Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ವಿವಿಧ ಇಲಾಖೆಗಳ ಗ್ರೂಪ್ “ಬಿ” ವೃಂದದ ಹುದ್ದೆಗಳಿಗೆ ಪರೀಕ್ಷೆ ಕುರಿತು ಪೂರ್ವಭಾವಿ ಸಭೆ.!

ಕರುನಾಡು ಘರ್ಜನೆ ಸುದ್ದಿ :ಗದಗ ಜನೆವರಿ 15 : ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ “ಬಿ” ವೃಂದದ ಹುದ್ದೆಗಳಿಗೆ ಜನೆವರಿ 19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸುತ್ತಿದೆ. ಜಿಲ್ಲೆಯಲ್ಲಿ ಪರೀಕ್ಷೆಗಳು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಜರುಗಿಸಬೇಕು…

ಕರುನಾಡು ಘರ್ಜನೆ ಸುದ್ದಿ :ಗದಗ ಜನೆವರಿ 15 : ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ “ಬಿ” ವೃಂದದ ಹುದ್ದೆಗಳಿಗೆ ಜನೆವರಿ 19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸುತ್ತಿದೆ. ಜಿಲ್ಲೆಯಲ್ಲಿ ಪರೀಕ್ಷೆಗಳು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಜರುಗಿಸಬೇಕು ಹಾಗೂ ಪರೀಕ್ಷಾ ಅಕ್ರಮಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅವರು ನಿರ್ದೇಶನ ನೀಡಿದರು.

 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳಲ್ಲಿ ಜನೆವರಿ 19 ಮತ್ತು 25 ರಂದು ಪರೀಕ್ಷೆಗಳು ಜರುಗುತ್ತಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಗೋಡೆ ಗಡಿಯಾರಗಳು ಇರುವಂತೆ ನೋಡಿಕೊಳ್ಳಬೇಕು.

 

ತ್ರಿಸದಸ್ಯ ಸಮಿತಿ ನೇಮಕ: ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು, ಸ್ಥಳೀಯ ನಿರೀಕ್ಷಣಾಧಿಕಾರಿಯನ್ನು, ಮಾರ್ಗಾಧಿಕಾರಿಗಳನ್ನು ಮತ್ತು ತ್ರಿಸದಸ್ಯ ಸಮಿತಿಯನ್ನು ನೇಮಿಸಲಾಗಿದೆ. ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಸೂಚಿಸಿದರು. ವಿಕಲಚೇತನರಿಗೆ ನೆಲಮಹಡಿಯ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯುವ ವ್ಯವಸ್ಥೆಯಾಗಬೇಕು. ಒಟ್ಟಾರೆಯಾಗಿ ಯಾವುದೇ ಅಕ್ರಮ, ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ಪರೀಕ್ಷೆಯನ್ನುಯಶಸ್ವಿಯಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

 

ಪ್ರತಿಬಂಧಕಾಜ್ಞೆ ಜಾರಿ : ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಜನೆವರಿ 19 ರಂದು ಬೆಳಿಗ್ಗೆ 8 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಜನೆವರಿ 25 ರಂದು ಮಧ್ಯಾಹ್ನ 1 ಗಂಟೆಯಿAದ ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದು ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ನಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತçಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊAದಿಗೆ ಮತ್ತು ಪರೀಕ್ರಾ ಕೊಠಡಿಯ ಸಂವೀಕ್ಷಕರೊAದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ.

 

ವಸ್ತç ಸಂಹಿತೆ : ಶೂ,ಸಾಕ್ಸ್ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿಯನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳು, ಮೊಬೈಲ್ ಬ್ಲೂ ಟೂಥ , ಕ್ಯಾಲ್ಕುಲೇಟರ್, ವೈಟ್‌ಫ್ಲುಡ್, ವೈರ್‌ಲೆಸ್ ಸೆಟ್ಸ್ , ಪೇಪರ್, ಬುಕ್ಸ್ಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ತುಂಬುತೋಳಿನ ಶರ್ಟ್ ಮತ್ತು ಯಾವುದೇ ಆಭರಣಗಳನ್ನು ಮೆಟಲ್ ಮತ್ತು ನಾನ್‌ಮೆಟಲ್ (ಮಂಗಳಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ)ಪುಲ್ಲೋವರ್ಸ, ಜಾಕೆಟ್, ಸ್ವೆಟರ್‌ಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಹೀಯರಿಂಗ್ ಆ್ಯಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಆರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿದೆ. ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ತç ಸಂಹಿತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮೆಟಲ್‌ವಾಟರ್ ಬಾಟಲ್ ಮತ್ತು ನಾನ್ ಟ್ರಾನ್ಸಪರಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇದಿಸಲಾಗಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ಇರುವುದಿಲ್ಲ. ಕರ್ನಾಟಕ ಲೋಕಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು.

 

ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಸ್.ಬಿ.ಸಂಕದ ಅವರು ಮಾತನಾಡಿ ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಸುವ್ಯವಸ್ಥೆ, ಪಾರದರ್ಶಕತೆ ಕಾಪಾಡಲು ಪೊಲೀಸ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಸೇರಿದಂತೆ ಅವಶ್ಯಕ ಕ್ರಮ ಕೈಗೊಳ್ಳಲಾಗುವುದು ಎಂದರು.

 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರಡಿ, ಡಯಟ್ ಪ್ರಾಚಾರ್ಯರಾದ ಜಿ.ಎಲ್. ಬಾರಾಟಕ್ಕೆ, ಖಜಾನೆ ಇಲಾಖೆ ಉಪನಿರ್ದೇಶಕ ಹರಿನಾಥ ಬಾಬು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

 

ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳ ವಿವರ: ನಗರದ ಕೆ.ಎಲ್.ಇ ಸೊಸೈಟಿಸ್ ಜೆ.ಟಿ.ಕಾಲೇಜ್, ಸಿ.ಎಸ್,ಪಾಟೀಲ ಬಾಲಕರ ಪ್ರೌಢಶಾಲೆ, ಸಿ.ಎಸ್.ಪಾಟೀಲ ಬಾಲಕಿಯರ ಪ್ರೌಢಶಾಲೆ, ವಿ.ಡಿ.ಎಸ್.ಟಿ. ಗಂಡುಮಕ್ಕಳ ಪ್ರೌಢಶಾಲೆ, ವಿ.ಡಿ.ಎಸ್.ಟಿ. ಹೆಣ್ಣುಮಕ್ಕಳ ಸಂಯುಕ್ತ ಪಿ.ಯು.ಕಾಲೇಜ್, ಬೆಟಗೇರಿಯ ಎ.ಎಸ್.ಎಸ್.ಕಾಮರ್ಸ ಕಾಲೇಜ್ , ನಗರದ ಶಾಸ್ತಿçÃಜಿ ಹೈಸ್ಕೂಲ್ , ಮುಳಗುಂದ ರಸ್ತೆಯಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜ್ , ಸಿದ್ದಲಿಂಗನಗರದ ಬಸವೇಶ್ವರ ಪ್ರೌಢಶಾಲೆ

Editor

Leave a comment