ಕರುನಾಡು ಘರ್ಜನೆ ಸುದ್ದಿ :ಗದಗ ಜನೆವರಿ 22: ಕುಡಿಯುವ ನೀರಿನ ಅವ್ಯವಸ್ಥೆ ಗಂಭೀರವಾಗಿ ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಪೂರೈಕೆಗೆ ಸಂಬAಧಿಸಿದAತೆ ಕಾರ್ಯಗಳ ಪಟ್ಟಿ ತಯಾರು ಮಾಡಲಾಗಿದೆ. ಶೀಘ್ರವೇ ನಿಯಮಿತ ನೀರು ಪೂರೈಕೆಗೆ ಸೂಚಿಸಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು
ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಗದಗ ಬೆಟಗೇರಿ ಅವಳಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಕುರಿತಂತೆ ಸಭೆ ಜರುಗಿಸಿ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಸದ್ಯಕ್ಕೆ ಗದಗ ನಗರಕ್ಕೆ 10 ದಿನಕ್ಕೊಂದು ಬಾರಿ ನೀರು ಪೂರೈಕೆ ಮಾಡಲಾಗುತ್ತಿದೆ. ಮುಂಚಿನ 10 ದಿನಗಳೊಳಗಾಗಿ ನೀರು ಪೂರೈಕೆ ಪ್ರಮಾಣವನ್ನು ಪ್ರತಿ ದಿವಸಕ್ಕೆ ಪೂರೈಸಲು ಕ್ರಮ ವಹಿಸಲಾಗುವುದು. ಮುಂಬರುವ ಫೆಬ್ರುವರಿ ಅಂತ್ಯಕ್ಕೆ 4 ದಿವಸಕ್ಕೊಮ್ಮೆ ನೀರು ಸರಬರಾಜು ಮಾಡಲು ಪ್ರಯತ್ನಿಸಲಾಗುವುದು. ಈ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ನೀರು ಪೂರೈಕೆ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಲಾಗಿದೆ. ನಗರದ ತಿಲಕ್ ಪಾರ್ಕ್ನಲ್ಲಿ ಓವರ್ ಹೆಡ್ ಟ್ಯಾಂಕ್ ಸ್ವಚ್ಛತೆಯ ಕಾರ್ಯ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ತುಂಗಭದ್ರಾ ನೀರು ಹಸಿರು ಬಣ್ಣ : ಜಿಲ್ಲೆಯ ಮುಂಡರಗಿ ತಾಲೂಕಿನ ತುಂಗಭದ್ರಾ ನದಿ ಪಾತ್ರದ ಕೊರ್ಲಹಳ್ಳಿ ಮತ್ತು ಗಂಗಾಪೂರ ಗ್ರಾಮಗಳ ವ್ಯಾಪ್ತಿಯ ನೀರು ಹಸಿರು ಬಣ್ಣಕ್ಕೆ ತಿರುಗಿರುವುದನ್ನು ಗಮನಿಸಿ,ಜಿಲ್ಲಾಡಳಿತ ಈಗಾಗಲೇ ತಾಲೂಕಾ ಆಡಳಿತ ಮತ್ತು ಸಂಬAಧಿಸಿದ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ್ದು, ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳಿಗೆ ಸದರಿ ವಿಷಯದ ಬಗ್ಗೆ ಸೂಕ್ತ ಕ್ರಮವಹಿಸಲು ಸೂಚಿಸಲಾಗಿತ್ತು. ನೀರು ಹಸಿರು ಬಣ್ಣಕ್ಕೆ ತಿರುಗಲು ಕಾರಣವಾಗಿರುವ ಅಂಶಗಳನ್ನು ಪತ್ತೆಹಚ್ಚಲು ನದಿ ನೀರಿನ ಮಾದರಿಯನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ಪರೀಕ್ಷಿಸಲಾಗಿದ್ದು ಸದರಿ ನೀರು ಕುಡಿಯಲು ಯೋಗ್ಯವಿಲ್ಲವೆಂದು ವರದಿ ನೀಡಿರುತ್ತಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ವಿಜಯನಗರ ಶುಗರ್ ಪ್ರೆöÊವೇಟ್ ಲಿಮಿಟೆಡ್‌ನವರು ಕಾರ್ಖಾನೆಯ ತ್ಯಾಜ್ಯವನ್ನು ನದಿಗೆ ನೀರು ಬಿಡುಗಡೆ ಮಾಡದಂತೆ ನಿರ್ಬಂಧಿಸಿದ್ದಾರೆ. ಈ ಕುರಿತು ಸ್ಥಳ ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಹಂತದಲ್ಲಿ ತಂಡ ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಆತಂಕ ಪಡುವ ಅವಶ್ಯತೆ ಇಲ್ಲವೆಂದು ಸಚಿವರು ತಿಳಿಸಿದರು.