Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | ಎಂ.ಜಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ ಬುಕ್ ವಿತರಣೆ.!

ಕರುನಾಡು ಘರ್ಜನೆ ಸುದ್ದಿ :ಗದಗ :ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಗಂಡು ಮಕ್ಕಳ ಶಾಲೆ ನಂ 5 ಎಸ್ ಎಮ್ ಕೃಷ್ಣ ನಗರ ಹಾಗೂ ಸರಕಾರಿ ಪ್ರೌಢಶಾಲೆ ರಾಜೀವಗಾಂಧಿನಗರ ಇಲ್ಲಿ ಎಂ.ಜಿ ಚಾರಿಟೇಬಲ್ ಟ್ರಸ್ಟ್ ಹಾಗೂ ಅಬುಹುರೇರಾ ಮಸ್ಜಿದ್ ನ ವತಿಯಿಂದ…

ಕರುನಾಡು ಘರ್ಜನೆ ಸುದ್ದಿ :ಗದಗ :ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಗಂಡು ಮಕ್ಕಳ ಶಾಲೆ ನಂ 5 ಎಸ್ ಎಮ್ ಕೃಷ್ಣ ನಗರ ಹಾಗೂ ಸರಕಾರಿ ಪ್ರೌಢಶಾಲೆ ರಾಜೀವಗಾಂಧಿನಗರ ಇಲ್ಲಿ ಎಂ.ಜಿ ಚಾರಿಟೇಬಲ್ ಟ್ರಸ್ಟ್ ಹಾಗೂ ಅಬುಹುರೇರಾ ಮಸ್ಜಿದ್ ನ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ ಬುಕ್ ವಿತರಣೆ ಮಾಡಿ ಮಾತನಾಡಿದ ಎಂ.ಜಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಮೌಲಾನಾ ಅಬ್ದುಲಗಪೂರಸಾಬ ಪಲ್ಲೇದ ವಿದ್ಯಾರ್ಥಿಗಳೆಲ್ಲರೂ ಶಿಕ್ಷಕ- ಶಿಕ್ಷಕಿಯರನ್ನು, ಹಾಗೂ ಶಾಲೆಯನ್ನು ಗೌರವಿಸಿ ಅವರ ಆಶೀರ್ವಾದವನ್ನು ಪಡೆಯುವುದರೊಂದಿಗೆ ಅತ್ಯುತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದರು. ಹೇಗೆ ನಾವು ಶಿಕ್ಷಕರನ್ನು ಗೌರವಿಸುತ್ತೇವೆಯೋ ಹಾಗೆ ನಾವು ನೋಟಬುಕ್, ಪೆನ್ನು, ಪಠ್ಯ ಪುಸ್ತಕಗಳನ್ನು ಗೌರವದಿಂದ ಕಾಣಬೇಕು ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಂ.ಜಿ ಚಾರಿಟೇಬಲ್ ಟ್ರಸ್ಟ್ ಸದಾ ಬೆನ್ನೆಲುಬಾಗಿ ನಿಲ್ಲುತ್ತದೆ ಎಂದರು.

ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಆರ್ ಎಸ್ ಬುರಡಿಯವರು ಮಾತನಾಡಿ ಶಾಲೆಗೆ ಬರಬೇಕಾದರೆ ನಿಮ್ಮ ತಂದೆ ತಾಯಿಯನ್ನು ನಮಸ್ಕರಿಸಿ ಬರಬೇಕು ಹಾಗೆಯೇ ಶಾಲೆಗೂ ಸಹ ನಮಿಸಿ ಬರಬೇಕು ಏಕೆಂದರೆ ಶಾಲೆ ಜ್ಞಾನದ ದೇಗುಲವಿದ್ದಂತೆ ಎಂದು ವಿದ್ಯಾರ್ಥಿ ಗಳಿಗೆ ಕಿವಿಮಾತನ್ನು ಹೇಳಿದರು. ಈ ಸಂದರ್ಭದಲ್ಲಿ ಬಿ ಆರ್ ಪಿ ಯಾದ ಎಂ.ಎ ಯರಗುಡಿಯವರು ಮಾತನಾಡುತ್ತಾ ಎಂ.ಜಿ ಚಾರಿಟೇಬಲ್ ಟ್ರಸ್ಟ್ ಸಾಕಷ್ಟು ಮಾನವೀಯ ಕೆಲಸಗಳನ್ನು ಮಾಡುತ್ತ ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ನೋಟಬುಕ್ ಹಂಚುತ್ತ ಬಂದಿದೆ ಎಂದರು.

ಮಕ್ಕಳು ಯಾವುದೇ ತೊಂದರೆ ಅನುಭವಿಸದೆ ಶಿಕ್ಷಣವನ್ನು ಪಡೆಯಬೇಕು ಎನ್ನುವ ಉದ್ದೇಶವನ್ನು ಟ್ರಸ್ಟ್ ಹೊಂದಿದೆ ಎಂದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಎಮ್ ಜಿ ಚಾರಿಟೇಬಲ್ ನ ಅಧ್ಯಕ್ಷ ಮಕ್ತುಮಸಾಬ ನಾಯ್ಕ, ಸುಲೇಮಾನ ಕಿಲ್ಲೇದಾರ, ಅಬುಹುರೇರಾ ಮಸ್ಜಿದ್ ಕಾರ್ಯದರ್ಶಿ ಮಹಮ್ಮದ್ ಸಾಬ ಬೋದ್ಲೇಖಾನ, ಖಜಾಂಚಿ ಮೈನುದ್ದಿನ್ ಗುಜಮಾಗಡಿ, ಆಯಾ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.

Editor

Leave a comment