ಕರುನಾಡು ಘರ್ಜನೆ ಸುದ್ದಿ ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಬಳಿ ನಡೆದಿದೆ.
ಹೊಸಪೇಟೆ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಮಹ್ಮದ್ ಜಾಯಿದ್ (18) ಹಾಗೂ ಸಂಜೀವ ಗಿರಡ್ಡಿ (15) ಅನ್ನುವ ಯುವಕರು ಮೃತ ದುರ್ದೈವಿಗಳಾಗಿದ್ದಾರೆ.
ಆಶೀಸ್ ಗೂಡುರ್ ಹಾಗೂ ಚಾಲಕ ಸಪ್ತಗಿರಿ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಗದಗ ಜೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ .