Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಬೆಂಗಳೂರು | ಡಿ ಕೆ ಶಿವಕುಮಾರ್ ಹೇಳಿಕೆ ಬೆನ್ನಲ್ಲೇಯ ಖ್ಯಾತ ನಿರ್ದೇಶಕನ ಸಿನಿಮಾ ಶೂಟಿಂಗ್ ಮೇಲೆ ದಾಳಿ..!

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿನಿಮಾದವರು ಬರಲಿಲ್ಲ ಎಂಬ ಕಾರಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. ಯಾರಿಗೆ ಎಲ್ಲಿ ಹೇಗೆ ನಟ್ಟು ಬೋಲ್ಟ್‌ ಟೈಟ್‌ ಮಾಡಬೇಕು ಗೊತ್ತಿದೆ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ…

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿನಿಮಾದವರು ಬರಲಿಲ್ಲ ಎಂಬ ಕಾರಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. ಯಾರಿಗೆ ಎಲ್ಲಿ ಹೇಗೆ ನಟ್ಟು ಬೋಲ್ಟ್‌ ಟೈಟ್‌ ಮಾಡಬೇಕು ಗೊತ್ತಿದೆ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ಪರ ವಿರೋಧದ ಚರ್ಚೆ ನಡೆಯುತ್ತಿರುವಾಗಲೇ ಕನ್ನಡ ಸಿನಿಮಾವೊಂದರ ಶೂಟಿಂಗ್‌ಗೆ ಅಡ್ಡಿಪಡಿಸಲಾಗಿದೆ. ಡಿಕೆಶಿ ಹೇಳಿಕೆ ಬೆನ್ನಲ್ಲೇ ಅಧಿಕಾರಿಗಳು ಶೂಟಿಂಗ್‌ಗೆ ಅಡ್ಡಿಪಡಿಸಿರುವುದು ಅನುಮಾನ ಮೂಡಿಸಿದೆ.

ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ತರುಣ್‌ ಸುಧೀರ್‌ ಅವರ ಸಿನಿಮಾ ಶೂಟಿಂಗ್‌ ಬಂದ್‌ ಮಾಡಿರುವುದಾಗಿ ವರದಿಯಾಗಿದೆ. ತುಮಕೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ನಾಮದ ಚಿಲುಮೆ ಅರಣ್ಯ ಪ್ರದೇಶದಲ್ಲಿ ತರುಣ್‌ ಸುಧೀರ್‌ ಅವರು ನಿರ್ಮಾಣ ಮಾಡುತ್ತಿರುವ ಸಿನಿಮಾದ ಶೂಟಿಂಗ್‌ ನಡೆಯುತ್ತಿತ್ತು. ಈ ವಿಚಾರ ತಿಳಿದು ಸ್ಥಳಕ್ಕೆ ದಿಢೀರ್‌ ಭೇಟಿ ನೀಡಿದ ಅರಣ್ಯ ಇಲಾಖೆ ಸಹಾಯಕ ಸಂರಕ್ಷಣಾಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.ನಾಮದ ಚಿಲುಮೆ ಅರಣ್ಯ ಪ್ರದೇಶದಲ್ಲಿ ಯಾವುದೇ ಅನುಮತಿ ಇಲ್ಲದೇ ಚಿತ್ರತಂಡ ಶೂಟಿಂಗ್‌ ಮಾಡುತ್ತಿತ್ತು. ಹೀಗಾಗಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸ್ಥಳದಲ್ಲಿದ್ದ ಚಿತ್ರತಂಡದ ಶೂಟಿಂಗ್ ಲೈಟ್ ಸೇರಿದಂತೆ ಕೆಲ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಆದರೆ ಸಿನಿಮಾವನ್ನು ತರುಣ್‌ ಸುಧೀರ್‌ ನಿರ್ಮಾಣ ಮಾಡುತ್ತಿದ್ದಾರೆ.ಇನ್ನೂ ಹೆಸರಿಡದ ಸಿನಿಮಾ ಶೂಟಿಂಗ್ ಅರಣ್ಯ ಭೂಮಿಯಲ್ಲಿ ನಡೆದ ಆರೋಪದ ಮೇರೆಗೆ ತುಮಕೂರಿನ ಸಹಾಯಕ ಸಂರಕ್ಷಣಾಧಿಕಾರಿಗಳ ತಂಡ ದಾಳಿ ನಡೆಸಿದೆ. ಇನ್ನು ಕಳೆದ ಐದು ದಿನಗಳಿಂದ ಚಿತ್ರತಂಡ ಇಲ್ಲಿ ಶೂಟಿಂಗ್‌ ನಡೆಸುತ್ತಿರುವುದು ತಿಳಿದುಬಂದಿದೆ. ನಿಯಮ ಉಲ್ಲಂಘಿಸಿದ ಆರೋಪದ ಮೇರೆಗೆ ಚಿತ್ರತಂಡದ ಶೂಟಿಂಗ್ ಲೈಟ್, ಚೇರ್‌ಗಳು, ಅಡುಗೆ ಸಾಮಾಗ್ರಿಗಳು ಹಾಗೂ ಶೂಟಿಂಗ್‌ ವಾಹನವನ್ನು ಕೂಡ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.ತುಮಕೂರಿನ ಪ್ರಸಿದ್ಧ ನಾಮದ ಚಿಲುಮೆ ಗೇಟ್ ಬಳಿ ಶೂಟಿಂಗ್ ನಡೆದಿದ್ದು, ದಾಳಿ ವೇಳೆ ತರುಣ್ ಸುಧೀರ್ ಕ್ರಿಯೇಟಿವ್ ಚಿತ್ರತಂಡ ಅಲ್ಲೇ ಇತ್ತು ಎನ್ನಲಾಗಿದೆ. ಈ ಸಿನಿಮಾದಲ್ಲಿ ನಟಿ ರಕ್ಷಿತಾ ಸಹೋದರ ರಾಣಾ ನಟಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಕ್ಯಾರವಾನ್, ಕ್ಯಾಮರಾ ಲೈಟ್ ಸೇರಿದಂತೆ ಸಿನಿಮಾ ಶೂಟಿಂಗ್‌ಗೆ ಸಂಬಂಧಿಸಿದ ಪರಿಕರಗಳು ಪತ್ತೆಯಾಗಿವೆ.ನಾಮದ ಚಿಲುಮೆಯು ಪೌರಾಣಿಕ ಹಿನ್ನೆಲೆಯುಳ್ಳ ಹಾಗೂ ವನ್ಯ ಜೀವಿಗಳಿರುವ ಅರಣ್ಯ ಪ್ರದೇಶವಾಗಿದ್ದು, ಇಲ್ಲಿ ಶೂಟಿಂಗ್‌ ಮಾಡಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ. ಆದರೂ ಇಲ್ಲಿನ ಪ್ರಾಣಿ-ಪಕ್ಷಿಗಳಿಗೆ ತೊಂದರೆಯಾಗುತ್ತೆ ಎಂದು ಸ್ಥಳೀಯರಿಂದ ವಿರೋಧವೂ ವ್ಯಕ್ತವಾಗಿದೆ. ಶೂಟಿಂಗ್‌ನಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು ಎಂದು ಹೇಳಲಾಗಿದೆ. ಡಿ.ಕೆ.ಶಿವಕುಮಾರ್‌ ಅವರು ಚಿತ್ರರಂಗದವರ ಮೇಲೆ ಕೋಪದಿಂದ ಆಡಿರುವ ಮಾತುಗಳ ನಡುವೆಯೇ ಈ ಘಟನೆ ನಡೆದಿರುವುದು ಸಂಚಲನ ಸೃಷ್ಟಿಸಿದೆ. ಡಿಕೆಶಿ ಹೇಳಿದಂತೆ ನಟ್ಟು ಬೋಲ್ಟು ಟೈಟ್‌ ಮಾಡಲು ಶುರು ಮಾಡಿದ್ರಾ? ಎಂಬ ಚರ್ಚೆಯೂ ನಡೆಯುತ್ತಿದೆ.

 

Editor

Leave a comment