Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ದಶಕಗಳ ನಂತರ 100% ರಷ್ಟು ತೆರಿಗೆ ಸಂಗ್ರಹಣೆ: ಗದಗ ಜಿಲ್ಲಾ ಪಂಚಾಯತಿ.

ಕರುನಾಡು ಘರ್ಜನೆ ಸುದ್ದಿ :ಗದಗ ಜಿಲ್ಲೆಯ 122 ಗ್ರಾಮ ಪಂಚಾಯತಿಗಳಲ್ಲಿ ತೆರಿಗೆ ವಸೂಲಾತಿಯ ವಿಶೇಷ ಅಭಿಯಾನದ ಫಲವಾಗಿ 90 ಗ್ರಾಪಂಗಳು ಶೇ. 100ರಷ್ಟು ಸಾಧನೆ ಮಾಡಿದ್ದು, ಪ್ರಸಕ್ತ ಶೇ. 100.61 ಸಾಧನೆ ಮಾಡಿ ರಾಜ್ಯದಲ್ಲಿ 7 ಸ್ಥಾನದಲ್ಲಿದೆ ಎಂದು ಜಿಲ್ಲಾ ಪಂಚಾಯತಿ…

ಕರುನಾಡು ಘರ್ಜನೆ ಸುದ್ದಿ :ಗದಗ ಜಿಲ್ಲೆಯ 122 ಗ್ರಾಮ ಪಂಚಾಯತಿಗಳಲ್ಲಿ ತೆರಿಗೆ ವಸೂಲಾತಿಯ ವಿಶೇಷ ಅಭಿಯಾನದ ಫಲವಾಗಿ 90 ಗ್ರಾಪಂಗಳು ಶೇ. 100ರಷ್ಟು ಸಾಧನೆ ಮಾಡಿದ್ದು, ಪ್ರಸಕ್ತ ಶೇ. 100.61 ಸಾಧನೆ ಮಾಡಿ ರಾಜ್ಯದಲ್ಲಿ 7 ಸ್ಥಾನದಲ್ಲಿದೆ ಎಂದು ಜಿಲ್ಲಾ ಪಂಚಾಯತಿ ಸಿ.ಇ.ಒ ಭರತ್‌ ಎಸ್‌ ರವರು ಹೇಳಿದರು.

 

ಈ ಕುರಿತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತಿ ಗದಗ ರವರು ಮಾತನಾಡುತ್ತಾ, ಜಿಲ್ಲೆಗೆ ಸವಾಲಾಗಿದ್ದ ಗ್ರಾಮ ಪಂಚಾಯತಿ ತೆರಿಗೆ ಬಾಕಿ ವಸೂಲಾತಿ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಜಿಲ್ಲೆಯ 7 ತಾಲೂಕುಗಳಲ್ಲಿ ತೆರಿಗೆ ವಸೂಲಿಯಲ್ಲಿ ಶೇ. 100.61 ರಷ್ಟು ಸಾಧನೆ ಮಾಡಿ ಎಂಬುದು ಹೆಮ್ಮೆಯ ಸಂಗತಿಯಾಗಿದೆ.

ಪ್ರಸಕ್ತ ಸಾಲಿನ ಗುರಿ 1387.54 ಲಕ್ಷ ಇದ್ದು, 1395.95 ಲಕ್ಷ ಸಂಗ್ರಹವಾಗಿದೆ ಎಂದು ಹೇಳಿದರು.

 

*ಅಭಿಯಾನದ ಫಲಶೃತಿ* : ಸಾಮಾನ್ಯವಾಗಿ ಹಲವಾರು ವರ್ಷಗಳಿಂದ ಗ್ರಾಪಂ ತೆರಿಗೆ ವಸೂಲಾತಿ ತೀವ್ರ ಮಂದಗತಿಯಲ್ಲಿ ಸಾಗಿತ್ತು. ಇದನ್ನರಿತು ಜಿಲ್ಲೆಯಲ್ಲಿ ಆಂದೋಲನೊಪಾಧಿಯಲ್ಲಿ ಹಮ್ಮಿಕೊಂಡ ವಿಶೇಷ ಅಭಿಯಾನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ, ವಿವಿಧ ಹಂತಗಳಲ್ಲಿ ನಡೆದ ವಿಶೇಷ ಅಭಿಯಾನದಲ್ಲಿ ತಾಲ್ಲೂಕು ಪಂಚಾಯತಿ /ಗ್ರಾಮ ಪಂಚಾಯತಿ ಅಧಿಕಾರಿಗಳು/ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಜನರ ಮನವೊಲಿಸಿ ತೆರಿಗೆ ವಸೂಲಿ ಮಾಡಿದ್ದಾರೆ, ಇದರಿಂದಾಗಿ ಗ್ರಾಮ ಪಂಚಾಯತಿಗಳ ಆರ್ಥಿಕ ಬಲ ಹೆಚ್ಚಾದಂತಾಗಿದೆ.

