Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಬಳ್ಳಾರಿಯಲ್ಲಿ H5N1 ರೋಗ ಪತ್ತೆ ಹೆಚ್ಚಿದೆ ಹಕ್ಕಿ ಜ್ವರ ಭೀತಿ: ಒಂದೇ ಫಾರಂನಲ್ಲಿ 10,000 ಕೋಳಿಗಳ ಸಾವು..!

ಕರುನಾಡು ಘರ್ಜನೆ ಸುದ್ದಿ ಬಳ್ಳಾರಿ: H5N1 ವೈರಸ್ ಪರಿಣಾಮ ಬಳ್ಳಾರಿ ಜಿಲ್ಲೆಯ ಕೋಳಿ ಸಾಕಣೆ ಕೇಂದ್ರಗಳಲ್ಲಿ ಸುಮಾರು 10,000 ಕೋಳಿಗಳು ಸಾವನ್ನಪ್ಪಿದ್ದು, ಈ ಬೆಳವಣಿಗೆ ಜಿಲ್ಲೆಯಲ್ಲಿ ಹಕ್ಕಿ ಜ್ವರ ಕುರಿತ ಆತಂಕ ಹೆಚ್ಚಾಗುವಂತೆ ಮಾಡಿದೆ.   ಕುರೇಕೊಪ್ಪ ಗ್ರಾಮದ ಸರ್ಕಾರಿ ಕೋಳಿ…
Compressed by jpeg-recompress

ಕರುನಾಡು ಘರ್ಜನೆ ಸುದ್ದಿ ಬಳ್ಳಾರಿ: H5N1 ವೈರಸ್ ಪರಿಣಾಮ ಬಳ್ಳಾರಿ ಜಿಲ್ಲೆಯ ಕೋಳಿ ಸಾಕಣೆ ಕೇಂದ್ರಗಳಲ್ಲಿ ಸುಮಾರು 10,000 ಕೋಳಿಗಳು ಸಾವನ್ನಪ್ಪಿದ್ದು, ಈ ಬೆಳವಣಿಗೆ ಜಿಲ್ಲೆಯಲ್ಲಿ ಹಕ್ಕಿ ಜ್ವರ ಕುರಿತ ಆತಂಕ ಹೆಚ್ಚಾಗುವಂತೆ ಮಾಡಿದೆ.

 

ಕುರೇಕೊಪ್ಪ ಗ್ರಾಮದ ಸರ್ಕಾರಿ ಕೋಳಿ ಸಾಕಣೆ ಕೇಂದ್ರದಲ್ಲಿ 2,400 ಕೋಳಿಗಳು ಸಾವನ್ನಪ್ಪಿವೆ. ಇದರ ಮಾದರಿಗಳನ್ನು ಮಧ್ಯಪ್ರದೇಶ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ H5N1 ಇರುವಿಕೆ ದೃಢಪಟ್ಟಿತ್ತು.

 

ಬಳಿಕ ಫೆಬ್ರವರಿ 26 ರಂದು, ಕಪ್ಪಗಲ್ಲು ಕೋಳಿ ಸಾಕಣೆ ಕೇಂದ್ರದಲ್ಲಿ 8,000 ಕೋಳಿಗಳು ಒಮ್ಮೆಲೆ ಸಾವನ್ನಪ್ಪಿವೆ, ಕೋಳಿಗಳು ಹಕ್ಕಿ ಜ್ವರದಿಂದಲೇ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಬಳ್ಳಾರಿ ಉಪ ಆಯುಕ್ತ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದ್ದಾರೆ.

 

ಪ್ರಸ್ತುತದ ಪರಿಸ್ಥಿತಿಯಲ್ಲಿ ಕೋಳಿಗಳನ್ನು ನಿರ್ವಹಿಸುವ ಕುರಿತು ಕೋಳಿ ಸಾಕಾಣೆಗಾರರಿಗೆ ತರಬೇತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಆಂಧ್ರಪ್ರದೇಶ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಜಿಲ್ಲೆಯಲ್ಲಿ ಹಕ್ಕಿ ಜ್ವರ ತಡೆಯಲು ಮತ್ತು ಪರಿಶೀಲಿಸಲು ಪಶು ಸಂಗೋಪನಾ ಇಲಾಖೆಯು 10 ತಂಡಗಳನ್ನು ರಚಿಸಿದೆ. ಈ ತಂಡಗಳು ನಿತ್ಯ ಇಲಾಖೆಗೆ ವರದಿ ನೀಡಲಿವೆ. ಜಿಲ್ಲೆಯು ಆಂಧ್ರ ಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದ್ದು, ಚೆಕ್‌ಪೋಸ್ಟ್‌ಗಳಲ್ಲೂ ಪರಿಶೀಲನೆ ನಡೆದಿದೆ. ಬಳ್ಳಾರಿಯಲ್ಲಿ ಒಟ್ಟು 74 ಕೋಳಿ ಫಾರಂಗಳಿವೆ. 14 ಮೊಟ್ಟೆ ಸಂವರ್ಧನಾ ಕೇಂದ್ರಗಳಿವೆ. ಇವುಗಳ ಮೇಲೆ ನಿಗಾ ವಹಿಸಲಾಗಿದೆ ಎಂದರು.

 

ಜಿಲ್ಲಾಧಿಕಾರಿಗಳು ಮಾತನಾಡಿ, ಜನರು ಆತಂಕ ಪಡುವ ಪರಿಸ್ಥಿತಿ ಇಲ್ಲ. ಕೋಳಿ ಮಾಂಸ, ಮೊಟ್ಟೆ ಸೇವನೆ ವೇಳೆ ಚೆನ್ನಾಗಿ ಬೇಯಿಸಿ ಸೇವಿಸಬೇಕು. ಮಾಂಸ ಸೇವಿಸುವ ಮೊದಲು ಅರ್ಧ ಗಂಟೆಗಿಂತ ಹೆಚ್ಚು ಕಾಲ ಕನಿಷ್ಠ 70 ಡಿಗ್ರಿ ಸೆಲ್ಸಿಯಸ್‌ನಲ್ಲಿ ಬೇಯಿಸಬೇಕೆಂದು ಸಲಹೆ ನೀಡಿದರು.

 

ಕಪ್ಪಗಲ್ಲು ಫಾರ್ಮ್ ಸುತ್ತಲಿನ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುತ್ತಿದೆ, ಜನರು ಭಯ ಪಡುವ ಬದಲು, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಬೇಕೆಂದು ಹೇಳಿದರು.

ವರದಿ: ಶೌಕತ್ ಕಾತರಕಿ 

Editor

Leave a comment