Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ Iಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಬಿಳಿಜೋಳ ಕೃಷಿ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ.

ಕರುನಾಡು ಘರ್ಜನೆ ಸುದ್ದಿ : ಗದಗ (ಕರ್ನಾಟಕ ವಾರ್ತೆ) ಮಾರ್ಚ 25 : 2024-2025 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ…

ಕರುನಾಡು ಘರ್ಜನೆ ಸುದ್ದಿ : ಗದಗ (ಕರ್ನಾಟಕ ವಾರ್ತೆ) ಮಾರ್ಚ 25 : 2024-2025 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ತಿಳಿಸಿದರು.

 

ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಸೋಮವಾರ 2024-25 ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಿಳಿಜೋಳ ಉತ್ಪನ್ನವನ್ನು ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‌ಗಳನ್ನು ನೇಮಿಸಬೇಕು. ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಹಾಗೂ ಬಿಳಿ ಜೋಳ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಬತ್ತ ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ. ಎನ್ ಶ್ರೀದರ ಸೂಚಿಸಿದರು.

 

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ ಅವರು ಮಾತನಾಡಿ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಹುಟ್ಟುವಳಿಗೆ ಜೋಳ- ಹೈಬ್ರೀಡ್ ಪ್ರತಿ ಕ್ವಿಂಟಲ್ ಗೆ ರೂ. 3371 /- , ಜೋಳ- ಮಾಲ್ದಂಡಿ ಪ್ರತಿ ಕ್ವಿಂಟಲ್ ಗೆ ರೂ/-3421 ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶ ದಿನಾಂಕ 20-03-2025 ರನುಸಾರ ಗದಗ ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿದೆ ಎಂದರು.

 

ಜೋಳ ಖರೀದಿಗೆ ನೋಂದಣಿ ಪ್ರಕ್ರಿಯೆ : ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ಜೋಳ ಉತ್ಪನ್ನ ಖರೀದಿ ನೋಂದಣಿ ಮಾರ್ಚ 25 ರಿಂದ ಕೈಗೊಳ್ಳಲು ಹಾಗೂ ಏಪ್ರಿಲ್ 1 ರಿಂದ ಮೇ 31 ರವರೆಗೆ ಖರೀದಿ ಕಾರ್ಯ ಕೈಗೊಳ್ಳುವುದು ಎಂದು ಸೂಚಿಸಲಾಯಿತು.

 

ಸರ್ಕಾರದಿಂದ ನೇಮಿಸಲ್ಪಟ್ಟ ಖರೀದಿ ಏಜೆನ್ಸಿ ಬಿಳಿ ಜೋಳ ಖರೀದಿ ಹಂತದಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿದ ಮಾನದಂಡಗಳನ್ವಯ ಜೋಳವನ್ನು ಪ್ರತಿ ರೈತರಿಂದ ಪ್ರತಿ ಎಕರೆಗೆ 20 ಕ್ವಿಂಟಲ್‌ನAತೆ ಗರಿಷ್ಟ 150 ಕ್ವಿಂಟಲ್ ಖರೀದಿಸಲು ಸೂಚಿಸಲಾಯಿತು.

 

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ಜಿಲ್ಲೆಯಲ್ಲಿ ಬಿಳಿ ಜೋಳ ಉತ್ಪನವನ್ನು 4 ಖರೀದಿ ಕೇಂದ್ರಗಳಲ್ಲಿ ತೆರೆಯಲು ತೀರ್ಮಾನಿಸಲಾಯಿತು. ಖರೀದಿ ಕೇಂದ್ರಗಳ ವಿವರ ಇಂತಿದೆ: ಗದಗ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ,  ಲಕ್ಷ್ಮೇಶ್ವರ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ಮುಂಡರಗಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ರೋಣ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ.

 

ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ , ಕೃಷಿ ಮಾರಾಟ ಇಲಾಖೆ, , ಕೆ.ಎಫ್.ಸಿ.ಎಸ್.ಸಿ, ಮಾರ್ಕೆಟಿಂಗ್ ಫೆಡರೇಶನ್ ಗದಗ , ನರಗುಂದ ಹಾಗೂ ಗದಗ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿದ ಇಲಾಖೆ ಅಧಿಕಾರಿಗಳು ಹಾಜರಿದ್ದರು

Editor

Leave a comment