Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ ಗ್ರಾಹಕರ ಹಕ್ಕು ಮತ್ತು ಜವಾಬ್ದಾರಿಗಳ ಕುರಿತು ಜನಜಾಗೃತಿ ಅತ್ಯಗತ್ಯ

ಕರುನಾಡು ಘರ್ಜನೆ ಸುದ್ದಿ ಗದಗ  ಮಾ. 27: ಗ್ರಾಹಕರಿಗೆ ಅವರ ಹಕ್ಕು ಮತ್ತು ಜವಾಬ್ದಾರಿಗಳ ಕುರಿತು ಜನಜಾಗೃತಿ ಮೂಡಿಸುವುದು ವಿಶ್ವ ಗ್ರಾಹಕರ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ತಿಳಿಸಿದರು.   ಜಿಲ್ಲಾಡಳಿತ…

ಕರುನಾಡು ಘರ್ಜನೆ ಸುದ್ದಿ ಗದಗ  ಮಾ. 27: ಗ್ರಾಹಕರಿಗೆ ಅವರ ಹಕ್ಕು ಮತ್ತು ಜವಾಬ್ದಾರಿಗಳ ಕುರಿತು ಜನಜಾಗೃತಿ ಮೂಡಿಸುವುದು ವಿಶ್ವ ಗ್ರಾಹಕರ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ತಿಳಿಸಿದರು.

 

ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಬುಧವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ, ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ “ ಗ್ರಾಹಕರಿಗಾಗಿ ನ್ಯಾಯಯುತ ಮತ್ತು ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆ” ಎಂಬ ಘೋಷವಾಕ್ಯದಡಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

 

ಸಮಾಜದ ಕಟ್ಟಕಡೆಯ ವ್ಯಕ್ತಿಯಿಂದ ಹಿಡಿದು ರಾಷ್ಟ್ರಪತಿಯವರೆಗೆ ಪ್ರತಿಯೊಬ್ಬ ವ್ಯಕ್ತಿಯೂ ಒಂದಿಲ್ಲೊಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ಇಂದಿನ ದಿನಮಾನಗಳಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ( ಕೃತಕ ಬುದ್ದಿಮತ್ತೆ) ಬಳಕೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ತಮಗೆ ಬೇಕಾಗುವಂತಹ ವಸ್ತುಗಳನ್ನು ಖರೀದಿ ಮಾಡಬೇಕಾಗುತ್ತದೆ. ಮೊಬೈಲ್ ಫೋನ್ ಕೂಡ ಕೃತಕ ಬುದ್ಧಿಮತ್ತೆಯ ಒಂದು ಭಾಗವಾಗಿದೆ. ಕೃತಕ ಬುದ್ಧಿಮತ್ತೆ ಸಹಾಯದಿಂದ ವೈದ್ಯಕೀಯ ಲೋಕದಲ್ಲಿಯ ಸವಾಲುಗಳಿಗೆ ಪರಿಹಾರ , ಹವಾಗುಣ ಪರಿಸ್ಥಿತಿ, ರೂಟ್ ಮ್ಯಾಪ್ ಹೀಗೆ ಅನೇಕ ತರಹದ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬಹುದಾಗಿದೆ. ಗ್ರಾಹಕರು ಸಾಮಾಜಿಕ ಜಾಲತಾಣದಲ್ಲಿ ಆನ್‍ಲೈನ್ ಮುಖಾಂತರ ಯಾವುದಾದರೂ ವಸ್ತುಗಳನ್ನು ಖರೀದಿ ಮಾಡಿದ್ದರೆ ಅಂತಹ ಸರಕುಗಳಲ್ಲಿ ಲೋಪದೋಷಗಳು ಕಂಡು ಬಂದರೆ ಅಥವಾ ಸರಬರಾಜುದಾರರು ತಪ್ಪು ಮಾಹಿತಿ ಕೊಟ್ಟಿದ್ದರೆ ಆಗ ಅವರು ಶಿಕ್ಷೆಗೆ ಒಳಗಾಗುತ್ತಾರೆ. ಆದಕಾರಣ ಗ್ರಾಹಕರು ಇಂದಿನ ತಂತ್ರಜ್ಞಾನದ ತಿಳುವಳಿಕೆ ಹೊಂದುವುದು ಹಾಗೂ ಬಳಕೆ ಮಾಡುವುದು ಸಹ ಅಗತ್ಯವಾಗಿದೆ. ಯಾವುದೇ ಲಿಂಗಬೇಧವಿಲ್ಲದೇ ಸಮಾನವಾಗಿ ಹಾಗೂ ಜವಾಬ್ದಾರಿಯುತವಾಗಿ ಗ್ರಾಹಕರಿಗೆ ನ್ಯಾಯ ಒದಗಿಸುವುದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾರ್ಯವಾಗಿದೆ. ಸಾಮಾಜಿಕ ಜವಾಬ್ದಾರಿ ಅರಿತು ಉತ್ಪಾದನೆ ಮತ್ತು ಮಾರಾಟ ಮಾಡುವುದು ಇಂದಿನ ಅಗತ್ಯವಾಗಿದೆ ಎಂದರು.

 

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ವಿಶ್ವ ಗ್ರಾಹಕರ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ವಸ್ತು ಪ್ರದರ್ಶನ ಉದ್ಘಾಟಿಸಿದರು.

