ಕರುನಾಡು ಘರ್ಜನೆ ಸುದ್ದಿ : ಮಂಡ್ಯ(ಜ.02): ಮಂಡ್ಯ ಜಿಲ್ಲೆಯ ಮೂವರು ಪೊಲೀಸರನ್ನು ಅಮಾನತ್ತು ಮಾಡಲಾಗಿದೆ. ಕೆಆರ್ಎಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಸೇರಿದಂತೆ ಒಟ್ಟು ಮೂವರು ಪೊಲೀಸರು ಸೇರಿಕೊಂಡು ಹೊರ ರಾಜ್ಯದಿಂದ ಮಂಡ್ಯದ ಕೆಆರ್ಎಸ್ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ವಾಹನಗಳಿಂದ ಹಣ ವಸೂಲಿ ಮಾಡುತ್ತಿದ್ದರು.
ಈ ಬಗ್ಗೆ ವಿಡಿಯೋ ಸಾಕ್ಷಿ ಸಮೇತ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯ ಪೇದೆ ಸೇರಿ ಮೂವರು ಪೊಲೀಸ್ ಪೇದೆಗಳ ಸಸ್ಪೆಂಡ್ ಮಾಡಲಾಗಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.