Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಹುಬ್ಬಳ್ಳಿ – ಧಾರವಾಡ : ಇತಿಹಾಸದಲ್ಲೇ 45 ಮಂದಿ ಆರೋಪಿಗಳನ್ನು ತಡಿಪಾರ್ ಮಾಡಿದ ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರ.!

ಕರುನಾಡು ಘರ್ಜನೆ ಸುದ್ದಿ : ಹುಬ್ಬಳ್ಳಿ – ಧಾರವಾಡ ಅವಳಿನಗರದ ಪೊಲೀಸ್ ಕಮಿಷನರೇಟ್ ಇತಿಹಾಸದಲ್ಲೇ ಮೊದಲ ಬಾರಿಗೆ , ಅಪರಾಧಿ ಹಿನ್ನೆಲೆ ಹೊಂದಿದವರ 45 ಮಂದಿ ಆರೋಪಿಗಳನ್ನು ಒಂದೇ   ಧಾರವಾಡ ಎಸ್‌ಪಿ ಸುದ್ದಿಗೋಷ್ಟಿ ನಡೆಸಿದ್ದು , “ ಹುಬ್ಬಳ್ಳಿ- ಧಾರವಾಡ…

ಕರುನಾಡು ಘರ್ಜನೆ ಸುದ್ದಿ : ಹುಬ್ಬಳ್ಳಿ – ಧಾರವಾಡ ಅವಳಿನಗರದ ಪೊಲೀಸ್ ಕಮಿಷನರೇಟ್ ಇತಿಹಾಸದಲ್ಲೇ ಮೊದಲ ಬಾರಿಗೆ , ಅಪರಾಧಿ ಹಿನ್ನೆಲೆ ಹೊಂದಿದವರ 45 ಮಂದಿ ಆರೋಪಿಗಳನ್ನು ಒಂದೇ

 

ಧಾರವಾಡ ಎಸ್‌ಪಿ ಸುದ್ದಿಗೋಷ್ಟಿ ನಡೆಸಿದ್ದು , “ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ನಡೆದಿರುವ ಕೊಲೆ , ಸುಲಿಗೆ , ಕೊಲೆಗೆ ಪ್ರಯತ್ನ , ಸರಗಳ್ಳತನ , ಮಾದಕ ವಸ್ತು ಮಾರಾಟ ಸೇವನೆ , ಭೂ ಮಾಫಿಯಾ , ಮಹಿಳೆ ಮತ್ತು ವಿದ್ಯಾರ್ಥಿನಿಯರ ಅಪಹರಣ , ಚುಡಾಯಿಸುವುದು ಅಲ್ಲದೆ ಸಂಘಟಿತ ಅಪರಾಧಗಳಾದ ಮಟಕಾ , ಗ್ಯಾಂಬ್ಲಿಂಗ್ , ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯ ಹಾಳುಮಾಡುವ ಪುಂಡ ಹುಡುಗರ / ರೌಡಿ , ಜನರ ಗುಂಪು ಕಟ್ಟಿಕೊಂಡು ತಿರುಗಾಡುತ್ತ ಸಾರ್ವಜನಿಕರಲ್ಲಿ ಭಯಭೀತಿಯನ್ನು ಹುಟ್ಟುಹಾಕಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡಬಲ್ಲ ಹಾಗೂ ಅಪಾಯಕಾರಿ ಮನುಷ್ಯರಾಗಿ ಸಮಾಜಕ್ಕೆ ಗಂಡಾಂತರಕಾರಿಯಾಗಿರುವ ಆರೋಪಿಗಳ ವಿರುದ್ಧ ಮುಂಜಾಗೃತಾ ಕ್ರಮದ ಅವಶ್ಯಕತೆಯಿದೆ . ಈ ಹಿನ್ನೆಲೆಯಲ್ಲಿ ಸುಮಾರು ಎರಡರಿಂದ ಮೂರು ತಿಂಗಳಿಂದ ಸ್ಥಳೀಯ ಅಧಿಕಾರಿಗಳೊಂದಿಗೆ ಆರೋಪಿಗಳ ವಿರುದ್ಧ ಇರುವ ಪ್ರಕರಣಗಳನ್ನು ವಿಮರ್ಶೆ ಮಾಡಿದ್ದು , ಆರೋಪಿತರನ್ನು ಗಡಿಪಾರು ಮಾಡುವ ಅವಶ್ಯಕತೆ ಎದುರಾಗಿದೆ ‘ ಎಂದು ತಿಳಿಸಿದರು .

