ಕರುನಾಡು ಘರ್ಜನೆ ಸುದ್ದಿ : ಗದಗ ಜನೆವರಿ 21; ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗದಗ ಇವರುಗಳ ಸಹಯೋಗದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ-2025 ನ್ನು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಮಂಗಳವಾರ ಆಚರಿಸಲಾಯಿತು.
ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಾಬರ್ಜಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ , ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ ಬಿ ಸಂಕದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಾಡ್ಲೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ನಿಜಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿ ಆಚರಣೆ ಮಾಡಲಾಯಿತು.