Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ.

ಕರುನಾಡು ಘರ್ಜನೆ ಸುದ್ದಿ : ಗದಗ ಮಾರ್ಚ 27 : ಜಿಲ್ಲೆಯಲ್ಲಿ ಕೊಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಟಾನವಾಗಬೇಕು. ಕೊಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.   ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಷೇಧ…

ಕರುನಾಡು ಘರ್ಜನೆ ಸುದ್ದಿ : ಗದಗ ಮಾರ್ಚ 27 : ಜಿಲ್ಲೆಯಲ್ಲಿ ಕೊಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಟಾನವಾಗಬೇಕು. ಕೊಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋಟ್ಪಾ ಕಾಯ್ದೆ ಉಲ್ಲಂಘನೆ ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಂತಹ ಅಂಗಡಿಗಳ ವ್ಯಾಪಾರ ಪರವಾನಿಗೆ ರದ್ದುಗೊಳಿಸಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಇತರ ಸ್ಥಳೀಯ ಸಂಸ್ಥೆಗಳಡಿಯಲ್ಲಿ ಎಲ್ಲ ತಂಬಾಕು ಮಾರಾಟ ಮಾಡುವ ಅಂಗಡಿಕಾರರು ಕಡ್ಡಾಯವಾಗಿ ಪ್ರತ್ಯೇಕ ತಂಬಾಕು ಮಾರಾಟ ಪರವಾನಿಗೆ ಪಡೆದುಕೊಳ್ಳಬೇಕು. ಎಲ್ಲಾ ಅಂಗಡಿ ಮುಂಗಟ್ಟುಗಳ ಮುಂದೆ ಧೂಮಪಾನ ನಿಷೇಧ ಹಾಗೂ 18 ವರ್ಷದೊಳಗಿನವರಿಗೆ ತಂಬಾಕು ನಿಷೇಧ ಕುರಿತ ನಾಮಫಲಕ ಬಿತ್ತರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

 

ಎನ್.ಟಿ.ಸಿ.ಪಿ ಕಾರ್ಯಕ್ರಮಾಧಿಕಾರಿ ಹಾಗೂ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ್ ಅವರು ಮಾತನಾಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಕುರಿತು ವಿವರಿಸುತ್ತಾ ಜಿಲ್ಲೆಯಲ್ಲಿ ಕಳೆದ ವರ್ಷ ಒಟ್ಟು 149 ಶಾಲಾ/ಕಾಲೇಜುಗಳಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ಕುರಿತು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆರೋಗ್ಯ ಅರಿವು ಕಾರ್ಯಕ್ರಮ ಹಮ್ಮಿಕೊಂಡು, ಶಾಲಾ/ಕಾಲೇಜುಗಳ ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ ಮಾಡಲಾಗಿದೆ. ಕೋಟ್ಪಾ ದಾಳಿ ಹಮ್ಮಿಕೊಳ್ಳುವುದರ ಮೂಲಕ ವ್ಯಾಪಾರಸ್ಥರು, ತಂಬಾಕು ಬಳಕೆದಾರರಿಗೆ ಹಾಗೂ ಸಾರ್ವಜನಿಕರಲ್ಲಿ ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗಿದೆ ಹಾಗೂ ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಂಡು ಈವರೆಗೆ 71 ಕೋಟ್ಪಾ ದಾಳಿ ನಡೆಸಿ 1055 ಪ್ರಕರಣಗಳನ್ನು ದಾಖಲಿಸಿ ರೂ.172350/- ದಂಡ ಸಂಗ್ರಹಿಸಲಾಗಿದೆ. ಕೋಟ್ಪಾ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದ ಮೂಲಕ ಈ ವರ್ಷ ಒಟ್ಟು 4140 ಅರ್ಥಿಗಳಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ. ಅದೆ ರೀತಿ ಸಮುದಾಯ ಮಟ್ಟದಲ್ಲಿ ಕೇಂದ್ರಿಕೃತ ಗುಂಪು ಚರ್ಚೆಯ ಮೂಲಕ ಒಟ್ಟು 78 ಎಫ್.ಜಿ.ಡಿ. ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಎಂದು ಸಭೆಗೆ ತಿಳಿಸಿದರು.

 

ಈ ಸಂದರ್ಭದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಗಳು ಎಂ.ಬಿ.ಸAಕದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್.ನೀಲಗುಂದ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಉಪಸ್ಥಿತರಿದ್ದರು.

Editor

Leave a comment