Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಮಾಕ್ ಡ್ರಿಲ್ ಪೂರ್ವಭಾವಿ ಸಭೆ ಮೇ 15 ರಂದು ಗದಗ ನಗರದಲ್ಲಿ ಅಣುಕು ಪ್ರದರ್ಶನ.

ಕರುನಾಡು ಘರ್ಜನೆ ಸುದ್ದಿ ಗದಗ 14: ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಪ್ರಕ್ಷÄಬ್ದ ವಾತಾವರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆಯ ಆದೇಶದಂತೆ ಅಭ್ಯಾಸ ಕೈಗೊಳ್ಳಲಾಗುತ್ತಿದ್ದು ಮಾಕ್‌ಡ್ರಿಲ್ (ಅಣುಕು ಪ್ರದರ್ಶನ) ವನ್ನು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ…

ಕರುನಾಡು ಘರ್ಜನೆ ಸುದ್ದಿ ಗದಗ 14: ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಪ್ರಕ್ಷÄಬ್ದ ವಾತಾವರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆಯ ಆದೇಶದಂತೆ ಅಭ್ಯಾಸ ಕೈಗೊಳ್ಳಲಾಗುತ್ತಿದ್ದು ಮಾಕ್‌ಡ್ರಿಲ್ (ಅಣುಕು ಪ್ರದರ್ಶನ) ವನ್ನು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ನಿರ್ದೇಶನ ನೀಡಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜರುಗಿದ ಮಾಕ್ ಡ್ರಿಲ್ ( ಅಣುಕು ಪ್ರದರ್ಶನ) ಏರ್ಪಡಿಸುವ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾಕ್ ಡ್ರಿಲ್ (ಅಣುಕು ಪ್ರದರ್ಶನ ) ವನ್ನು ಗುರುವಾರ (ಮೇ 15 ರಂದು ) ಸಂಜೆ 4 ಗಂಟೆಯಿAದ 7 ಗಂಟೆಯವರೆಗೆ ಗದಗ ನಗರದಲ್ಲಿ ಆಯೋಜಿಸಲಾಗುತ್ತಿದೆ. ಈ ಅಣುಕು ಪ್ರದರ್ಶನದಲ್ಲಿ ನಾಗರಿಕ ಸೇವಾ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯದಿಂದ ತುರ್ತು ಪರಿಸ್ಥಿತಿ ಸಮರ್ಥವಾಗಿ ನಿರ್ವಹಿಸುವ ಬಗ್ಗೆ ಪ್ರಾತ್ಯಕ್ಷಿಕೆ ನಿರ್ವಹಿಸಲಾಗುವುದು. ಸಂಬAಧಿಸಿದ ಇಲಾಖೆಗಳು ತಮಗೆ ವಹಿಸಿದ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ತಿಳಿಸಿದರು.

ಈ ಅಣುಕು ಪ್ರದರ್ಶನದಿಂದ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರೊಂದಿಗೆ ಸಂದಿಗ್ದ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಣೆ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದಂತಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಈ ಅಣುಕು ಪ್ರದರ್ಶನ ಮಾಡುವ ಮೂಲಕ ಪೂರ್ವಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಹೇಳಿದರು.

ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ ಮಾಕ್ ಡ್ರಿಲ್ (ಅಣುಕು ಪ್ರದರ್ಶನ ) ವನ್ನು ಗುರುವಾರ (ಮೇ 15 ರಂದು ) ಸಂಜೆ 4 ಗಂಟೆಯಿAದ 7 ಗಂಟೆಯವರೆಗೆ ಗದಗ ನಗರದಲ್ಲಿ ಆಯೋಜಿಸಲಾಗುತ್ತಿದೆ. ಮಾಕ್‌ಡ್ರಿಲ್ ಮೂಲಕ ವಿವಿಧ ಇಲಾಖೆಗಳು ತಮ್ಮ ಕರ್ತವ್ಯಗಳನ್ನು ನಿಗದಿತ ಸಮಯದಲ್ಲಿ ನಿರ್ವಹಿಸುವ ಬಗ್ಗೆ ಖಚಿತಪಡಿಸಿಕೊಳ್ಳಲಾಗುವುದು ಹಾಗೂ ಅಣುಕು ಪ್ರದರ್ಶನದಲ್ಲಿ ಪರಿಸ್ಥಿತಿ ನಿರ್ವಹಣೆಯಲ್ಲಿ ಆಗುವ ತೊಂದರೆಗಳು ಹಾಗೂ ಲೋಪದೋಷಗಳನ್ನು ಗುರುತಿಸಿ ಸರಿಪಡಿಸಲು ಅವಕಾಶ ದೊರೆತಂತಾಗುತ್ತದೆ.

ನಾಗರಿಕ ಸೇವಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಿಗೆ ಹಾಗೂ ಎನ್‌ಎಸ್‌ಎಸ್ , ಎನ್‌ಸಿಸಿ, ರೆಡ್ ಕ್ರಾಸ್ , ಮಾಜಿ ಸೈನಿಕರ ತಂಡ, ಸ್ವಯಂ ಸೇವಕರು ಒಟ್ಟಾಗಿ ಅಣುಕು ಪ್ರದರ್ಶನದಲ್ಲಿ ಪಾಲ್ಗೊಂಡು ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸAಕದ, ಅಪರ ಜಿಲ್ಲಾಧಿಕಾರಿ ಶ್ರೀಮತಿಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ನಗರಾಬಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಡಿ ವೈ ಎಸ್ ಪಿ ವಿದ್ಯಾನಂದ ನಾಯಕ್, ನಗರಸಭೆ ಪೌರಾಯುಕ್ತ ರಾಜಾರಾಂ ಪವಾರ, ಡಿ ಎಚ್ ಓ ಡಾ. ಎಸ್ ಎಸ್ ನೀಲಗುಂದ, ಡಿಡಿಎಲ್ ಆರ್ ರುದ್ರಣ್ಣ ಗೌಡ ಜಿ.ಜೆ, ಸೇರಿದಂತೆ ಎಲ್ಲ ತಹಶೀಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Editor

Leave a comment