Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ.

ಕರುನಾಡು ಘರ್ಜನೆ ಸುದ್ದಿ : ಗದಗ  ಮಾರ್ಚ 5: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ…

ಕರುನಾಡು ಘರ್ಜನೆ ಸುದ್ದಿ : ಗದಗ  ಮಾರ್ಚ 5: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 

ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನಿಂದ ಹರಡಬಹುದಾದ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಜಾಗೃತಿ ವಹಿಸಬೇಕು. ಗ್ರಾಮಗಳಲ್ಲಿಯ ಕುಡಿಯುವ ನೀರಿನ ಮೂಲಗಳ ಪರೀಕ್ಷೆ ಹಾಗೂ ಸರಬರಾಜುವಿನ ಬಗ್ಗೆ ನಿರಂತರವಾಗಿ ಕ್ರಮವಹಿಸಬೇಕು. ಸಾಂಕ್ರಾಮಿಕ ರೋಗಗಳಾದ ಕರಳುಬೇನೆ, ಕಾಲರಾ, ವಿಷಮ ಶೀತಜ್ವರ, ಕಾಮಾಲೆ, ಕೆಎಫ್ ಡಿ, ಹಕ್ಕಿಜ್ವರ, ನಾಯಿಕಡಿತ ಹಾಗೂ ಹಾವು ಕಡಿತ ಕುರಿತು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನಿಂದ ಹರಡಬಹುದಾದ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಜಾಗೃತೆ ವಹಿಸಬೇಕು ಎಂದರು.

 

ಕುಡಿಯುವ ನೀರಿನ ಪೈಪಲೈನ್‌ಗಳಲ್ಲಿ ಕಲುಷಿತ ನೀರು ಸೇರಿಕೊಳ್ಳದ ಹಾಗೆ ಕ್ರಮವಹಿಸಲು ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ತಿಳಿಸಬೇಕು. ಎಲ್ಲ ಓಎಚ್‌ಟಿಗಳನ್ನು ನಿಯಮಿತವಾಗಿ ಸರಿಯಾಗಿ ಸ್ವಚ್ಛಗೊಳಿಸಲು ಕ್ರಮ ವಹಿಸಬೇಕು. ಓಎಚ್‌ಟಿಗಳಲ್ಲಿ ಶೇಖರಿಸಿದ ನೀರನ್ನು ಕ್ರಮಬದ್ಧವಾಗಿ ಕ್ಲೋರಿನೇಷನ್ ಮಾಡಿ ಸರಬರಾಜು ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

 

ಕೆಎಫ್‌ಡಿ ನಿಯಂತ್ರಣಕ್ಕೆ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು. ನಾಯಿ ಕಡಿತಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳು ಜಿಲ್ಲೆಯಲ್ಲಿ ಸುಮಾರು 1000ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ನಾಯಿ ಕಡಿತಕ್ಕೆ ಸಂಬಂಧಿಸಿದಂತೆ ಲಸಿಕೆಯನ್ನು ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಕಾಯ್ದಿರಿಸಿಡಲು ನಿರ್ದೇಶಿಸಿದರು. ನಾಯಿ ಕಡಿತ ಪ್ರಕರಣಗಳನ್ನು ಹತೋಟಿಯಲ್ಲಿಡಲು ಎಬಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲು ಹಾಗೂ ಒಂದು ತಂಡವನ್ನು ರಚಿಸಿ ಮಾಂಸದ ಅಂಗಡಿಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ತಿಳಿಸುವಂತೆ ಪಶುಸಂಗೋಪನಾ ಇಲಾಖೆಗೆ ಜಿಲ್ಲಾಧಿಕಾರಿ ಸಿ ಎನ್. ಶ್ರೀಧರ್ ನಿರ್ದೇಶನ ನೀಡಿದರು.

 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ, ಸೊಳ್ಳೆಗಳಿಂದ ಹರಡುಬಹುದಾದ ರೋಗಗಳಾದ ಮಲೇರಿಯಾ, ಡೆಂಘೀ, ಚಿಕುನ್‌ಗುನ್ಯಾ ಹಾಗೂ ಮೆದುಳಜ್ವರದ ಪ್ರಕರಣಗಳನ್ನು ತಡೆಗಟ್ಟಲು ಚರಂಡಿ, ಗಟಾರಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆ ಪ್ರಮಾಣ ಹೆಚ್ಚಾಗದಂತೆ ಲಾರ್ವಾ ಸಮೀಕ್ಷೆಯನ್ನು ತೀವ್ರಗೊಳಿಸಬೇಕು ಎಂದು ಸೂಚಿಸಿದರು.

