Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ :ಮಂಗಳವಾರ 24 ರಂದು ಗದಗ ಬಂದ್ ಗೆ ಕರೆ.!

ಕರುನಾಡು ಘರ್ಜನೆ ಸುದ್ದಿ :ಗದಗ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಸಂಸತ್ ಕಲಾಪದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕ‌ರ್ ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಗದುಗಿನ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ 24 ರಂದು ಗದಗ ಬಂದ್…

ಕರುನಾಡು ಘರ್ಜನೆ ಸುದ್ದಿ :ಗದಗ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಸಂಸತ್ ಕಲಾಪದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕ‌ರ್ ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಗದುಗಿನ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ 24 ರಂದು ಗದಗ ಬಂದ್ ಗೆ ಕರೆ ನೀಡಲಾಗಿದೆ.

ಅಮೀತ್ ಶಾ ಅವರ ಅಂಬೇಡ್ಕರ್ ಕುರಿತ ಹೇಳಿಕೆ ಇಡೀ ದೇಶದ ದಲಿತರ ಹಾಗೂ ಪ್ರಗತಿಪರರ ಭಾವನೆಗಳಿಗೆ ಧಕ್ಕೆಯಾಗಿದೆ.ಇದನ್ನು ಖಂಡಿಸಿ ಇದೇ 24 ಮಂಗಳವಾರದಂದು ಗದಗ ಬಂದ್ ಗೆ ಕರೆ ಕೊಟ್ಟಿದ್ದು ಈ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.ಬಸ್‌ ಸಂಚಾರದಲ್ಲಿ ಬದಲಾವಣೆ : ಗದಗ ಬಂದ್ ಹಿನ್ನಲೆಯಲ್ಲಿ ಮಂಗಳವಾರ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಸಾರಿಗೆ ಬಸ್‌ಗಳ ಸಂಚಾರದಲ್ಲಿ ಬದಲಾವಣೆ ಮಾಡಿ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಸಂಚರಿಸುವ ಮುಂಡರಗಿ- ಕೊಪ್ಪಳ ಮಾರ್ಗದ ಬಸ್‌ಗಳು ಮುಖ್ಯ ಬಸ್ ನಿಲ್ದಾಣಕ್ಕೆ ಬರದೇ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನವರೆಗೆ ಸಂಚರಿಸಲಿವೆ.

 

ರೋಣ, ಗಜೇಂದ್ರಗಡದಿಂದ ಗದಗಕ್ಕೆ ಬರುವ ಬಸ್‌ಗಳು ಬೆಟಗೇರಿ ಬಸ್‌ ನಿಲ್ದಾಣದವರೆಗೆ ಕಾರ್ಯಾಚರಿಸಲಿವೆ.ಹುಬ್ಬಳ್ಳಿ, ಅಣ್ಣಿಗೇರಿಯಿಂದ ಗದಗಕ್ಕೆ ಬರುವ ಬಸ್‌ಗಳು ಕೆಇಬಿ ಕ್ರಾಸ್‌ವರೆಗೆ, ಲಕ್ಷ್ಮೀಶ್ವರ, ಶಿರಹಟ್ಟಿಯಿಂದ ಗದಗಕ್ಕೆ ಬರುವ ಬಸ್‌ಗಳು ದೋಭಿ ಘಾಟ್‌ವರೆಗೆ, ಹೊಂಬಳದಿಂದ ಗದಗಕ್ಕೆ ಬರುವ ಬಸ್‌ಗಳು ಹೊಂಬಳ ನಾಕಾವರೆಗೆ ಮತ್ತು ಸವಡಿ ಮತ್ತು ಹುಯಿಲಗೋಳದಿಂದ ಗದಗಕ್ಕೆ ಬರುವ ಬಸ್‌ಗಳು ರಾಣಾ ಪ್ರತಾಪ್ ಶಾಲೆವರೆಗೆ ಸಂಚರಿಸಲಿವೆ.

 

ಡಿ. 24ರಂದು ಮಂಗಳವಾರ ಬೆಳಿಗ್ಗೆ 6 ರಿಂದ ಬಂದ್‌ ಆರಂಭವಾಗಲಿದ್ದು, ಗಾಂಧಿ ಸರ್ಕಲ್‌ನಲ್ಲಿ ಬೆಳಿಗ್ಗೆ 11ಕ್ಕೆ ಬಹಿರಂಗ ಸಭೆ ಇರಲಿದೆ. ಅಂಗಡಿ ಮುಂಗಟ್ಟು ಮುಚ್ಚಲು ಒತ್ತಡವಿಲ್ಲ. ಸ್ವ ಇಚ್ಛೆಯಿಂದ ಬಂದ್‌ಗೆ ಸಹಕರಿಸಲಿ.

-ಶರೀಫ ಬಿಳೆಯಲಿ, ದ.ಸಂ.ಸ. ಮುಖಂಡ

Editor

Leave a comment