Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ವಕ್ಫ್‌ ತಿದ್ದುಪಡಿ ಮಸೂದೆ : ಸುಪ್ರೀಂ ಕೋರ್ಟ್‌ ಮೊರೆ ಹೋದ! ಅಸದುದ್ದೀನ್ ಉವೈಸಿ

ಕರುನಾಡು ಘರ್ಜನೆ ಸುದ್ದಿ : ತೀವ್ರ ವಿರೋಧದ ನಡುವೆ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆ-2025ನ್ನು ಪ್ರಶ್ನಿಸಿ,ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮಸೂದೆ ಇನ್ನೂ ರಾಷ್ಟ್ರಪತಿಗಳ ಅಂಕಿತ ಪಡೆಯುವ ಮೊದಲೇ…

ಕರುನಾಡು ಘರ್ಜನೆ ಸುದ್ದಿ : ತೀವ್ರ ವಿರೋಧದ ನಡುವೆ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆ-2025ನ್ನು ಪ್ರಶ್ನಿಸಿ,ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮಸೂದೆ ಇನ್ನೂ ರಾಷ್ಟ್ರಪತಿಗಳ ಅಂಕಿತ ಪಡೆಯುವ ಮೊದಲೇ ಈ ಅರ್ಜಿ ಸಲ್ಲಿಕೆಯಾಗಿದೆ.ಮಸೂದೆಯನ್ನು ವಿರೋಧಿಸಿರುವ ಅವರು, ಇದು ಮುಸ್ಲಿಮರ ಮೇಲಿನ ನೇರ ಹಲ್ಲೆ. ಅವರ ಆಸ್ತಿಗಳನ್ನು ಕಿತ್ತುಕೊಳ್ಳಲಿದೆ .ಪ್ರಧಾನಿ ನರೇಂದ್ರ ಮೋದಿ ಅವರು ವಕ್ಫ್‌ ಮಸೂದೆ ಮೂಲಕ ನಮ್ಮ ಎದೆಗೆ ಗುಂಡು ಹಾರಿಸುತ್ತಿದ್ದಾರೆ. ಮಸೀದಿ ದರ್ಗಾಗಳನ್ನು ಗುರಿಯಾಗಿಸುತ್ತಿದ್ದಾರೆ. ಮುಸ್ಲಿಮರಿಗೆ ಹಿಂದೂ, ಸಿಖ್, ಕ್ರಿಶ್ಚಿಯನ್ ಮತ್ತು ಆರ್‌ಎಸ್‌ಎಸ್ ಸಂವಿಧಾನ, ಅದರ ಸಿದ್ದಾಂತ, ಮೋದಿ, ಯೋಗಿ ನಿಜವಾದ ಶತ್ರುಗಳು ಎಂದು ಓವೈಸಿ ಹೇಳಿದರು.ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ

ಈ ಮಸೂದೆಯು ಮುಸ್ಲಿಮರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಅಲ್ಲದೆ, ಇದು ಇಸ್ಲಾಮಿಕ್ ಧಾರ್ಮಿಕ ದತ್ತಿಗಳ ಮೇಲೆ ತಾರತಮ್ಯದ ರಾಜ್ಯ ನಿಯಂತ್ರಣವನ್ನು ಹೇರುತ್ತದೆ. ಮಸಂಸತ್ತಿನ ಉಭಯ ಸದನಗಳಲ್ಲಿ ತೀವ್ರ ವಿರೋಧದ ನಡುವೆಯೂ ಮಸೂದೆ ಅಂಗೀಕಾರಗೊಂಡಿದೆ. ಮಸೂದೆ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು AIMIM ಮುಖ್ಯಸ್ಥ ಅಸದುದ್ದೀನ್ ಓವೈಸಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಮಸೂದೆಯು ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ವಾದಿಸಿದ್ದಾರೆ.

ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ

ಜಾವೇದ್ ಅವರು ಜಂಟಿ ಸಂಸದೀಯ ಸಮಿತಿಯ ಸದಸ್ಯರಾಗಿದ್ದರು. ಈ ಸಮಿತಿಯು ಮಸೂದೆಯನ್ನು ಪರಿಶೀಲಿಸಿತ್ತು. ಮಸೂದೆಯು ಸಂವಿಧಾನದ 14, 25, 26, 29 ಮತ್ತು 300A ವಿಧಿಗಳನ್ನು ಉಲ್ಲಂಘಿಸುತ್ತದೆರ. ಈ ವಿಧಿಗಳು ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಆಸ್ತಿಯ ಬಗ್ಗೆ ತಿಳಿಸುತ್ತವೆ. ಮಸೂದೆಯು ಅನಿಯಂತ್ರಿತ ನಿರ್ಬಂಧಗಳನ್ನು ವಿಧಿಸುತ್ತದೆ. ಧಾರ್ಮಿಕ ಆಚರಣೆಯ ಅವಧಿಯ ಆಧಾರದ ಮೇಲೆ ನಿರ್ಬಂಧಗಳನ್ನು ಹೇರುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದು ಅವರು ವಾದಿಸಿದ್ದಾರೆ. ಇತ್ತೀಚೆಗೆ ಮತಾಂತರಗೊಂಡವರು ವಕ್ಫ್‌ ಅಡಿಯಲ್ಲಿ ಆಸ್ತಿಯನ್ನು ದಾನ ಮಾಡಲು ಇದು ಅಡ್ಡಿಯುಂಟು ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

 

ಇದು ಸಂವಿಧಾನ ಬಾಹಿರ

ಮಾಧ್ಯಮದೊಂದಿಗೆ ಮಾತನಾಡಿದ ಜಾವೇದ್, “ಭಾರತದಲ್ಲಿ ಅನೇಕ ಜನರು ವಕ್ಫ್‌ ತಿದ್ದುಪಡಿ ಪ್ರಶ್ನಿಸಿ ಅರ್ಜಿಯನ್ನು ಸಲ್ಲಿಸುತ್ತಾರೆ. ಅನೇಕ ಪಕ್ಷಗಳು ಈ ಕ್ರಮ ಕೈಗೊಳ್ಳುತ್ತವೆ. ಸಂಸತ್ತಿನಲ್ಲಿ, ವಿರೋಧ ಪಕ್ಷದಲ್ಲಿರುವ ಪ್ರತಿಯೊಬ್ಬರೂ ಇದು ಸಂವಿಧಾನ ಬಾಹಿರ ಎಂದು ಹೇಳಿದ್ದಾರೆ. ನಮ್ಮ ಹಕ್ಕನ್ನು ನೀವು ಹೇಗೆ ಕಸಿದುಕೊಳ್ಳುತ್ತೀರಿ? ನಿಮ್ಮ ಬಳಿ ಸಂಖ್ಯೆಗಳಿದ್ದರೆ, ನಿಮಗೆ ಬೇಕಾದುದನ್ನು ಪಾಸ್ ಮಾಡಲು ಮತ್ತು ಕಾನೂನುಬಾಹಿರವಾದದ್ದನ್ನು ಮಾಡಲು ಸಾಧ್ಯವಿಲ್ಲ.” ಎಂದು ಮಾತನಾಡಿದರು.

 

“ವಕ್ಫ್‌ ತಿದ್ದುಪಡಿ ಮಸೂದೆಯು ಕೋಮು ವಿಭಜನಕ ಉದ್ದೇಶಗಳನ್ನು ಹೊಂದಿದೆ..” ಎಂದು ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮೇಲಿನ ಚರ್ಚೆಯಲ್ಲಿ ಹೈದರಾಬಾದ್‌ ಸಂಸದ ಅಸಾದುದ್ದೀನ್‌ ಓವೈಸಿ ಮಾತನಾಡಿದರು. ಅಲ್ಲದೇ ತಮ್ಮ ಭಾಷಣದ ಕೊನೆಯಲ್ಲಿ ಮಸೂದೆಯ ಪ್ರತಿಯನ್ನು ಹರಿದು ಹಾಕಿ ತಮ್ಮ ಅಸಮಾಧಾನವನ್ನು ಹೊರಹಾಕಿದರು.

 

Editor

Leave a comment