Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜಕೀಯ

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ಬಜೆಟ್.

ಕರುನಾಡು ಘರ್ಜನೆ ಸುದ್ದಿ : ಪ್ರವಾಸೋದ್ಯಮ 382. ರಾಜ್ಯದಲ್ಲಿ ಪ್ರವಾಸೋದ್ಯಮ ವಲಯದ ವಿಪುಲ ಅವಕಾಶ ಮತ್ತು ಸಾಮರ್ಥ್ಯದ ಸದ್ಬಳಕೆ ಮಾಡಿಕೊಳ್ಳಲು ನೂತನ ಪ್ರವಾಸೋದ್ಯಮ ನೀತಿ 2024-29 ನ್ನು ಜಾರಿಗೊಳಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರವನ್ನು ಆಶಾದಾಯಕ ಮತ್ತು ಸುಸ್ಥಿರ ಅಭಿವೃದ್ಧಿಯ ಮೂಲಕ ಆದ್ಯತೆಯ ವಲಯವಾಗಿಸುವ…

ಕರುನಾಡು ಘರ್ಜನೆ ಸುದ್ದಿ : ಪ್ರವಾಸೋದ್ಯಮ

382. ರಾಜ್ಯದಲ್ಲಿ ಪ್ರವಾಸೋದ್ಯಮ ವಲಯದ ವಿಪುಲ ಅವಕಾಶ ಮತ್ತು ಸಾಮರ್ಥ್ಯದ ಸದ್ಬಳಕೆ ಮಾಡಿಕೊಳ್ಳಲು ನೂತನ ಪ್ರವಾಸೋದ್ಯಮ ನೀತಿ 2024-29 ನ್ನು ಜಾರಿಗೊಳಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರವನ್ನು ಆಶಾದಾಯಕ ಮತ್ತು ಸುಸ್ಥಿರ ಅಭಿವೃದ್ಧಿಯ ಮೂಲಕ ಆದ್ಯತೆಯ ವಲಯವಾಗಿಸುವ ಉದ್ದೇಶ ಹೊಂದಿರುವ

ಈ ನೀತಿಯಿಂದ ರಾಜ್ಯದಲ್ಲಿ 8,000 ಕೋಟಿ ರೂ. ಹೂಡಿಕೆಯ ನಿರೀಕ್ಷೆ ಹಾಗೂ 1.5 ಲಕ್ಷ ಉದ್ಯೋಗ ಸೃಜನೆಯ ಗುರಿ ಹೊಂದಿದ್ದೇವೆ.

383. ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳವಾದ ಸವದತ್ತಿಯ

ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಹಾಗೂ ಬೆಂಗಳೂರಿನಲ್ಲಿರುವ ದೇವಿಕಾರಾಣಿ ರೋರಿಚ್‌ ಎಸ್ಟೇಟ್‌ ಅನ್ನು ವಿಶೇಷ ಬಂಡವಾಳ ಯೋಜನೆಯಡಿ ಒಟ್ಟಾರೆ 199 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

384. ರಾಜ್ಯದ ಆಯ್ದ 10 ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು 2025-26ನೇ ಸಾಲಿನಲ್ಲಿ 50 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.

385. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಅಭಿವೃದ್ಧಿ ಹಾಗೂ ರಸ್ತೆಬದಿ ಸೌಲಭ್ಯಗಳನ್ನು

(Highway Hubs) ಉನ್ನತೀಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಹಸ, ಪರಿಸರ, ಜಲಸಾರಿಗೆ ಹಾಗೂ ಕಡಲ ತೀರದ ಪ್ರವಾಸೋದ್ಯಮಗಳಿಗೆ ಲಭ್ಯವಿರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು.

386. UNESCO ಪಾರಂಪರಿಕ ಪ್ರವಾಸಿ ತಾಣಗಳ

ಪಟ್ಟಿಗೆ ಸೇರ್ಪಡೆಗೊಂಡಿರುವ ಬೇಲೂರು-ಹಳೇಬೀಡು-ಸೋಮನಾಥಪುರ ಪ್ರವಾಸಿ ತಾಣಗಳಲ್ಲಿ ಮೂಲಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.

387. ಪ್ರವಾಸಿಗರ ಸುರಕ್ಷತೆಗಾಗಿ ಪ್ರವಾಸಿ ತಾಣಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವಾಸಿ ಮಿತ್ರರಿಗೆ ತರಬೇತಿ ನೀಡಿ ಅವರ ಸಂಖ್ಯೆಯನ್ನು 1,000 ಕ್ಕೆ ಹೆಚ್ಚಿಸಲಾಗುವುದು ಹಾಗೂ ಪ್ರವಾಸಿಗರಿಗೆ ಮಾಹಿತಿ ನೀಡಲು 24X7 ಪ್ರವಾಸಿ ಸಹಾಯವಾಣಿ ತೆರೆಯಲಾಗುವುದು.

388. ರಾಜ್ಯದ ಸ್ಮಾರಕಗಳ ಸಂರಕ್ಷಣೆಗೆ ಅಗತ್ಯವಾಗಿರುವ ಮೂಲಸೌಕರ್ಯಗಳನ್ನು ಸೃಷ್ಟಿಸಲು 25 ಸ್ಮಾರಕಗಳನ್ನು ದತ್ತು ನೀಡಲಾಗಿದೆ. ಮುಂದಿನ ಹಂತದಲ್ಲಿ ಇನ್ನೂ ಹೆಚ್ಚಿನ ಸ್ಮಾರಕಗಳನ್ನು ʻನಮ್ಮ ಸ್ಮಾರಕʼ ಡಿಜಿಟಲ್‌ ವೇದಿಕೆಯ ಮುಖಾಂತರ ದತ್ತು ನೀಡಲು ಉದ್ದೇಶಿಸಲಾಗಿದೆ.

389. ರಾಜ್ಯದ ಪ್ರವಾಸಿ ತಾಣಗಳ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲು ONE-TAC Digital Grid ಅನ್ನು ಉಪಯೋಗಿಸಲಾಗುವುದು.

390. ಐತಿಹಾಸಿಕ ಲಕ್ಕುಂಡಿಯಲ್ಲಿನ ಪಾರಂಪರಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುವುದು ಹಾಗೂ ಪ್ರಾಚ್ಯಾವಶೇಷಗಳ ಸಂರಕ್ಷಣೆಗಾಗಿ ಬಯಲು ವಸ್ತು ಸಂಗ್ರಹಾಲಯವನ್ನು ಪ್ರಾರಂಭಿಸಲಾಗುವುದು.

391. ರಾಜ್ಯದ ಸಂಸ್ಕೃತಿ, ನಾಗರಿಕತೆಯ ಉಗಮ, ವಿಕಾಸಗಳೂ ಸೇರಿದಂತೆ ಐತಿಹಾಸಿಕ, ಸಾಮಾಜಿಕ ಸಂಗತಿಗಳನ್ನು ಬಿಂಬಿಸುವ ರಾಜ್ಯ ಮಟ್ಟದ ವಸ್ತು ಸಂಗ್ರಹಾಲಯವನ್ನು ಮೈಸೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸ್ಥಾಪಿಸಲಾಗುವುದು.

Editor

Leave a comment