Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ :18 ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇದಿತ.!

ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್ 23: ಕರ್ನಾಟಕ ಲೋಕಸೇವಾ ಆಯೋಗವು 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳನ್ನು ಡಿಸೆಂಬರ್ 29 ರಂದು ನಡೆಸಲಿದೆ. ಪರೀಕ್ಷಾ ಸಮಯದಲ್ಲಿ…

ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್ 23: ಕರ್ನಾಟಕ ಲೋಕಸೇವಾ ಆಯೋಗವು 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳನ್ನು ಡಿಸೆಂಬರ್ 29 ರಂದು ನಡೆಸಲಿದೆ. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 18 ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವನ್ನಾಗಿ ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಡಿಸೆಂಬರ್ 29 ರಂದು ಬೆಳಿಗ್ಗೆ 8 ಗಂಟೆಯಿAದ ಸಂಜೆ 6 ಗಂಟೆಯವರಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದು ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ನಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತç ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊಂದಿಗೆ ಮತ್ತು ಪರೀಕ್ರಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ.

ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಆಯೋಗವು ನಡೆಸುವ ಹ್ಯಾಂಡ್‌ಹೆಲ್ಡ್ ಮೆಟಲ್ ಡಿಟೆಕ್ಟರ್ ತಪಾಸಣೆಗೆ ಒಳಗಾಗುವುದು ಕಡ್ಡಾಯವಾಗಿರುತ್ತದೆ. ಮೆಟಲ್ ವಾಟರ್ ಬಾಟಲ್ಸ್ ಅಥವಾ ನಾನ್ ಟ್ರಾನ್ಸಪರಂಟ್ ವಾಟರ್‌ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮೊಬೈಲ್/ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್ ಪೆನ್ ಡ್ರೆöÊವ್, ಬ್ಲೂ ಟೂತ್ ಡಿವೈಸ್, ಸ್ಮಾರ್ಟವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟಾçನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್ ಕೈಚೀಲ, ಪರ್ಸ್ ನೋಟುಗಳು,ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಹೀಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆಗೆ ಮುಂಚಿತವಾಗಿ ಸಂಪೂರ್ಣ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿರುತ್ತದೆ.

ಕರ್ನಾಟಕ ಲೋಕಸೇವಾ ಆಯೋಗವು ಅಭ್ಯರ್ಥಿಗಳ ಪ್ರವೇಶಪತ್ರದಲ್ಲಿ ತಿಳಿಸಿರುವ ವಸ್ತç ಸಂಹಿತೆಯನ್ನು ಅಭ್ಯರ್ಥಿಗಳ ಕಡ್ಡಾಯವಾಗಿ ಪಾಲಿಸುವುದು. ಎಲ್ಲ ಪರೀಕ್ಷಾ ಸಿಬ್ಬಂದಿ/ಅಭ್ಯರ್ಥಿಗಳು ಮೊಬೈಲ್ ಪೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಸಂಬಂಧಪಟ್ಟವರು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.

Editor

Leave a comment