Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ತಮಿಳನಾಡು l ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿಗೆ ಬಸ್ ನಿಲ್ಲಿಸಲಾರದ ಬಸ್ ಚಾಲಕ ಅಮಾನತು.!

ಕರುನಾಡು ಘರ್ಜನೆ ಸುದ್ದಿ : ಬಸ್ ನಿಲ್ಲಿಸದೆ ಹೋದ ಕಾರಣ ವಿದ್ಯಾರ್ಥಿನಿಯೊಬ್ಬಳು ಬಸ್ಸಿನ ಹಿಂದೆ ಓಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ.   ತಮಿಳುನಾಡಿನಲ್ಲಿ 12ನೇ ತರಗತಿ ಪರೀಕ್ಷೆಗಳು ನಡೆಯುತ್ತಿವೆ. ಇಂದು…

ಕರುನಾಡು ಘರ್ಜನೆ ಸುದ್ದಿ : ಬಸ್ ನಿಲ್ಲಿಸದೆ ಹೋದ ಕಾರಣ ವಿದ್ಯಾರ್ಥಿನಿಯೊಬ್ಬಳು ಬಸ್ಸಿನ ಹಿಂದೆ ಓಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ.

 

ತಮಿಳುನಾಡಿನಲ್ಲಿ 12ನೇ ತರಗತಿ ಪರೀಕ್ಷೆಗಳು ನಡೆಯುತ್ತಿವೆ. ಇಂದು ಪರೀಕ್ಷೆ ಮುಗಿಯಲಿದ್ದು, ಪರೀಕ್ಷೆ ಬರೆಯಲು ಸಿದ್ಧವಾಗಿದ್ದ ವಿದ್ಯಾರ್ಥಿನಿ ಬೆಳಗ್ಗೆ ಪರೀಕ್ಷಾ ಕೇಂದ್ರಕ್ಕೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಳು.

 

ಆಗ ಅಲ್ಲಿಗೆ ಬಂದ ಬಸ್ಸು ನಿಲ್ಲಿಸದೆ ಹೋಯಿತು. ಇದರಿಂದ ಪರೀಕ್ಷೆ ಬರೆಯಲು ಸಾಧ್ಯವಾಗುವುದಿಲ್ಲವೋ ಎಂಬ ಭಯದಿಂದ ವಿದ್ಯಾರ್ಥಿನಿ ಬಸ್ಸಿನ ಹಿಂದೆ ಓಡಿದ್ದಳು. ಸ್ವಲ್ಪ ದೂರ ಹೋದ ಬಳಿಕ ಬಸ್ ನಿಲ್ಲಿಸಲಾಗಿತ್ತು. ಈ ವಿಡಿಯೋ ವೈರಲ್ ಬೆನ್ನಲ್ಲೇ ಚಾಲಕನ ಅಮಾನತಿಗೆ ಸಾರ್ವಜನಿಕರು ಆಗ್ರಹಿಸಿದ್ದರು.

 

ಈ ಬಗ್ಗೆ ತಮಿಳುನಾಡು ಸಾರಿಗೆ ನಿಗಮವು ಪ್ರಕಟಣೆಯನ್ನು ಹೊರಡಿಸಿದ್ದು, 25/03/2025 ರಂದು ಮಾಧ್ಯಮದಲ್ಲಿ “ಬಸ್ ನಿಲ್ಲಿಸದ ಕಾರಣ +2 ವಿದ್ಯಾರ್ಥಿನಿ ಹಿಂಬಾಲಿಸಿ ಓಡಿದಳು” ಎಂಬ ಶೀರ್ಷಿಕೆಯೊಂದಿಗೆ ಸುದ್ದಿ ಪ್ರಕಟವಾಗಿದೆ. ,ಮಾಧ್ಯಮಗಳಲ್ಲಿ ಪ್ರಸಾರವಾದ ಸುದ್ದಿ ಉಲ್ಲೇಖಿಸಲಾದ ಬಸ್ ಸಂಖ್ಯೆ TN32N2389. ಮಾರ್ಗ ಸಂಖ್ಯೆ 1C. ಇದು ವೆಲ್ಲೂರು ವಲಯದ, ಅಂಬೂರ್ ಶಾಖೆಯಿಂದ ಕಾರ್ಯನಿರ್ವಹಿಸುವ ಬಸ್ಸಾಗಿದೆ.

 

ಇಂದು ಬೆಳಿಗ್ಗೆ ಈ ಬಸ್ ವಾಣಿಯಂಬಾಡಿ ಬಸ್ ನಿಲ್ದಾಣದಿಂದ ಹೊರಟು ಅಲಂಗಾಯಂಗೆ ಹೋಗುವ ದಾರಿಯಲ್ಲಿ ಕೊತ್ತಕೋಟೆ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ಶಾಲಾ ವಿದ್ಯಾರ್ಥಿನಿಯೊಬ್ಬಳು ಕೈ ತೋರಿಸಿದರೂ ಬಸ್ ನಿಲ್ಲಿಸದೆ ಸ್ವಲ್ಪ ದೂರ ಹೋಗಿ ಬಸ್ ನಿಲ್ಲಿಸಿ ವಿದ್ಯಾರ್ಥಿನಿಯನ್ನು ಬಸ್ಸಿಗೆ ಹತ್ತಿಸಿಕೊಂಡಿದ್ದಾನೆ. ವಿದ್ಯಾರ್ಥಿನಿ ಬಸ್ಸಿಗೆ ಹತ್ತಲು ಬಸ್ಸಿನ ಹಿಂದೆ ಓಡಿದ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತ

 

ಇದಕ್ಕೆ ಕಾರಣರಾದ ಅಂಬೂರ್ ಡಿಪೋಗೆ ಸೇರಿದ ಬಸ್ ಚಾಲಕ ಮುನಿರಾಜ್ ಕೆಲಸದ ಸಂಖ್ಯೆ 42069 ಅವರನ್ನು ತಕ್ಷಣದಿಂದಲೇ ಅಮಾನತು ಮಾಡಲಾಗಿದೆ. ಇವರ ಮೇಲೆ ಇಲಾಖಾ ಮಟ್ಟದ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಮಿಳುನಾಡು ಸಾರಿಗೆ ನಿಗಮ ತಿಳಿಸಿದೆ. ಅಲ್ಲದೆ, ನೌಕರರ ಗುರುತಿನ ಚೀಟಿಯನ್ನು ತಕ್ಷಣವೇ ಒಪ್ಪಿಸುವಂತೆ ಆದೇಶಿಸಲಾಗಿದೆ. ಇದನ್ನು ಉಲ್ಲಂಘಿಸಿದರೆ ತಿಂಗಳಿಗೆ ದಂಡ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Editor

Leave a comment