Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕೊಪ್ಪಳ | ಅಮಿತ್ ಶಾ ಹೇಳಿಕೆ ಖಂಡಿಸಿ ಕೊಪ್ಪಳ ಜ. 6 ರಂದು ಬಂದ್‌!

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ : ಬಾಬಾ ಸಾಹೇಬ ಡಾ. ಬಿ.ಆ‌ರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಜನವರಿ 6 ರಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ ಎಂದು…

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ : ಬಾಬಾ ಸಾಹೇಬ ಡಾ. ಬಿ.ಆ‌ರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಜನವರಿ 6 ರಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಸಮಿತಿ ಮುಖಂಡರಾದ ಅಲ್ಲಮಪ್ರಭು ಬೆಟ್ಟದೂರ್, ಟಿ.ರತ್ನಾಕರ್, ಹನುಮೇಶ್ ಕಡೆಮನಿ ತಿಳಿಸಿದರು.

ಅವರು ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸಂಸತ್ತು ಅಧಿವೇಶನದಲ್ಲಿ ನಡೆದ ಚರ್ಚೆ ವೇಳೆ ಗೃಹ ಸಚಿವ ಅಮಿತ್ ಶಾ ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು. ಜ.6 ರಂದು ಕೊಪ್ಪಳ ಬಂದ್ ಗೆ ಅಹಿಂದ, ಅಲ್ಪಸಂಖ್ಯಾತರ ಸಂಘಟನೆಗಳು ಹಾಗೂ ಬಿ.ಆ‌ರ್.ಅಂಬೇಡ್ಕ‌ರ್ ಅವರ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಬಂದ್ ದಿನ ವಾಹನಗಳ ಸಂಚಾರ ಹಾಗೂ ವ್ಯಾಪಾರ ವಹಿವಾಟು ಸಂಪೂರ್ಣ ಬಂದ್‌ ಆಗಲಿದೆ, ಈಗಾಗಲೇ ವ್ಯಾಪಾರಸ್ಥರೊಂದಿಗೆ ಚರ್ಚಿಸಲಾಗಿದೆ ಬಂದ್ ಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದರು. ಅಂದು ನಗರದ ತಾಲೂಕ ಕ್ರೀಡಾಂಗಣದಿಂದ ಅಂಬೇಡ್ಕರ್ ಸರ್ಕಲ್, ಗಡಿಯಾರ ಕಂಬದ ಮೂಲಕ ಅಶೋಕ ಸರ್ಕಲ್‌ ವರೆಗೆ ಪ್ರತಿಭಟನಾ ಮೆರವಣಿಗೆ ಆಗಮಿಸುತ್ತದೆ, ಅಂದು ಬಂದ್ ಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.

 

ಸುದ್ದಿಗೋಷ್ಠಿಯಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಮುಖಂಡರಾದ ಸುಕ್ರರಾಜ್ ತಾಳಕೇರಿ, ಯಲ್ಲಪ್ಪ ಬಳಗಾನೂರು, ಕಾಶಪ್ಪ ಚಲವಾದಿ, ಸಿದ್ದರಾಮ ಹೊಸಮನಿ, ರಾಮಣ್ಣ ಚೌಡ್ಕಿ, ಸಲೀಂ ಖಾದ್ರಿ, ನಿಂಗಜ್ಜ ಚೌದ್ರಿ ಶಾಹಪುರು ಕೆ.ಎಸ್. ಮೈಲಾರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

 

Editor

Leave a comment