Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ.

ಗದಗ ಮಾರ್ಚ್ 10: ಸರ್ಕಾರದಿಂದ ಅನುಷ್ಟಾನಿತ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಒದಗಬೇಕು. ಒಂದು ವೇಳೆ ಯೋಜನೆಗಳ ಸೌಲಭ್ಯದ ದುರುಪಯೋಗವಾಗದಂತೆ ನಿಗಾ ವಹಿಸಿ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.   ನಗರದ…

ಗದಗ ಮಾರ್ಚ್ 10: ಸರ್ಕಾರದಿಂದ ಅನುಷ್ಟಾನಿತ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಒದಗಬೇಕು. ಒಂದು ವೇಳೆ ಯೋಜನೆಗಳ ಸೌಲಭ್ಯದ ದುರುಪಯೋಗವಾಗದಂತೆ ನಿಗಾ ವಹಿಸಿ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.

 

ನಗರದ ಜಿಲ್ಲಾ ಪಂಚಾಯತ್ ವಿಡಿಯೋ ಸಭಾಂಗಣದಲ್ಲಿ ಸೋಮವಾರ ಜರುಗಿದ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನ್ನಭಾಗ್ಯ ಯೋಜನೆಯ ಸಮರ್ಪಕ ಅನುಷ್ಟಾನಕ್ಕಾಗಿ ಆಹಾರ ಇಲಾಖೆಯ ಅಧಿಕಾರಿಗಳು ಪಡಿತರ ಅಂಗಡಿದಾರರ ಜೊತೆಗೆ ಸಭೆ ನಡೆಸಬೇಕು. ಅನ್ನಭಾಗ್ಯದ ಅಕ್ಕಿಯು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ವೃಥಾ ಅಕ್ಕಿಯು ಪೋಲಾಗದಂತೆ ಜಾಗೃತೆ ವಹಿಸಬೇಕು. ನಗರದಲ್ಲಿನ ಬೀದಿ ದೀಪಗಳ ಕಂಬದ ದುರಸ್ತಿಗೆ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಜನನಿಬಿಡ ಪ್ರದೇಶಗಳಲ್ಲಿ ವಿದ್ಯುತ್ ಅವಘಡಗಳಾಗದಂತೆ ಮುಂಜಾಗ್ರತೆ ಕ್ರಮ ವಹಿಸಬೇಕೆಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

 

ಇಲಾಖೆ ಅಧಿಕಾರಿಗಳು ಗ್ಯಾರಂಟಿ ಯೋಜನೆಯ ಪ್ರಗತಿಯ ಕುರಿತು ನಿಖರ ಮಾಹಿತಿ ಒದಗಿಸಬೇಕು. ಗೃಹ ಲಕ್ಷಿö್ಮÃ ಹಾಗೂ ಯುವ ನಿಧಿ ಯೋಜನೆಯ ಕುರಿತು ಇನ್ನೂ ಹೆಚ್ಚಿನ ಅರಿವು ಮೂಡಿಸಬೇಕು. ನಗರದ ಹಳೇ ಬಸ್ ಸ್ಟಾö್ಯಂಡ್ ಹಾಗೂ ಹೊಸ ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಕ್ರಮ ವಹಿಸಬೇಕು. ನಗರದ ವಿವಿಧ ಪ್ರದೆಶಗಳಿಂದ ಜಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಓಡಾಡುತ್ತಿದ್ದು ಹೆಚ್ಚಿನ ಬಸ್‌ಗಳನ್ನು ಕಲ್ಪಿಸಲು ಕೆಎಸ್‌ಆರ್ ಟಿಸಿಯವರು ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು. ಇನ್ನೂ ಬೇಕಾಗಿರುವ ಬಸ್ ಗಳ ಸಂಖ್ಯೆ ಹಾಗೂ ಸಿಬ್ಬಂದಿಗಳ ಸಂಖ್ಯೆಗಳ ಕುರಿತು ಮಾಹಿತಿ ಒದಗಿಸಬೇಕೆಂದು ಅಶೋಕ ಮಂದಾಲಿ ತಿಳಿಸಿದರು.

 

ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಕೃಷ್ಣಗೌಡ ಎಚ್ ಪಾಟೀಲ ಅವರು ಮಾತನಾಡಿ ಗೃಹಲಕ್ಷಿö್ಮÃ ಯೋಜನೆಯ ಸಮರ್ಪಕ ಅನುಷ್ಟಾನಕ್ಕಾಗಿ ಅಂಗನವಾಡಿ ಮೇಲ್ವಿಚಾರಕಿಯರು ( ಸುಪರ್ ವೈಸರ್ ) ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಭೆ ಕರೆದು ಸರ್ವೆ ಕಾರ್ಯ ಚುರುಕುಗೊಳಿಸಬೇಕೆಂದು ತಿಳಿಸಿದರು.

ಪಂಚಗ್ಯಾರAಟಿ ಯೋಜನೆಯ ಸಂಬAಧಿತ ಅಧಿಕಾರಿಗಳು ಈ ಕೆಳಗಿನಂತೆ ಸಭೆಗೆ ಮಾಹಿತಿ ಒದಗಿಸಿದರು.