 

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ್ ಅವರು ಮಾತನಾಡಿ ಜಿಲ್ಲೆಯಲ್ಲಿ 2024 ರಲ್ಲಿ 410 -ಡೆಂಘೀ ಪ್ರಕರಣಗಳು ಹಾಗೂ 14-ಚಿಕುನ್‌ಗುನ್ಯಾ ಪ್ರಕರಣಗಳು ವರದಿಯಾಗಿವೆ ಎಂದರು. ಗದಗ ಜಿಲ್ಲೆಯು ಕೂಡ ಕೆಎಫ್‌ಡಿ ಬಾಧಿತ ಎಂಡಮಿಕ್ ಜಿಲ್ಲೆಯಾಗಿದ್ದು, ಕೆಎಫ್‌ಡಿ ವೈರಸ್‌ನಿಂದ ಸೋಂಕಿತಗೊಂಡ ಉಣ್ಣೆಯು ಕಚ್ಚುವುದರಿಂದ ಹರಡುವ ವೈರಲ್ ಜ್ವರವಾಗಿದೆ. ಈ ಖಾಯಿಲೆಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಜಿಲ್ಲೆಯಿಂದ ಈಗಾಗಲೇ 11 ರಕ್ತದ ಮಾದರಿಗಳನ್ನು ಹಾಗೂ 16-ಟಿಕ್‌ಪೂಲ್ ಮಾದರಿಗಳನ್ನು ಕೆಎಫ್‌ಡಿ ವೈರಸ್ ಪತ್ತೆಗಾಗಿ ವಿಡಿಎಲ್ ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲ ರಕ್ತದ ಮಾದರಿಗಳು ನೆಗೆಟಿವ್ ಎಂದು ವರದಿಯಾಗಿದ್ದು, ಟಿಕ್‌ಪೂಲ್ ಮಾದರಿಗಳ ಫಲಿತಾಂಶ ನಿರೀಕ್ಷಣೆಯಲ್ಲಿವೆ. ಜಿಲ್ಲೆಯಲ್ಲಿ ಯಾವುದೇ ಮಂಗಗಳ ಸಾವಿನ ವರದಿಯಾಗಿರುವುದಿಲ್ಲ ಹಾಗೂ ಕೆಎಫ್‌ಡಿ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳ ಪಾತ್ರವನ್ನು ಜಿಲ್ಲಾ ಸಮೀಕ್ಷಣಾಧಿಕಾರಿಗಳು ಸಭೆಗೆ ತಿಳಿಸಿದರು.

 

ಜಿಲ್ಲೆಯಲ್ಲಿ 2024 ರಲ್ಲಿ ಒಟ್ಟು 206 ಹಾವು ಕಡಿತದ ಪ್ರಕರಣಗಳು ವರದಿಯಾಗಿದ್ದು, ಪ್ರಕರಣಗಳಿಗೆ ಸಂಬಂಧಿಸಿದಂತೆ ಲಸಿಕೆಗಳನ್ನು ಅಗತ್ಯಕ್ಕನುಗುಣವಾಗಿ ಆರೋಗ್ಯ ಸಂಸ್ಥೆಗಳಲ್ಲಿ ಕಾಯ್ದಿರಿಸಿಡಲು ನಿರ್ದೇಶಿಸಿದರು. ಹಾವು ಕಡಿತದ ಹೊಸದಾಗಿ ನಿರ್ದೇಶನಾಲಯದ ಮಾರ್ಗಸೂಚಿಯನ್ನು ಅನುಸರಿಸಿ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳಿಗೆ ತರಬೇತಿಯನ್ನು ನೀಡಲು ಹಾಗೂ ರಾಷ್ಟ್ರೀಯ ಅಯೋಡಿನ್ ಕೊರತೆಯ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಅಯೋಡಿನ್ ಮಹತ್ವವನ್ನು ತಿಳಿಸುವ ಆರೋಗ್ಯ ಶಿಕ್ಷಣವನ್ನು ನೀಡಲು ಸೂಚಿಸಲಾಯಿತು.

 

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ಎಂ.ಬಿ.ಸಂಕದ, ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Editor

Leave a comment