 

ಜಿಲ್ಲೆಯಲ್ಲಿನ 122 ಗ್ರಾಪಂಗಳಲ್ಲಿ ಕರ ವಸೂಲಿ ಹೆಚ್ಚಿನ ಮಟ್ಟದಲ್ಲಿ ಪ್ರಗತಿ ಸಾಧಿಸಲು ತಾಲ್ಲೂಕು ಪಂಚಾಯತಿ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕರ ವಸೂಲಿಗಾರರು ಗ್ರಾಪಂಗಳಲ್ಲಿ ಸಭೆ ನಡೆಸಿ, ಶೇ.100 ರಷ್ಟು ಪ್ರಗತಿ ಸಾಧಿಸಲು ವಿಶೇಷ ಶ್ರಮವಹಿಸಿ ಸದರಿ ಅಭಿಯಾನವನ್ನು ಯಶಸ್ವಿಗೋಳಿಸಿದ್ದರಿಂದ ಮಾನ್ಯ ಸಿ.ಇ.ಒ ರವರು ಹೃತ್ಪೂರ್ವಕ ಧನ್ಯವಾದಗಳನ್ನು ಹೇಳಬಯಸುತ್ತಾರೆ.

ಜಿಲ್ಲಾ ಪಂಚಾಯತಿಯಿಂದ ತೆರಿಗೆ ವಸೂಲಿಗಾಗಿ *“ತೆರಿಗೆ ಮಾಸಾಚರಣೆ”* ಹಮ್ಮಿಕೊಂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ಮತ್ತು ಜಾಥಾ ಕಾರ್ಯಕ್ರಮ ಮೂಲಕ ಕ್ರಮಕೈಗೊಳ್ಳಲು ನಿರ್ದೇಶನ ನೀಡಲಾಗಿತ್ತು. ಅದರಂತೆ ಕರ ವಸೂಲಿಗಾರರು ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಎರಡು ಹಂತಗಳಲ್ಲಿ ಮನೆ ಮನೆಗೆ ತೆರಳಿ ಕರ ವಸೂಲಿ ಮಾಡಿದ್ದರಿಂದ ಈಸಾಧನೆ ಸಾಧ್ಯವಾಗಿದೆ ಎನ್ನಬಹುದು.

ಮುಂದುವರೆದು, ಸದರಿ ಅಭಿಯಾನದ ಯಶಸ್ಸು ಸಾಧ್ಯವಾಗಿಸಲು ಪ್ರಮುಖ ಕಾರಣ ಸಾರ್ವಜನಿಕರು, ಅವರುಗಳ ಸಹಸ್ಪಂದನೆಯಿಂದ ನಿಗದಿಪಡಿಸಿದ ಗುರಿಗೆ ಶೇ. 100.61% ಸಾಧನೆಯಾಗಿದೆ, ನಮ್ಮ ನಿರಿಕ್ಷೆ ಈಗ ಸಾಕಾರವಾಗಿದೆ ಎನ್ನುತ್ತಾ ಅದಕ್ಕೆ ಕಾರಣರಾದ ಸಾರ್ವಜನಿಕರಿಗೂ ಧನ್ಯವಾದಗಳನ್ನು ತೀಳಿಸಿದ್ದಾರೆ.

ಗ್ರಾಮಸ್ಥರಿಗೆ ಗ್ರಾಪಂ ಕರ ಪರಿಷ್ಕರಣೆ ಬಗ್ಗೆ ಆಗಿಂದ್ದಾಗ್ಗೆ ಪ್ರಕಟಣೆ ಮೂಲಕ ತಿಳಿಯಪಡಿಸಿದ್ದರಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಗ್ರಾಮ ಪಂಚಾಯಿತಿ ತೆರಿಗೆ ವಿಧಿಸುವುದು, ತೆರಿಗೆ ಪರಿಷ್ಕರಿಸುವುದು ಮತ್ತು ತೆರಿಗೆ ವಸೂಲಿ ಮಾಡುವ, ಸರ್ಕಾರದ ನಿಯಮ ಹಾಗೂ ಸುತ್ತೋಲೆಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಸಾಧ್ಯವಾಯಿತು ಎನ್ನುತ್ತಾರೆ ಮಾನ್ಯರು.

ಶೇಕಡಾ. 100 ರಷ್ಟು ಸಾಧನೆ ಮಾಡಿದ ತಾಲ್ಲೂಕು ಪಂಚಾಯತಿಗಳು, ಮುಂಡರಗಿ ಶೇ. 105.28, ನರಗುಂದ ಶೇ. 100.86, ರೋಣ ಶೇ. 104.86, ಶಿರಹಟ್ಟಿ ಶೇ. 102.47, ಗಜೇಂದ್ರಗಡ ಶೇ. 100.60, ಲಕ್ಷ್ಮೇಶ್ವರ ಶೇ. 105.28 ಹಾಗೂ ಗದಗ ತಾಲ್ಲೂಕು ಶೇ. 94.81 ರಷ್ಟು ಪ್ರಗತಿ ಸಾಧಿಸಿದೆ, ಒಟ್ಟಾರೆ ಜಿಲ್ಲೆಯಲ್ಲಿನ 90 ಗ್ರಾಮ ಪಂಚಾಯತಿಗಳು ಪ್ರಸ್ತುತ ವರ್ಷದ ಬೇಡಿಕೆಗೂ ಮೀರಿ ಸಾಧನೆ ಮಾಡಿವೆ ಎಂದು ಅವರು ಹೇಳಿದರು.

Editor

Leave a comment