 

ಗೃಹಲಕ್ಷಿö್ಮÃ ಯೋಜನೆಯಡಿ ಡಿಸೆಂಬರ್ 2024 ರವರೆಗೆ ಗದಗ ತಾಲೂಕಿನಲ್ಲಿ 77823 ನೋಂದಣಿಯಾದ ಅರ್ಜಿಗಳ ಪೈಕಿ 76521 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. 76521 ಫಲಾನುಭವಿಗಳಿಗೆ ಡಿಬಿಡಿ ಮೂಲಕ ಹಣ ಪಾವತಿಸಲಾಗಿದೆ. ಶೇಕಡ 99.66 ಪ್ರಗತಿ ಸಾಧಿಸಿದೆ.

 

ಜಿಲ್ಲೆಯಲ್ಲಿ ವಾಕರಸಾಸಂಸ್ಥೆಯಿAದ ಗದಗ ಘಟಕದಲ್ಲಿ 11-6-2023 ರಿಂದ 05-03-2025 ರವರೆಗೆ 12578976 ಪುರುಷ ಪ್ರಯಾಣಿಕರು ಹಾಗೂ 17681952 ಮಹಿಳಾ ಪ್ರಯಾಣಿಕರು ಸೇರಿದಂತೆ ಒಟ್ಟಾರೆ 30260928 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ಗದಗ ಘಟಕದಲ್ಲಿ 5193.21 ಲಕ್ಷ ರೂ. ಮಹಿಳಾ ಪ್ರಯಾಣಿಕರ ಆದಾಯವಾಗಿದೆ. ಬೆಟಗೇರಿ ಘಟಕದಲ್ಲಿ 3149.11 ಲಕ್ಷ ಮಹಿಳಾ ಪ್ರಯಾಣಿಕರ ಆದಾಯವಾಗಿದೆ.

 

ಅನ್ನಭಾಗ್ಯ ಯೋಜನೆಯಡಿ ಗದಗ ತಾಲೂಕಿನಲ್ಲಿ ನವೆಂಬರ್ 2024 ರ ಮಾಹೆಯಲ್ಲಿ ಗದಗ ಪಡಿತರ ಪ್ರದೇಶದಲ್ಲಿ 24,428 ಬಿಪಿಎಲ್ ಕಾರ್ಡುದಾರರಿಗೆ ಹಾಗೂ 46,057 ಬಿಪಿಎಲ್ ಕಾರ್ಡುದಾರರಿಗೆ 74,485 ಡಿ.ಬಿ.ಟಿ.ಮೂಲಕ ಹಣ ಸಂದಾಯ ಮಾಡಿದೆ. ಫಲಾನುಭವಿಗಳಿಗೆ 4,02,27,440 ರೂ.ಗಳನ್ನು ಡಿಬಿಟಿ ಮೂಲಕ ಹಣ ಸಂದಾಯ ಮಾಡಲಾಗಿದೆ.

 

ಗೃಹಜ್ಯೋತಿ ಯೋಜನೆಯಡಿ 28-2-2025 ರವರೆಗೆ ಗದಗ ಗ್ರಾಮೀಣ ಉಪವಿಭಾಗದಲ್ಲಿ 53268 ಸ್ಥಾವರಗಳು ಅರ್ಹವಿದ್ದು 52909 ಸ್ಥಾವರಗಳ ನೋಂದಣಿಯಾಗಿದ್ದು ಶೇ 99.33 ರಷ್ಟು ಪ್ರಗತಿಯಾಗಿದೆ. ಗದಗ ಶಹರ ಉಪವಿಭಾಗದಲ್ಲಿ 46483 ಸ್ಥಾವರಗಳು ಅರ್ಹವಾಗಿದ್ದು 46235 ಸ್ಥಾವರಗಳ ನೋಂದಣಿಯಾಗಿದ್ದು ಶೇ 99.47 ಪ್ರಗತಿಯಾಗಿದೆ.

 

ಯುವನಿಧಿ ಯೋಜನೆಯಡಿ ಗದಗ ತಾಲೂಕಿನಲ್ಲಿ ಜನೆವರಿ 2025 ರವರೆಗೆ 1704 ಫಲಾನುಭವಿಗಳ ನೋಂದಣಿಯಾಗಿದ್ದು 826 ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ 24,57,000 ರೂ. ವರ್ಗಾವಣೆಯಾಗಿರುತ್ತದೆ ಎಂದು ಸಂಬAಧಿತ ಅಧಿಕಾರಿಗಳು ಮಾಹಿತಿ ಒದಗಿಸಿದರು.

 

ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಶಂಭು ಕಾಳೆ, ಶ್ರೀಮತಿ ಮೀನಾಕ್ಷಿ ಬೆನಕಣ್ಣವರ, ಸಂಗು ಕರಕಲಮಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ್ , ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡ, ಮಲ್ಲಪ್ಪ ಬಾರಕೇರ, ಭಾಷಾ ಮಲ್ಲಸಮುದ್ರ, ಸಾವಿತ್ರಿ ಹೂಗಾರ, ಶರೀಫ್, ತಾಲೂಕು ಪಂಚಾಯತ್ ಮ್ಯಾನೇಜರ್ ರುದ್ರಪ್ಪ ಬಾವಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನಿತ ಅಧಿಕಾರಿಗಳು ಹಾಜರಿದ್ದರು.

Editor

Leave a comment