Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಹವಾಮಾನ ವರದಿ : ಇಂದು ಗದಗ, ಬೆಂಗಳೂರು ರಾಮನಗರ ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾರ್ಭಟ ಜೋರಾಗಿದ್ದು, ಏಪ್ರಿಲ್‌ 30ರಂದು ಬುಧವಾರ ಕೂಡ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ  ಸಾಧ್ಯತೆ ಇದೆ ಎಂದು…

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾರ್ಭಟ ಜೋರಾಗಿದ್ದು, ಏಪ್ರಿಲ್‌ 30ರಂದು ಬುಧವಾರ ಕೂಡ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಧವಾರ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ಮತು ಸುತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 23°C ಇರುವ ಸಾಧ್ಯತೆ ಇದೆ.

ಇನ್ನು ಮೇ 1ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆ, ಬೀದರ್, ಯಾದಗಿರಿ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಶಿವಮೊಗ್ಗ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 2ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಯಾದಗಿರಿ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.

ಮೇ 3ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಮೇ  4ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Editor

Leave a comment