ಕರುನಾಡು ಘರ್ಜನೆ ಸುದ್ದಿ ರಾಯಚೂರು : ಆಕ್ಸಲ್ ಕಟ್ ಆಗಿದ್ದರಿಂದ ಕ್ರೂಸರ್ ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ. ಕ್ರೂಸರ್ ಚಾಲಕ ಜಂಸಾಲಿ ಶಿವ (24), ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹಯವದನ(18), ಸುಜೇಂದ್ರ (22) ಹಾಗೂ ಅಭಿಲಾಷ್(20) ಮೃತ ದುರ್ದೈವಿಗಳು.
ದುರ್ಘಟನೆಯಲ್ಲಿ10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಪೈಕಿ ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
14 ಜನ ಮಂತ್ರಾಲಯದಿಂದ ಕ್ರೂಸರ್ನಲ್ಲಿ ಹಂಪಿಯ ನರಹರಿ ತೀರ್ಥರ ಆರಾಧನೆಗೆ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಂತ್ರಾಲಯ ಶ್ರೀಗಳು ಆಗಮಿಸಿ ಮಾಹಿತಿ ಪಡೆದಿದ್ದಾರೆ. ಘಟನಾ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