Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಂಗಳೂರು : ಅಲ್ಪಸಂಖ್ಯಾತರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ಸ್ವಾಗತ..!

ಕರುನಾಡು ಘರ್ಜನೆ ಸುದ್ದಿ : ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರ ಈ ಸಲದ ಬಜೆಟ್ ಸಮಸ್ತ ಅಲ್ಪಸಂಖ್ಯಾತ ಸಮುದಾಯಗಳಿಗೆ ಪ್ರಾಮುಖ್ಯತೆ ನೀಡಿರುವುದು ಸ್ವಾಗತರ್ಹವಾಗಿದೆ. ಇನ್ನು ಉತ್ತರ ಕರ್ನಾಟಕದ ಮುಸ್ಲಿಂ ಸಮುದಾಯದವರು ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡದಲ್ಲಿ ಹಜ್ ಭವನದ ನಿರ್ಮಾಣ ಕನಸಾಗಿ ಉಳಿದಿದೆ…

ಕರುನಾಡು ಘರ್ಜನೆ ಸುದ್ದಿ : ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರ ಈ ಸಲದ ಬಜೆಟ್ ಸಮಸ್ತ ಅಲ್ಪಸಂಖ್ಯಾತ ಸಮುದಾಯಗಳಿಗೆ ಪ್ರಾಮುಖ್ಯತೆ ನೀಡಿರುವುದು ಸ್ವಾಗತರ್ಹವಾಗಿದೆ. ಇನ್ನು ಉತ್ತರ ಕರ್ನಾಟಕದ ಮುಸ್ಲಿಂ ಸಮುದಾಯದವರು ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡದಲ್ಲಿ ಹಜ್ ಭವನದ ನಿರ್ಮಾಣ ಕನಸಾಗಿ ಉಳಿದಿದೆ ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ರಾಜ್ಯಾಧ್ಯಕ್ಷರಾದ ಮಹ್ಮದಶಫಿ ನಾಗರಕಟ್ಟಿ ಹೇಳಿದ್ದಾರೆ.

 

ಗದಗಿನ ಕೇಂದ್ರ ಕಚೇರಿಯಲ್ಲಿ ಬಜೆಟ್ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಮಹ್ಮದಶಫಿ ನಾಗರಕಟ್ಟಿ ಮಾತನಾಡುತ್ತಾ. ಈ ಸಲದ ಬಜೆಟ್ ಅಲ್ಪಸಂಖ್ಯಾತರಗಳಾದ ಮುಸ್ಲಿಂ, ಕ್ರಿಶ್ಚಿಯನ್ ಜೈನ್,ಸಿಖ್ಖ್ ಮತ್ತು ಪಾರ್ಸಿ ಸಮುದಾಯಗಳನ್ನು ಒಳಗೊಂಡು ಅವರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ.

 

ರಾಜ್ಯ ಸರ್ಕಾರ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿ.ಯು ವರೆಗೂ ತರಗತಿಗಳನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ ಒಟ್ಟಾರೆ 500 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗುವುದು. ಪ್ರಸಕ್ತ ವರ್ಷದಲ್ಲಿ 100 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.

 

ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸದರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು. ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿಯಿರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಕ್ರಮವಹಿಸಿ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಒಟ್ಟಾರೆ 400 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನವಾಗಲಿರುವ ಈ ಯೋಜನೆಗೆ ಈ ವರ್ಷದಲ್ಲಿ 100 ಕೋಟಿ ರೂ. ಒದಗಿಸಲಾಗಿದೆ 2023-24ನೇ ಸಾಲಿನಲ್ಲಿ ಪದವಿ ಪೂರ್ವ ತರಗತಿಗಳನ್ನು ಪ್ರಾರಂಭಿಸಲಾಗಿರುವ 62 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲಾಗುವುದು. ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯಡಿ 1,000 ಕೋಟಿ ರೂ. ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಕಾಮಗಾರಿಗಳನ್ನು 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುವುದು. ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣವನ್ನು ನೀಡಲು ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಇತ್ಯಾದಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಈ ವಿದ್ಯಾರ್ಥಿಗಳು ಎನ್‌ಐಓಎಸ್ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶವಾಗುವಂತೆ ಸಜ್ಜುಗೊಳಿಸಲಾಗುವುದು. ವಕ್ಪ್ ಸಂಸ್ಥೆಗಳ ದುರಸ್ತಿ,

ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯಕ್ಕಾಗಿ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ. ಒದಗಿಸಲಾಗಿದೆ. ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೃತ್ತಿ ಮಾರ್ಗದರ್ಶನಕ್ಕೆ ತರಬೇತಿ ನೀಡಲಾಗುವುದು. ಪದವಿ ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತೆರೆದು, ವಿವಿಧ ಪದವಿ/ಸ್ನಾತಕೋತ್ತರ ಪದವಿ ಶಿಕ್ಷಣ ನೀಡಲಾಗುವುದು. ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ. ನೀಡಲಾಗುವುದು.

