ಕರುನಾಡು ಘರ್ಜನೆ ಸುದ್ದಿ: ರಾಮನಗರ, 19: ಸದಾ ಗನ್ ಮ್ಯಾನ್ ಇಟ್ಕೊಂಡು ಓಡಾಡುವ ರಿಕ್ಕಿ ರೈ ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ರಿಕ್ಕಿ ಕಾರು ಚಾಲಕ ಬಸವರಾಜು, ರಿಕ್ಕಿ ರೈ ಮೊದಲ ಪತ್ನಿ ಸೇರಿದಂತೆ ಮೂವರ ವಿರುದ್ಧ ಜಿಲ್ಲೆಯ ಬಿಡದಿ ಠಾಣೆಗೆ ದೂರು ನೀಡಿದ್ದಾರೆ.ಮೂವರ ವಿರುದ್ಧ ದೂರು
ಘಟನೆ ವೇಳೆ ಬಸವರಾಜು ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ ಫೈರಿಂಗ್ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಹಾಗಾಗಿ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ರಿಕ್ಕಿ ರೈ ಮೊದಲ ಪತ್ನಿ ಅನ್ನಪೂರ್ಣ, ರಾಕೇಶ್ ಮಲ್ಲಿ ಹಾಗೂ ನಿತೇಶ್ ಎಸ್ಟೇಟ್ ಕಂಪನಿ ವಿರುದ್ಧ ಬಸವರಾಜು ದೂರು ನೀಡಿದ್ದಾರೆ. ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜುವನ್ನು ವಿಚಾರಣೆ ಮಾಡಿದ ಪೊಲೀಸ್, ಒಂದು ಬಾರಿ ದೊಡ್ಡ ಸದ್ದು ಕೇಳಿ ಬಂತ್ತು ಎಂದಿದ್ದಾರೆ. ಹಾಗಾಗಿ ಕಾರಿಗೆ ತಗುಲಿರುವ ಗುಂಡಿನ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ.ತನಿಖೆ ಚುರುಕುಗೊಳಿಸಿದ ಪೊಲೀಸ್
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮನೆ ಸಿಬ್ಬಂದಿ, ಆಪ್ತರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ರಿಕ್ಕಿ ರೈ ವಿದೇಶದಿಂದ ಬಂದಿದ್ದು ಯಾವಾಗ, ವ್ಯವಹಾರಗಳೇನು? ಇತ್ತೀಚೆಗೆ ಯಾವುದಾದರೂ ವ್ಯವಹಾರದಲ್ಲಿ ಗಲಾಟೆ ಆಗಿತ್ತಾ? ರಾಮನಗರ ತಾಲೂಕಿನ ಬಿಡದಿ ಮನೆಯಲ್ಲಿ ಯಾರ್ಯಾರು ಇದ್ದಾರೆ? ರಿಕ್ಕಿ ಮನೆಗೆ ಹೊಸದಾಗಿ ಯಾರಾದರು ಕೆಲಸಕ್ಕೆ ಸೇರಿಕೊಂಡಿದ್ರಾ? ಹಳೇ ದ್ವೇಷ, ಅಸ್ತಿ ವಿವಾದ, ವ್ಯವಹಾರ ಕುರಿತು ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಮಾಜಿ ಡಾನ್ ಮುತ್ತಪ್ಪ ರೈ ಸಾವಿನ ಬಳಿಕ ಆಸ್ತಿ ವಿಚಾರ ವ್ಯಾಜ್ಯವಿತ್ತು. ಮೊದಲ ಪತ್ನಿ, 2ನೇ ಪತ್ನಿ ಮಕ್ಕಳ ನಡುವೆ ಆಸ್ತಿ ವಿಚಾರಕ್ಕೆ ವ್ಯಾಜ್ಯವಿತ್ತು. ಹೀಗಾಗಿ ಆಸ್ತಿ ಭಾಗದ ವಿಚಾರವಾಗಿ ಕುಟುಂಬ ಕೋರ್ಟ್ ಮೆಟ್ಟಿಲೇರಿತ್ತು. ಮುತ್ತಪ್ಪ ರೈ ಸಾವಿಗೂ ಮುನ್ನ, ಇಬ್ಬರು ಮಕ್ಕಳು, ಸಹೋದರನ ಮಗ, 2ನೇ ಪತ್ನಿ, ಮನೆ ಕೆಲಸಗಾರರು ಸೇರಿ ಎಲ್ಲರಿಗೂ ಆಸ್ತಿ ಭಾಗ ಮಾಡಿ ವಿಲ್ ಬರೆಸಲಾಗಿತ್ತು. ಸದ್ಯ ಎಲ್ಲಾ ಆಯಾಮಗಳಲ್ಲೂ ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.