Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಮಂಡ್ಯ: ಕಾನ್ಸ್‌ಟೇಬಲ್‌ಗೆ ಯುವಕನೊಬ್ಬ ಪೊಲೀಸ್ ಠಾಣೆಯಲ್ಲೇ ಕೊರಳಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದ್ದಿದೆ.!

ಕರುನಾಡು ಘರ್ಜನೆ ಸುದ್ದಿ : ಮಂಡ್ಯ:ತನ್ನ ಕಪಾಳಕ್ಕೆ ಹೊಡೆದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಯುವಕನೊಬ್ಬ ಪೊಲೀಸ್ ಠಾಣೆಯಲ್ಲೇ ಕೊರಳಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದಿದೆ. ಪಟ್ಟಣದ ಹಿರೋಡೆ ಬೀದಿಯ ಪಿ.ಎಸ್.ಜಗದೀಶ್ ಅವರ…

ಕರುನಾಡು ಘರ್ಜನೆ ಸುದ್ದಿ : ಮಂಡ್ಯ:ತನ್ನ ಕಪಾಳಕ್ಕೆ ಹೊಡೆದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಯುವಕನೊಬ್ಬ ಪೊಲೀಸ್ ಠಾಣೆಯಲ್ಲೇ ಕೊರಳಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದಿದೆ.

ಪಟ್ಟಣದ ಹಿರೋಡೆ ಬೀದಿಯ ಪಿ.ಎಸ್.ಜಗದೀಶ್ ಅವರ ಪುತ್ರ ಸಾಗರ್ (30) ಎಂಬಾತ ಪೊಲೀಸ್ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ ನಡೆಸಿದವ ಎನ್ನಲಾಗಿದೆ.

ಪೊಲೀಸ್ ಕಾನ್ಸ್‌ಟೇಬಲ್ ಅಭಿಷೇಕ್ ಮೇಲೆ ಹಲ್ಲೆ ಮಾಡಿದ ಸಾಗರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಮೀನಿನ ವಿಚಾರವಾಗಿ ನಡೆದಿದ್ದ ಜಗಳದ ಸಂಬಂಧ ಲಕ್ಷ್ಮೀನಾರಾಯಣ ಎಂಬುವವರು ಸಾಗರ್ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನೂ ಪೊಲೀಸ್ ಠಾಣೆಗೆ ಕರೆಯಿಸಲಾಗಿತ್ತು.

ಠಾಣೆಯಲ್ಲಿ ಮತ್ತೆ ಸಾಗರ್, ಲಕ್ಷ್ಮೀನಾರಾಯುಣ್ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಈ ವೇಳೆ ಮಧ್ಯ ಪ್ರವೇಶಿಸಿದ ಕಾನ್ಸ್‌ಟೇಬಲ್ ಅಭಿಷೇಕ್, ಸಾಗರ್‌ನನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ. ಕೋಪ ಗೊಂಡಿದ್ದ ಸಾಗರ್, ಪೊಲೀಸ್ ಕಾನ್ಸ್‌ಟೇಬಲ್ ಅಭಿಷೇಕ್ ಅವರ ಕೊರಳಪಟ್ಟಿ ಹಿಡಿದು ಹಲ್ಲೆ ನಡೆಸಿದ್ದಾನೆ.

ಕರ್ತವ್ಯದಲ್ಲೇ ಇದ್ದ ಪೊಲೀಸರುಗಳಾದ ಲಕ್ಷ್ಮೀ ಮತ್ತು ಆನಂದ್ ಮಧ್ಯ ಪ್ರವೇಶಿಸಿ ಜಗಳ ಬಿಡಿಸಲು ಮುಂದಾಗಿದ್ದಾರೆ. ಆದರೆ ಸಾಗರ್, ನನ್ನ ವಿಚಾರಕ್ಕೆ ಬರಬೇಡಿ ಎಂದು ಲಕ್ಷ್ಮೀ ಮತ್ತು ಆನಂದ ಅವರಿಗೂ ಧಮ್ಮಿ ಹಾಕಿ, ಕುಡಿಯುವ ನೀರಿನ ಕ್ಯಾನ್ ಎತ್ತಿ ಬಿಸಾಡಿ ದಾಂಧಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕಾನ್ಸ್‌ಟೇಬಲ್ ಅಭಿಷೇಕ್ ನೀಡಿದ ದೂರಿನ ಮೇಲೆ ಪೊಲೀಸರು ಆರೋಪಿ ಸಾಗರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Editor

Leave a comment