 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕೆ.ಗುರುಪ್ರಸಾದ ಅವರು ಮಾತನಾಡಿ 1962 ರ ಮಾರ್ಚ 15 ರಂದು ಅಮೆರಿಕಾದ ಸಂಸತ್ ನಲ್ಲಿ ಅಧ್ಯಕ್ಷರಾದ ಜಾನ್ ಕೆನಡಿಯವರು ಗ್ರಾಹಕರ ಹಕ್ಕುಗಳ ಬಗ್ಗೆ ಪ್ರಸಾಪ ಮಾಡಿದರು. 1986 ರಲ್ಲಿ ಗ್ರಾಹಕರ ರಕ್ಷಣಾ ಕಾಯ್ದೆ ಜಾರಿಗೆ ಬಂದಿತು. 2019 ರಲ್ಲಿ ಗ್ರಾಹಕರ ರಕ್ಷಣಾ ಕಾಯ್ದೆ ಹೊಸದಾಗಿ ಅಧಿನಿಯಮಗೊಳಿಸಲಾಯಿತು. ಮಹಾತ್ಮಾ ಗಾಂಧೀಜಿಯವರು ಗ್ರಾಹಕರೇ ದೇವರೆಂಬ ಮಾತು ಹೇಳಿದ್ದಾರೆ. ಗ್ರಾಹಕರಿಗೆ ವಸ್ತುಗಳನ್ನು ಖರೀದಿಸುವಾಗ ಆಯ್ಕೆ ಮಾಡುವ ಹಕ್ಕು, ಅವುಗಳ ಗುಣಮಟ್ಟಗಳ ಕುರಿತು ತಿಳಿಯುವ ಹಕ್ಕು ಹಾಗೂ ಒಂದು ವೇಳೆ ಮೋಸ ಹೋದರೆ ಪರಿಹಾರ ಪಡೆಯುವ ಹಕ್ಕು ಕೂಡ ಇರುತ್ತದೆ. ಈ ಹಕ್ಕುಗಳ ಕುರಿತು ಗ್ರಾಹಕರು ತಿಳುವಳಿಕೆ ಹೊಂದಬೇಕು ಎಂದು ವಿವರಿಸಿದರು.

 

ಜಿಲ್ಲಾದಿಕಾರಿಗಳ ಕಾನೂನು ಸಲಹೆಗಾರರಾದ ಎಸ್.ಜಿ. ಪಲ್ಲೇದ ಅವರು ಮಾತನಾಡಿ ಗ್ರಾಹಕರಿಗೆ ವಸ್ತುಗಳನ್ನು ಖರೀದಿಸಿದಾಗಮೋಸವಾದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಆದರೆ ಗ್ರಾಹಕರು ಮಾರಾಟಗಾರರ ಮೇಲೆ ವೃಥಾ ಸುಳ್ಳು ಆರೋಪಗಳನ್ನು ಮಾಡಬಾರದು. ನ್ಯಾಯಯುತವಾಗಿ ವರ್ತಿಸಬೇಕಾಗುತ್ತದೆ ಎಂದು ವಿವರಿಸಿದರು.

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ರಾಚಪ್ಪ ಕೆ. ತಾಳಿಕೋಟಿ ಅವರು ಮಾತನಾಡಿ ಈಗ ನಾವೆಲ್ಲ ಆರ್ಟಿಫಿಶಿಯಲ್ ಇಂಟಲಿಜೆನ್ಸಿ ನಲ್ಲಿ ವ್ಯವಹರಿಸುತ್ತಿದ್ದೇವೆ. ಇದರಿಂದ ಕೆಲವೊಂದು ಸಾಧಕ ಬಾಧಕಗಳಿವೆ. ಬ್ಯಾಂಕ್, ಇನ್ಸುರನ್ಸ ಕಂಪನಿಯಲ್ಲಿನ ಸೇವೆಗಳ ಕುರಿತು ಗ್ರಾಹಕರಿಗೆ ನ್ಯೂನತೆಗಳು ಕಂಡುಬಂದಲ್ಲಿ ಅಂತರ್ಜಾಲದ ಮೂಲಕ ಸಂದೇಶಗಳನ್ನು ರವಾನಿಸಿ ಅವುಗಳ ಪ್ರಿಂಟ್ ಕಾಪಿಯನ್ನು ಹಾಗೂ ಸೇವೆಗಳ ರಸೀದಿಯನ್ನು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಹಾಜರುಪಡಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಯಶೋಧಾ ಪಾಟೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಹಕರು ಕಾಲಕ್ಕೆ ತಕ್ಕಂತೆ ಬದಲಾವಣೆ ಹೊಂದಬೇಕು. ಮಾಹಿತಿ ಮತ್ತು ತಂತ್ರಜ್ಞಾನಗಳನ್ನು ಬಳಸಿ ವ್ಯವಹರಿಸಬೇಕಾದ ಅನಿವಾರ್ಯತೆ ಈಗಿನದಾಗಿದೆ. ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ರಾಜು ನಾಮದೇವ ಮೇತ್ರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ.ಐ. ಹಿರೇಮನಿ ಪಾಟೀಲ, ಎಲ್.ಪಿ.ಜಿ ವ್ಯವಸ್ಥಾಪಕರು, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಎಸ್.ಬಿ. ಪೂಜಾರಿ, ವಿವಿಧ ಇಲಾಖೆ ಅಧಿಕಾರಿಗಳು, ನ್ಯಾಯಬೆಲೆ ಅಂಗಡಿಕಾರರು, ಪದವಿ ಪೂರ್ವ ಮತ್ತು ಪದವಿ ವ್ಯಾಸಂಗ ವಿದ್ಯಾರ್ಥಿಗಳು ಹಾಜರಿದ್ದರು.

ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಡಾ.ಹಂಪಣ್ಣ ಸಜ್ಜನ ಸ್ವಾಗತಿಸಿದರು. ಆಹಾರ ಸುರಕ್ಷತಾ ಅಧಿಕಾರಿ ಡಾ. ರಾಜೇಂದ್ರ ಗಡಾದ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Editor

Leave a comment