Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಭ್ರಷ್ಟಾಚಾರ ಬಯಲಿಗೆಳೆದ ಛತ್ತೀಸ್‌ಗಡದ ಪತ್ರಕರ್ತನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ..!

ಕರುನಾಡು ಘರ್ಜನೆ ಸುದ್ದಿ: ಛತ್ತೀಸ್‌ಗಡದಲ್ಲಿ ಗುತ್ತಿಗೆದಾರನೊಬ್ಬನ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದಿದ್ದ 28 ವರ್ಷದ ಪತ್ರಕರ್ತನ ಶವ, ಅದೇ ಗುತ್ತಿಗೆದಾರನಿಗೆ ಸೇರಿದ ಸ್ಥಳದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿದೆ. ಜನವರಿ 1ರಿಂದ ನಾಪತ್ತೆಯಾಗಿದ್ದ ಹವ್ಯಾಸಿ ಪತ್ರಕರ್ತ ಮುಕೇಶ್ ಚಂದ್ರಕಾರ್ ಮೃತದೇಹವನ್ನು ಶುಕ್ರವಾರ ಸಂಜೆ ಬಿಜಾಪುರ್…

ಕರುನಾಡು ಘರ್ಜನೆ ಸುದ್ದಿ: ಛತ್ತೀಸ್‌ಗಡದಲ್ಲಿ ಗುತ್ತಿಗೆದಾರನೊಬ್ಬನ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದಿದ್ದ 28 ವರ್ಷದ ಪತ್ರಕರ್ತನ ಶವ, ಅದೇ ಗುತ್ತಿಗೆದಾರನಿಗೆ ಸೇರಿದ ಸ್ಥಳದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿದೆ. ಜನವರಿ 1ರಿಂದ ನಾಪತ್ತೆಯಾಗಿದ್ದ ಹವ್ಯಾಸಿ ಪತ್ರಕರ್ತ ಮುಕೇಶ್ ಚಂದ್ರಕಾರ್ ಮೃತದೇಹವನ್ನು ಶುಕ್ರವಾರ ಸಂಜೆ ಬಿಜಾಪುರ್ ಜಿಲ್ಲೆಯ ಚಟ್ಟನಪರ ಬಸ್ತಿ ಎಂಬಲ್ಲಿ ಪತ್ತೆ ಮಾಡಲಾಗಿದೆ.ಗುತ್ತಿಗೆದಾರ ಸುರೇಶ್ ಚಂದ್ರಕಾರ್ ಎಂಬಾತನ ಅಕ್ರಮಗಳ ವಿರುದ್ಧ ತನಿಖಾ ವರದಿಗಳನ್ನು ಪ್ರಕಟಿಸಿದ್ದ ಮುಕೇಶ್, ಬಸ್ತಾರ್‌ನಲ್ಲಿನ 120 ಕೋಟಿ ರೂ ಮೊತ್ತದ ರಸ್ತೆ ನಿರ್ಮಾಣ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆದಿರುವುದನ್ನು ಬಯಲಿಗೆಳೆದಿದ್ದರು. ಈ ವರದಿಯು ಗುತ್ತಿಗೆದಾರನ ಚಟುವಟಿಕೆಗಳ ಕುರಿತಂತೆ ತನಿಖೆ ನಡೆಸಲು ಆದೇಶಿಸಲು ಸರ್ಕಾರದ ಮೇಲೆ ಒತ್ತಡ ಹೇರಲು ಯಶಸ್ವಿಯಾಗಿತ್ತು.ಪತ್ರಕರ್ತ ಮುಕೇಶ್ ಜನವರಿ 1ರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಗುತ್ತಿಗೆದಾರ ಸುರೇಶ್ ಚಂದ್ರಕಾರ್‌ನ ಸಹೋದರ ರಿತೇಶ್, ತನ್ನ ಕುಟುಂಬಕ್ಕೆ ಸೇರಿದ ಸ್ಥಳದೊಂದರಲ್ಲಿ ಮುಕೇಶ್ ಜತೆ ಸಭೆ ಆಯೋಜಿಸಿದ್ದ. ಆದರೆ ಇದರ ಬಳಿಕ ಮುಕೇಶ್ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಮುಕೇಶ್ ಅವರ ಅಣ್ಣ ಯುಕೇಶ್ ಚಂದ್ರಕಾರ್ ಅವರು ಪೊಲೀಸರಿಗೆ ಕಾಣೆ ದೂರು ಸಲ್ಲಿಸಿದ್ದರು”ಜನವರಿ 1ರಿಂದ ಮುಕೇಶ್ ಕಾಣೆಯಾಗಿದ್ದಾರೆ ಎಂದು ಸಂತ್ರಸ್ತನ ಸಹೋದರ ನಮಗೆ ಮಾಹಿತಿ ನೀಡಿದ್ದರು. ನಾವು ಕೂಡಲೇ ಕ್ರಮ ಕೈಗೊಂಡು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದೆವು. ಅವರ ಕೊನೆಯ ಲೊಕೇಶನ್ ಕೂಡ ದೊರಕಿತು. ಟ್ಯಾಂಕ್ ಒಂದರ ಒಳಗೆ ಮುಕೇಶ್ ಮೃತದೇಹ ಪತ್ತೆ ಮಾಡಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

 

ಸಹೋದರರ ಬಂಧನ

ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು, ಹೈದರಾಬಾದ್‌ನಲ್ಲಿ ಸುರೇಶ್‌ ಚಂದ್ರಕಾರ್‌ನನ್ನು ಹಾಗೂ ದಿಲ್ಲಿಯಲ್ಲಿ ರಿತೇಶ್‌ನನ್ನು ಬಂಧಿಸಿದ್ದಾರೆ. ಶವವನ್ನು ಎಸೆಯಲು ಸಹಾಯ ಮಾಡಿದ ಕಾರ್ಮಿಕನೊಬ್ಬನನ್ನು ಕೂಡ ಬಂಧಿಸಲಾಗಿದೆ. ಗುತ್ತಿಗೆದಾರನ ವಲಯದಲ್ಲಿನ ಹಲವಾರು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

 

ಮುಕೇಶ್ ದೇಹ ಊದಿಕೊಂಡಿದ್ದು, ತಲೆ ಹಾಗೂ ಹಿಂಭಾಗದಲ್ಲಿ ಹಲವಾರು ಗಾಯಗಳಾಗಿವೆ. ಅವರನ್ನು ಬಟ್ಟೆಗಳಿಂದ ಗುರುತಿಸಲಾಗಿದೆ.

 

ಬಸ್ತಾರ್ ಜಂಕ್ಷನ್ ಎಂಬ ಯೂಟ್ಯೂಬ್ ಸುದ್ದಿ ವಾಹಿನಿ ನಡೆಸುತ್ತಿದ್ದ ಮುಕೇಶ್, ಇತರೆ ಕೆಲವು ಮಾಧ್ಯಮಗಳಿಗೂ ಸುದ್ದಿ ನೀಡುತ್ತಿದ್ದರು. ಅವರ ಸಹೋದರ ಯುಕೇಶ್ ಕೂಡ ಪತ್ರಕರ್ತರಾಗಿದ್ದು, ಸಣ್ಣ ವಯಸ್ಸಿನಲ್ಲಿಯೇ ಪೋಷಕರನ್ನು ಕಳೆದುಕೊಂಡಿದ್ದರು. ಇಬ್ಬರೂ ತಮ್ಮ ವೃತ್ತಿ ಬದುಕಿನಲ್ಲಿ ಪರಸ್ಪರ ನೆರವಾಗುತ್ತಿದ್ದರು.

Editor

Leave a comment