Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಳಗಾವಿ | ಅಪ್ರಾಪ್ತೆಯಿಂದ ಕಂಡಕ್ಟರ್ ಮೇಲೆ ಪೋಕ್ಸೋ FIR ದಾಖಲು..!

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ: ಗಡಿ ಜಿಲ್ಲೆಯಲ್ಲಿ ಮತ್ತೊಮ್ಮೆ ಕನ್ನಡಿಗರ ಸ್ವಾಭಿಮಾನ ಕುದಿಯುವಂತ ವಾತಾವರಣ ನಿರ್ಮಾಣವಾಗಿದೆ. ಮರಾಠಿ ಪುಂಡರಿಂದ ಕಂಡಕ್ಟರ್ ಮೇಲೆ ನಡೆದಿದ್ದ ಹಲ್ಲೆ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಸ್ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲು ಮಾಡಿರೋದಕ್ಕೆ ತೀವ್ರ…

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ: ಗಡಿ ಜಿಲ್ಲೆಯಲ್ಲಿ ಮತ್ತೊಮ್ಮೆ ಕನ್ನಡಿಗರ ಸ್ವಾಭಿಮಾನ ಕುದಿಯುವಂತ ವಾತಾವರಣ ನಿರ್ಮಾಣವಾಗಿದೆ. ಮರಾಠಿ ಪುಂಡರಿಂದ ಕಂಡಕ್ಟರ್ ಮೇಲೆ ನಡೆದಿದ್ದ ಹಲ್ಲೆ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಸ್ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲು ಮಾಡಿರೋದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

 

ಘಟನೆ ಹಿನ್ನೆಲೆ

ನಿನ್ನೆ ಬೆಳಗಾವಿಯ ಮಾರಿಹಾಳ ಬಳಿ ಬಸ್ ಕಂಡಕ್ಟರ್‌ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದರು. ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಪೊಲೀಸರು ಮರಾಠಿ ಪುಂಡರನ್ನ ಬಂಧಿಸಿದ್ದರು. ಇದೀಗ ಅದೇ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಯಿಂದ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ.ಕಂಡಕ್ಟರ್ ಮೇಲಿನ ಈ ಹಲ್ಲೆ ಕೇಸ್ನಿಂದ ಕರ್ನಾಟಕ & ಮಹಾರಾಷ್ಟ್ರ ಗಡಿಯಲ್ಲಿ ದ್ವೇಷದ ವಾತಾವರಣವೇ ಭುಗಿಲೆದ್ದಿದೆ. ಕರ್ನಾಟಕದಲ್ಲಿ ಕರವೇ, ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.ಕೊಲ್ಹಾಪುರದಲ್ಲಿ ಠಾಕ್ರೆ ಬಣದ ಶಿವಸೇನೆ ಬೆಂಬಲಿಗರು ಕರ್ನಾಟಕ ರಸ್ತೆ ಸಾರಿಗೆ ಬಸ್‌ಗಳ ಮೇಲೆ ಭಗವಾ ಧ್ವಜವನ್ನು ಕಟ್ಟಿ ಪುಂಡಾಟ ಮೆರೆದಿದ್ದಾರೆ. ಅತ್ತ ಶಿವಸೇನೆ ಕರ್ನಾಟಕಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲು ಪಟ್ಟು ಹಿಡಿದಿದ್ರೆ, ಇತ್ತ ಕರವೇ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಪೋಕ್ಸೋ ಕೇಸ್ ಹಾಕಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಂಡಕ್ಟರ್ ಮೇಲೆ ಹಲ್ಲೆ ಮಾಡಿದವರನ್ನ ಜೈಲಿಗೆ ಕಳಿಸಿದ್ದಾರೆ. ಹೀಗೆ ಪುಂಡಾಟಿಕೆ ಮಾಡಿದ್ರೆ ಗೃಹ ಸಚಿವರಿಗೆ ಆರೋಪಿಗಳನ್ನು ಗಡಿಪಾರು ಮಾಡಲು ಹೇಳ್ತೀನಿ. ಬೆಳಗಾವಿಯಲ್ಲಿ ಇಂತ ಪುಂಡಾಟಗಳು ನಡೆಯುತ್ತಲೇ ಇರುತ್ತೆ. ಈ ಬಗ್ಗೆ ನಾವೆಲ್ಲಾ ಧ್ವನಿ ಎತ್ತಬೇಕು ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

Editor

Leave a comment