ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಅಕ್ರಮ ಚಿನ್ನ ಸಾಗಾಣಿಕೆ ಕೇಸ್ನಲ್ಲಿ ಸಿಕ್ಕಿ ಬಿದ್ದಿರೋ ನಟಿ ರನ್ಯಾ ರಾವ್ಗೆ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ. ಇನ್ನೂ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನಟಿ ರನ್ಯಾ ರಾವ್ ಅವರನ್ನು ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಇತ್ತೀಚೆಗೆ 3 ದಿನಗಳ ಕಾಲ ಡಿಆರ್ಐ ಅಧಿಕಾರಿಗಳ ಕಸ್ಟಡಿಗೆ ನೀಡಲಾಗಿತ್ತು. ಈ ಮತ್ತೆ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಕೊಟ್ಟಿದೆ. ಚಿನ್ನ ಕಳ್ಳ ಸಾಗಾಣಿಕೆ ಕೇಸ್ನಲ್ಲಿ ರನ್ಯಾ ಹಲವು ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ.