ಕರುನಾಡು ಘರ್ಜನೆ ಸುದ್ದಿ ವಿಜಯಪುರ : ಪ್ರವಾದಿ ಮಹಮ್ಮದ್ ರವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದಡಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಎಫ್ ದಾಖಲಿಸಲಾಗಿದೆ.
ಕಳೆದ ಏಪ್ರಿಲ್ 7ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ರ ಬಗ್ಗೆ ಶಾಸಕ ಯತ್ನಾಳ್ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೊಹಮ್ಮದ್ ಹನ್ನಾನ್ ಶೇಖ್ ಎಂಬುವರು ಈ ದೂರು ದಾಖಲಿಸಿದ್ದಾರೆ.
ಅಲ್ಲದೇ, “ಬಾಳ ಸಾಹೇಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ” ಎಂಬ ಆಧಾರರಹಿತ ಮತ್ತು ಧಾರ್ಮಿಕ ಅಪಮಾನಕಾರಕ ಹೇಳಿಕೆ ನೀಡಿದ್ದು, ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ. ಈ ದೂರಿನನ್ವಯ ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಶಾಸಕ ಯತ್ನಾಳ್ ವಿರುದ್ದ ಪ್ರಕರಣ ದಾಖಲಾಗಿದೆ.