Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಸೌಜನ್ಯ ಪ್ರಕರಣ; ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Soujanya murder case) ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೇ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ ಹಿನ್ನೆಲೆಯಲ್ಲಿ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂ.ಡಿ. (Sameer…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Soujanya murder case) ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೇ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ ಹಿನ್ನೆಲೆಯಲ್ಲಿ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂ.ಡಿ. (Sameer M D) ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರಕರಣ ಸಂಬಂಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಹೂಡಿದ್ದಾರೆ.

 

ನ್ಯಾಯಾಲಯವು ಯೂಟ್ಯೂಬರ್‌ಗೆ ನೋಟೀಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಅವರು ಆದೇಶ ನೀಡಿದ್ದಾರೆ.

 

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂ.ಡಿ. ಮೇಲೆ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಎರಡು ತಿಂಗಳ ಹಿಂದೆ ಯೂಟ್ಯೂಬರ್‌ ಸಮೀರ್‌ ಎಂಡಿ, ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಕೇಸ್‌ನ ಬಗ್ಗೆ ವಿಡಿಯೊ ಮಾಡಿ ಯೂಟ್ಯೂಬ್‌ನಲ್ಲಿ ಹಾಕಿದ್ದರು. ಈ ವಿಡಿಯೊಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ವಿಡಿಯೊವನ್ನು ಒಂದು ಕೋಟಿಗೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದರು. ಸಾಕಷ್ಟು ಪರ ವಿರೋಧವು ವಿಡಿಯೊಗೆ ವ್ಯಕ್ತವಾಗಿತ್ತು. ನಂತರ ಯೂಟ್ಯೂಬರ್‌ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಜತೆಗೆ ಹಲವರು ಕರೆ ಮಾಡಿ ಬೆದರಿಕೆಯನ್ನು ಹಾಕಿದ್ದರು.

 

ಸಮೀರ್‌ ಮಾಡಿದ್ದ ವಿಡಿಯೊದಲ್ಲಿ ಎಐ ತಂತ್ರಜ್ಞಾನ ಬಳಸಿಕೊಂಡು ಸೌಜನ್ಯ ಕೊಲೆ ನಡೆದ ದಿನ ಆ ನಂತರ ತನಿಖೆಯ ಬಗ್ಗೆ ತೋರಿಸಲಾಗಿತ್ತು. ಆ ಘಟನೆಗೆ ಆ ಊರಿಗೆ ಗೌಡರೇ ಕಾರಣ ಎಂದು ಉಲ್ಲೇಖ ಮಾಡಲಾಗಿತ್ತು. ಇದು ನೇರವಾಗಿ ಧರ್ಮಸ್ಥಳ ಧರ್ಮಾಧಿಕಾರಿಗಳ ಕುಟುಂಬದ ಹೆಸರನ್ನು ಉಲ್ಲೇಖ ಮಾಡದಿದ್ದರೂ ಅವರನ್ನೇ ಗುರಿಯಾಗಿಸಿಕೊಂಡು ಮಾಡಿದ ವಿಡಿಯೊ ಎಂಬುದು ವೀಕ್ಷಕರಿಗೆ ಮನದಟ್ಟಾಗುವಂತಿತ್ತು. ಜತೆಗೆ ಧರ್ಮಸ್ಥಳ, ಅದರ ಆಡಳಿತ ಸಂಸ್ಥೆಗಳ ಬಗ್ಗೆ ಸಾಕಷ್ಟು ಆರೋಪಗಳನ್ನು ಮಾಡಲಾಗಿತ್ತು. ಹೀಗಾಗಿ ಯೂಟ್ಯೂಬರ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು .

Editor

Leave a comment