ಕರುನಾಡು ಘರ್ಜನೆ ಸುದ್ದಿ ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ಮೇ 13 ರಂದು ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ಬ್ರಹ್ಮ ಜಿನಾಲಯ ದೇವಸ್ಥಾನದ ಶಾಶ್ವತ ಚಿತ್ರಾತ್ಮಕ ಮುದ್ರೆ ಹಾಗೂ ಚಿತ್ರ ಅಂಚೆ ಪತ್ರವನ್ನು ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ದಾನಚಿಂತಾಮಣಿ ಅತ್ತಿಮಬ್ಬೆ ಬೀಡಿಗೆ ಹೆಮ್ಮೆಯ ಗರಿ..!
ಭಾರತ ಸರಕಾರ ಸಂಪರ್ಕ, ಮಾಹಿತಿ, ಸಂವಹನ ಸಚಿವಾಲಯ ಹಾಗೂ ಭಾರತೀಯ ಅಂಚೆ ಇಲಾಖೆ ಹಾಗೂ ಗದಗ ವಿಭಾಗೀಯ ಅಂಚೆ ಅಧೀಕ್ಷಕರ ಕಚೇರಿ ಇವುಗಳ ಆಶ್ರಯದಲ್ಲಿ ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿ ಮತ್ತು ಪರಂಪರೆಯನ್ನು ಐತಿಹಾಸಿಕ ಕುರುಹುಗಳನ್ನು ಪ್ರಚಾರದೊಂದಿಗೆ ಪರಿಚಯಿಸಲಾಗುತ್ತಿದೆ.
ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಎಸ್ ರಾಜೇಂದ್ರಕುಮಾರ್,
ಉತ್ತರ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಸುಶೀಲ್ ಕುಮಾರ, ಗದಗ ವಿಭಾಗೀಯ ಅಂಚೆ ಅಧೀಕ್ಷಕರಾದ ಜಯದೇವ ಕಡಗಿ,ರಾಜ್ಯದ ವಿವಿಧ ಭಾಗದ ಅಂಚೆ ಚೀಟಿ ಸಂಗ್ರಹಾಕರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.