವಸ್ಥೆ ಮಾಡಲಾಗಿದೆ. ನೂರಾರು ನೀರಿನ ಟ್ಯಾಪ್ ಅಳವಡಿಸಲಾಗುತ್ತಿದೆ. ಅಂಜನಾದ್ರಿಗೆ ಬರುವ ಭಕ್ತರಿಗೆ ಪ್ರಸಾದ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ. ಬೆಟ್ಟದ ಹಿಂಭಾಗದ ವೇದಪಾಠ ಶಾಲೆ ಸಮೀಪದ ಕೋಣೆಯಲ್ಲಿ ಸಾವಿರಾರು ಲಾಡುಗಳು ಪ್ರಸಾದಕ್ಕೆ ಸಿದ್ಧಗೊಳುತ್ತಿವೆ. ಉಪಹಾರ, ಊಟದ ಜೊತೆಗೆ ಪ್ರಾಥಮಿಕ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಅನುಕೂಲಕ್ಕೆ ಸಹಾಯವಾಣಿ ತೆರೆಯಲಾಗಿದೆ.ಪಾರ್ಕಿಂಗ್ ವ್ಯವಸ್ಥೆ: ರಾಜ್ಯದ ನಾನಾ ಭಾಗದಿಂದ ಲಕ್ಷಕ್ಕೂ ಹೆಚ್ಚು ಮಾಲಾಧಾರಿಗಳು ಬರುವ ನಿರೀಕ್ಷೆ ಹಿನ್ನೆಲೆ ಸುಗಮ ಸಂಚಾರಕ್ಕೆ ಸುಮಾರು 20 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಆನೆಗೊಂದಿ, ಉತ್ಸವ ಬಯಲು, ಚಿಕ್ಕರಾಂಪೂರ, ಕಡೆಬಾಗಿಲು, ಹನುಮನಹಳ್ಳಿ, ಆನೆಗೊಂದಿ ಗ್ರಾಮ ಜಮೀನು ಸೇರಿ 20 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಬಾಗಲಕೋಟೆ, ಹುಬ್ಬಳ್ಳಿ, ಗದಗ, ಬೆಳಗಾವಿ ಭಾಗಗಳಿಂದ ಬೂದಗುಂಪ ಸರ್ಕಲ್, ಕೊಪ್ಪಳ ಮಾರ್ಗವಾಗಿ ಬರುವ ಮಾಲಾಧಾರಿಗಳು ಕಮಾಲಾಪೂರ, ಬುಕ್ಕಸಾಗರ, ಕಡೆಬಾಗಿಲು ಮಾರ್ಗವಾಗಿ ಬರಬೇಕು. ಕುಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಂದ ಸಿಂಧನೂರ, ಮಸ್ಕಿ, ಕನಕಗಿರಿ ಮಾರ್ಗವಾಗಿ ಬರುವ ಮಾಲಾಧಾರಿಗಳು ಗಂಗಾವತಿ ಕಡೆಯಿಂದ ಆನೆಗೊಂದಿಗೆ ತೆರಳಬೇಕು. ಹಿಟ್ನಾಳ ಸರ್ಕಲ್‌ನಿಂದ ಬಂಡಿ ಹರ್ಲಾಪೂರ, ಸಣಾಪೂರ ಗ್ರಾಮಗಳಲ್ಲಿ ರಸ್ತೆ ಕಾಮಗಾರಿ ಹಿನ್ನೆಲೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.ಜಲಾಭಿಷೇಕ, ಧಾರ್ಮಿಕ ಕಾರ್ಯಕ್ರಮ!

ಅಂಜನಾದ್ರಿ ಬೆಟ್ಟದಲ್ಲಿನ ಹನುಮ ಜನ್ಮಸ್ಥಳದಲ್ಲಿ ಡಿ.13 ರಂದು ಬೆಟ್ಟದ ಮೇಲಿನ ಹನುಮನ ಮೂರ್ತಿಗೆ 9 ನದಿ ನೀರಿನ ಜಲಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಪ್ರತಿ ವರ್ಷ ಚಾತುರ್ಮಾಸದಲ್ಲಿ ಹನುಮ ಭಕ್ತರು ಮಾಲೆ ಧಾರಣೆ ಮಾಡಿ, ವ್ರತ ಕೈಗೊಳ್ಳುತ್ತಾರೆ. ವ್ರತದ ಕೊನೆ ದಿನ ಅಂದರೆ ಡಿ.13 ರಂದು ಮಾಲಾಧಾರಿಗಳು ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿ, ವಿಸರ್ಜನೆ ಮಾಡುತ್ತಾರೆ. ಈ ಚಾತುರ್ಮಾಸದಲ್ಲೇ ರಾಮ ಹಾಗೂ ಹನುಮಂತ ತಪ್ಪಸ್ಸು ಕಳಿತಿದ್ದರು ಎಂಬ ನಂಬಿಕೆ ಇದೆ.ಈ ಹಿನ್ನೆಲೆ ಡಿ.13 ರಂದು ಅಂಜನಾದ್ರಿ ಬೆಟ್ಟ ಹನುಮನ ಮೂರ್ತಿಗೆ ಪಂಚಾಮೃತ ಅಭಿಷೇಕ, 9 ನದಿಗಳ ನೀರಿನ ಜಲಾಭಿಷೇಕ, ಸಹಸ್ರನಾಮ ಪಠಣ, ಕುಂಕುಮಾರ್ಚನೆ, ಮಹಾಮಂಗಳಾರತಿ, ಪವನ ಹೋಮ, ಶ್ರೀರಾಮನಾಮ ಪಠಣ, ಮಾಲೆ ಧರಿಸಿದ ಗುರುಗಳಿಂದ ಹನುಮಮಾಲೆ ವಿಸರ್ಜನೆ ಸೇರಿದಂತೆ ನಾನಾ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿವೆ.

 

ಶೋಭಾಯಾತ್ರೆ

ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಯಿಂದ ಶೋಭಾಯಾತ್ರೆ ಹಾಗೂ ಧಾರ್ಮಿಕ ಸಭೆ ನಡೆಯಲಿದೆ. ಡಿ.12 ರಂದು ಗಂಗಾವತಿ ನಗರಕ್ಕೆ ಬರುವ ಭಕ್ತರು ನಗರದಲ್ಲಿ ಶೋಭಾಯಾತ್ರೆ ಮೂಲಕ ಬೆಟ್ಟಕ್ಕೆ ತೆರಳಲಿದ್ದಾರೆ. ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ್ ರೂಪದಲ್ಲಿ ನೀಡಲು 50 ಸಾವಿರ ಲಾಡು, ತೀರ್ಥ ಬಾಟಲಿಗಳನ್ನು ಸಿದ್ಧ ಪಡಿಸಲಾಗಿದೆ

 

Editor

Leave a comment