 

ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡವನ್ನು ನಿರ್ಮಿಸಲಾಗುವುದು. ಅಲ್ಪಸಂಖ್ಯಾತ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೂರಕವಾಗಿ 2024-25ನೇ ಸಾಲಿನಲ್ಲಿ ವಕ್ಫ್ ಸಂಸ್ಥೆಗಳ ಖಾಲಿ ನಿವೇಶನಗಳಲ್ಲಿ 15 ಮಹಿಳಾ ಕಾಲೇಜುಗಳ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಮುಂದುವರೆದು, 2025-26ನೇ ಸಾಲಿನಲ್ಲಿ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು.

ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 2 ಕೋಟಿ ರೂ. ಅನುದಾನ. ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಹಾಗೂ ಮಹಾಭೋಧಿ ಅಧ್ಯಯನ ಕೇಂದ್ರದ 100 ವರ್ಷಗಳ ಹಳೆಯ ಗ್ರಂಥಾಲಯವನ್ನು 1 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಿ

 

ಉನ್ನತೀಕರಿಸಲಾಗುವುದು. ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ. ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗಾಗಿ 250 ಕೋಟಿ ರೂ. ಒದಗಿಸಲಾಗುವುದು. ಪ್ರಾಚೀನ ಬೌದ್ಧ ಕೇಂದ್ರವಾಗಿರುವ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ಸನ್ನತಿ ಅಭಿವೃದ್ಧಿ ಪ್ರಾಧಿಕಾರ.ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಹೋಬಳಿ ಮತ್ತು ತಾಲ್ಲೂಕು ಮಟ್ಟದಲ್ಲಿ 50 ಲಕ್ಷ ರೂ. ಹಾಗೂ ಜಿಲ್ಲಾ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಬಹುಪಯೋಗಿ ಭವನಗಳನ್ನು ನಿರ್ಮಿಸಲಾಗುವುದು. ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶಗಳಲ್ಲಿರುವ ಐ.ಟಿ.ಐ ಗಳಲ್ಲಿ ಹೊಸ ಕೋರ್ಸ್‌ಗಳನ್ನು ಹಾಗೂ ಹೆಚ್ಚುವರಿ ತರಗತಿ ಪ್ರಾರಂಭಿಸಿ ಯೋಜನೆ ಒಳ್ಳೆ ಬೆಳವಣಿಗೆಗಳಾಗಿವೆ ಎಂದು ಹೇಳಿದರು.

 

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರು ಹಾಗೂ ಗದಗ ಜಿಲ್ಲಾ ಧಾರವಾಡ ಜಿಲ್ಲಾ ಉಸ್ತುವಾರಿಗಳಾದ ಎಂ ಡಿ ಜಾಫರ್ ಡಾಲಾಯತ, ಮುನ್ನ ಕಲ್ಮನಿ, ಮುಸ್ತಾಕ್ ಕಲಾದಗಿ, ಆಸಿಫ್ ಧಾರವಾಡ ಯುವ ಘಟಕದ ಅಧ್ಯಕ್ಷರಾದ ಯಾಸಿನ್ ಮುಲ್ಲಾ, ಉಪಾಧ್ಯಕ್ಷರಾದ ಅಫ್ಜಲ್ ಮನಿಯಾರ್, ಘಟಕದ ತಾಲೂಕ ಅಧ್ಯಕ್ಷರಾದ ಯುನುಸ್ ಮುಲ್ಲಾ ದರವೇಶ್, ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು..

ವಂದನೆಗಳೊಂದಿಗೆ ಮಹ್ಮದಶಫಿ ನಾಗರಕಟ್ಟಿ  ರಾಜ್ಯಾಧ್ಯಕ್ಷರು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ  9538632416

Editor

Leave a comment