 

“ ಕರ್ನಾಟಕ ಪೊಲೀಸ್ ಕಾಯ್ದೆ -1963 ಕಲಂ 55 ಮತ್ತು 56 ರ ಅಡಿಯಲ್ಲಿ ಕ್ರಮ ಕೈಗೊಂಡಿದ್ದು ಕಾನೂನು ಸುವ್ಯವಸ್ಥೆ ಕಾಪಾಡಲು ಮಾದಕ ವಸ್ತುಗಳ ಮುಕ್ತ ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಕ್ರಮ ಕೈಗೊಂಡಿದ್ದು , ಗಡಿಪಾರು ಮುಂದುವರೆಯುತ್ತದೆ ” ಎಂದು ಹೇಳಿದ್ದಾರೆ . ” ಗಡಿಪಾರು ವ್ಯಕ್ತಿಗಳ ನಿರ್ದಿಷ್ಟ ಅವಧಿಗೆ ಇದ್ದು , ಗಡಿಪಾರು ವ್ಯಕ್ತಿಗಳ ಚಲನವಲನ ಮತ್ತು ಅವರ ಕಾರ್ಯಚಟುವಟಿಕೆಗಳ ಮೇಲೆ ಸೂಕ್ತ ನಿಗಾವಹಿಸಿ ಈ ಕಚೇರಿಗೆ ಮಾಹಿತಿ ತಿಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ . ಗಡಿಪಾರಾದ ವ್ಯಕ್ತಿಗಳು ನಗರದಲ್ಲಿ ಕಂಡುಬಂದಲ್ಲಿ ಸಾರ್ವಜನಿಕರು ಹಾಗೂ ಮನೆಯ ಅಕ್ಕಪಕ್ಕದವರು , ಸ್ಥಳೀಯ ಪೊಲೀಸ್ ಠಾಣೆಗಳಿಗೆ ನಗರ ನಿಸ್ತಂತು ಕೊಠಡಿ ( ಫೋನ್ ನಂಬರ್ 100 , 2233555 ) ಹಾಗೂ 112 ವಾಹನಕ್ಕೆ ತಿಳಿಸುವ ಜವಾಬ್ದಾರಿಯಾಗಿರುತ್ತದೆ . ಈ ಪ್ರಕ್ರಿಯೆಗೆ ನಿಮ್ಮ ಸಹಕಾರವೂ ಕೂಡಾ ಅವಶ್ಯವಿರುತ್ತದೆ ” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ .

ಧಾರವಾಡದ ಚೇತನ ಮೇಟಿ , ಅಡ್ಡ ಸೊಹೈಲ್ , ಹುಬ್ಬಳ್ಳಿ ಹೊಸೂರಿನ ರಾಹುಲ ಪ್ರಭು ಸೇರಿದಂತೆ 45 ಮಂದಿ ಆರೋಪಿಗಳ ಹಿನ್ನೆಲೆಯ ಮೇರೆಗೆ ಆದೇಶವನ್ನು ಪೋಟೊ ಸಹಿತ ಪೊಲೀಸರು ಬಿಡುಗಡೆ ಮಾಡಿದ್ದಾರೆ . ಗಡಿಪಾರು ಮಾಡಿರುವವರು ಕಂಡುಬಂದರೆ , ಮಾಹಿತಿ ನೀಡುವಂತೆಯೂ ಕೋರಿರುವ ಪೊಲೀಸರು , ಸಾರ್ವಜನಿಕ ವಲಯದಲ್ಲಿ ಪದೇ ಪದೆ ತೊಂದರೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ .

Editor

Leave a comment