Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ. ಪ್ರಗತಿ ಪರಿಶೀಲನೆ.

ಕರುನಾಡು ಘರ್ಜನೆ ಸುದ್ದಿ : ಗದಗ  ಮಾರ್ಚ 19 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಅರ್ಹ ಫಲಾನುಭವಿಗಳ ಆಯ್ಕೆ ಕೈಗೊಂಡು ಕಾಲಮಿತಿಯಲ್ಲಿಯೇ ಅವರಿಗೆ ಸೌಲಭ್ಯ ದೊರಕಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.   ಜಿಲ್ಲಾಡಳಿತ ಭವನದ ಕಚೇರಿ…

ಕರುನಾಡು ಘರ್ಜನೆ ಸುದ್ದಿ : ಗದಗ  ಮಾರ್ಚ 19 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಅರ್ಹ ಫಲಾನುಭವಿಗಳ ಆಯ್ಕೆ ಕೈಗೊಂಡು ಕಾಲಮಿತಿಯಲ್ಲಿಯೇ ಅವರಿಗೆ ಸೌಲಭ್ಯ ದೊರಕಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

 

ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಬುಧವಾರ ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಟಾನಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ಹಾಗೂ ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕು. ಎಸ್‌ಸಿ ಎಸ್‌ಟಿ ಕಾಲೋನಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟದ ಕಡೆಗೂ ನಿಗಾವಹಿಸಬೇಕು ಎಂದರು.

 

ಎಸ್‌ಸಿಪಿ ಟಿಎಸ್‌ಪಿ ಯೋಜನೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ, ದುರುಪಯೋಗ ಹಾಗೂ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬಳಕೆ ಆಗದೇ ಇರುವಂತೆ ಸಂಬAಧಿತ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳುವುದು ಅವರ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

 

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಹೇಶ ಪೋತದಾರ ಅವರು ಮಾತನಾಡಿ ಎಸ್‌ಸಿಟಿ ಟಿಎಸ್‌ಪಿ ಉಪಹಂಚಿಕೆ ಯೋಜನೆಯಡಿ ಜಿಲ್ಲೆಯಲ್ಲಿ ಇಲಾಖೆಗಳ ಪ್ರಗತಿ ಕುರಿತು ಸಭೆಗೆ ವಿವರಿಸಿದರು. ಈ ಸಂದರ್ಭದಲ್ಲಿ 12 ಇಲಾಖೆಗಳು 100% ರಷ್ಟು ಪ್ರಗತಿ ಸಾಧಿಸಿದ್ದು ಅಂತಹ ಇಲಾಖೆಗಳ ಸಾಧನೆಯನ್ನು ಜಿಲ್ಲಾಧಿಕಾರಿಗಳು ಪ್ರಶಂಸಿಸಿದರು.

 

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Editor

Leave a comment