ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಕನ್ನಡದ ಹಾಡು ಕೇಳಿದ್ದಕ್ಕೆ ಪಹಲ್ಗಾಮ್ಗೆ ಹೋಲಿಸಿದ್ದ ಹಿನ್ನೆಲೆ ಗಾಯಕ ಸೋನು ನಿಗಮ್ ವಿರುದ್ಧ ಸ್ಯಾಂಡಲ್ವುಡ್ ಮಹತ್ವದ ನಿರ್ಧಾರ ಕೈಗೊಂಡಿದೆ. ಸೋನು ನಿಗಮ್ ಬ್ಯಾನ್ ವಿಚಾರವಾಗಿ ಇಂದು ಫಿಲ್ಮ್ ಚೇಂಬರ್ನಲ್ಲಿ ಪದಾಧಿಕಾರಿಗಳು, ಸಂಗೀತ ನಿರ್ದೇಶಕರು, ಗಾಯಕರು, ನಿರ್ಮಾಪಕರ ಸಭೆ ನಡೆಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಲಾಯಿತು.
ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ಸೋನು ನಿಗಮ್ಗೆ ತಾತ್ಕಾಲಿಕ ನಿರ್ಬಂಧ ಏರಲು ಫಿಲ್ಮ್ ಚೇಂಬರ್ ನಿರ್ಧಾರ ಮಾಡಿದೆ. ಅಂದ್ರೆ ಸೋನು ನಿಗಮ್ ಕನ್ನಡಿಗರ ಬಳಿ ಕ್ಷಮಾಪಣೆ ಕೇಳಬೇಕು. ಅಲ್ಲಿಯವರೆಗೂ ಕನ್ನಡ ಚಲನಚಿತ್ರರಂಗದಿಂದ ಸೋನು ನಿಗಮ್ ಅವರನ್ನ ದೂರ ಇಡೋದಕ್ಕೆ ಫಿಲ್ಮ್ ಚೇಂಬರ್ ನಿರ್ಧಾರ ಮಾಡಿದೆ.