Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಹಾವೇರಿ | ಬಾಲಕನ ಕೆನ್ನೆಯ ಗಾಯಕ್ಕೆ ಸ್ಟಿಚ್ ಬದಲು ಫೆವಿಕ್ವಿಕ್ ಹಾಕಿದ ನರ್ಸ್ಂ..! ಅಯ್ಯೋ ಏನ್ರೀ ಇದು ಡಾಕ್ಟರೆ 

ಕರುನಾಡು ಘರ್ಜನೆ ಸುದ್ದಿ ಹಾವೇರಿ: ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ ಹಾಕಿದ ವಿಚಿತ್ರ ಘಟನೆ ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.   ಜನವರಿ 14ರಂದು ನಡೆದ ಘಟನೆ…

ಕರುನಾಡು ಘರ್ಜನೆ ಸುದ್ದಿ ಹಾವೇರಿ: ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ ಹಾಕಿದ ವಿಚಿತ್ರ ಘಟನೆ ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

 

ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್‌ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ ಜ್ಯೋತಿ ಚಿಕಿತ್ಸೆ ನೀಡುವಾಗ ಕೆನ್ನೆಗೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದಾರೆ. ಇದು ಪೋಷಕರ ಗಮನಕ್ಕೆ ಬಂದು ಏಕೆ ಹೀಗೆ ಮಾಡಿದ್ರಿ ಎಂದು ದಾದಿಯನ್ನು ಕೇಳಿದಾಗ, ಕೆನ್ನೆಗೆ ಸ್ಟಿಚ್ ಹಾಕಿದ್ರೆ ಕಲೆ ಆಗುತ್ತದೆ. ಅದಕ್ಕೆ ಫೆವಿಕ್ವಿಕ್ ಹಾಕಿದ್ದೇನೆ.

ಕಳೆದ ಐದು ವರ್ಷದಿಂದ ಇದನ್ನೇ ಮಾಡುತ್ತಿದ್ದೇನೆ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ. ಇದರಿಂದ ಕಂಗಾಲಾದ ಪೋಷಕರು, ಆರೋಗ್ಯ ಕೇಂದ್ರದ ರಕ್ಷಣಾ ಸಮಿತಿಗೆ ದೂರು ಕೊಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ ಹಾನಗಲ್ ಡಿಹೆಚ್‌ಓ ಎಚ್ಚೆತ್ತು ವರದಿ ಪಡೆದು ಕ್ರಮ ಜರುಗಿಸಲು ಮುಂದಾಗಿದ್ದಾರೆ.

Editor

Leave a comment