ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲಾ ಅಲ್ಪಸಂಖ್ಯಾತರ ಹೋರಾಟ ಸಮಿತಿಯಿಂದ ಇಂದು ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ಆದೇಶದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುದಾನ ಪಡೆದುಕೊಂಡು ನಿರ್ಮಿಸಿದ ಶಾದಿ ಮಹಲಗಳ್.
ಬಾಡಿಗೆ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಬಾಡಿಗೆ ನಿಯಂತ್ರಣ ಸಮಿತಿ ರಚನೆ ಮಾಡಲು ಹಾಗೂ ಸರ್ಕಾರದ.
ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೂಳಿಸುವಲ್ಲಿ ವಿಫಲವಾಗಿರುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹಿಸಿ,ಶೀಘ್ರವೇ ಹೋರಾಟ ನಡೆಸಲಾಗುವುದೆಂದು ಸಂಘಟನೆ ಅಧ್ಯಕ್ಷರಾದ ಇಮ್ತಿಯಾಜ.ಆರ್.ಮಾನ್ವಿ ಅವರು ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. 
ಸಮಿತಿ ಉಪಾಧ್ಯಕ್ಷರಾದ ಬಾಬಾಜಾನ ಬಳಗಾನೂರ, ಕಾರ್ಯದರ್ಶಿ ಇಬ್ರಾಹಿಂ ಹಳ್ಳಿಕೇರಿ, ಸಂಘಟನೆ ಮುಖಂಡರಾದ ಮೌಲಾಸಾಬ ಗಚ್ಚಿ, ಮಹ್ಮದರಫೀಕ ಮದ್ಲಿವಾಲೆ, ಇಬ್ರಾಹಿಂ ಮುಲ್ಲಾ,
ಮೆಹಬೂಬಸಾಬ ಬಳ್ಳಾರಿ, ಖಾಜಾಸಾಬ ಇಸ್ಮಾಯಿಲನವರ, ಬಾಬುಸಾಬ ಅಗಡಿ, ಮಕ್ತುಮಸಾಬ ಮುಲ್ಲಾನವರ ಹಾಗೂ ಮುಂತಾದವರು ಉಪಸ್ಥಿತರಿದ್ದರು.