Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಯೋಜನೆಗಳ ತಯಾರಿಕೆ ಪ್ರಕ್ರಿಯೆಯನ್ನು.

ಕರುನಾಡು ಘರ್ಜನೆ ಸುದ್ದಿ :ಗದಗ ಮಾರ್ಚ್ 13: ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಯೋಜನೆಗಳ ತಯಾರಿಕೆ ಪ್ರಕ್ರಿಯೆಯನ್ನು ಬಲವರ್ಧನೆಗೊಳಿಸುವ ಕುರಿತು ಕಾರ್ಯಾಗಾರ ಬುಧವಾರ ಜರುಗಿತು.   ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ…

ಕರುನಾಡು ಘರ್ಜನೆ ಸುದ್ದಿ :ಗದಗ ಮಾರ್ಚ್ 13: ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಯೋಜನೆಗಳ ತಯಾರಿಕೆ ಪ್ರಕ್ರಿಯೆಯನ್ನು ಬಲವರ್ಧನೆಗೊಳಿಸುವ ಕುರಿತು ಕಾರ್ಯಾಗಾರ ಬುಧವಾರ ಜರುಗಿತು.

 

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಮಾತನಾಡಿ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಕಾನೂನು ಪಾಲನೆ ಮಾಡಬೇಕಾಗುತ್ತದೆ. ಜನಪರ ಹಿತದ ಸಲುವಾಗಿ ಅಧಿಕಾರ ವಿಕೇಂದ್ರಕರಣಕ್ಕಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕಬಾರದು. ಅಭಿವೃದ್ಧಿ ಕಾಮಗಾರಿಗಳ ಸಂಪೂರ್ಣ ಅನುಷ್ಟಾನಕ್ಕಾಗಿ ತಾಲೂಕು ಮಟ್ಟದಲ್ಲಿಯೂ ಟಾಸ್ಕ್ಫೋರ್ಸ ಸಮಿತಿಗಳು ನಿಯಮಿತವಾಗಿ ಜರುಗಬೇಕು ಎಂದರು.

 

ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ಎಂ. ವಿಜಯಾನಂದ ಅವರು ಮಾತನಾಡಿ ಸಂಬAಧಿತ ಇಲಾಖಾಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳ ಕುರಿತು ಅರಿತುಕೊಳ್ಳುವುದು ಮುಖ್ಯವಾಗಿದೆ. ಗ್ರಾಮ ಸಭೆಗಳನ್ನು ಯಶಸ್ವಿಯಾಗಿ ನಡೆಸಬೇಕು. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಯೋಜನೆಗಳ ತಯಾರಿಕೆಯಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದರು.

 

ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ ಜಿಲ್ಲೆಯಿಂದ ಆಯಾ ಇಲಾಖೆಯಲ್ಲಿರುವ ಅವಶ್ಯಕತೆಗಳನ್ನು ನ್ಯೂನತೆಗಳನ್ನು ಪಟ್ಟಿಮಾಡಿ ಸರ್ಕಾರಕ್ಕೆ ಕಳುಹಿಸಿದರೆ ಇಲಾಖೆಯ ಕೇಂದ್ರ ಕಚೇರಿಯಲ್ಲಿಯೂ ಸಹ ಅನುದಾನದ ಕುರಿತು ಯೋಜನೆ ತಯಾರಿಸಲು ಸಹಾಯವಾಗುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಬೇಡಿಕೆಗಳನ್ನು ಅವಶ್ಯಕತೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕೆಂದರು.

 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಮಾಜಿ ಶಾಸಕ ಡಿ.ಆರ್.ಪಾಟೀಲ, ಗಣ್ಯರಾದ ಸಿದ್ದು ಪಾಟೀಲ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ , ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಸೇರಿದಂತೆ ಗಣ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

 

 

Editor

Leave a comment